ಸಾರ್ವಜನಿಕ ವಿರೋಧ ಹಿನ್ನೆಲೆ ; ಮಾಸ್ಕ್ ದಂಡ ಪ್ರಮಾಣ 250ಕ್ಕೆ ಇಳಿಕೆ

07-10-20 04:39 pm       Bangalore Correspondent   ಕರ್ನಾಟಕ

ಮಾಸ್ಕ್ ಧರಿಸದಿದ್ದಲ್ಲಿ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ಕಡಿತಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. 

ಬೆಂಗಳೂರು, ಅ.7: ಕೋವಿಡ್-19 ಸೋಂಕು ತಡೆಗಟ್ಟುವ ಉದ್ದೇಶದಿಂದ ಮಾಸ್ಕ್ ಧರಿಸದಿದ್ದಲ್ಲಿ ವಿಧಿಸಲಾಗುತ್ತಿದ್ದ ದಂಡದ ಪ್ರಮಾಣವನ್ನು ಕಡಿತಗೊಳಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶಿಸಿದ್ದಾರೆ. 

ನಗರ ಪ್ರದೇಶದಲ್ಲಿ ದಂಡದ ಪ್ರಮಾಣವನ್ನು ಒಂದು ಸಾವಿರ ರೂ.ನಿಂದ 250 ರೂ.ಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ.ನಿಂದ 100 ರೂ.ಗೆ ಇಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಮಾಸ್ಕ್‌ ಧಾರಣೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ನಿರ್ಧರಿಸಿದ್ದ ರಾಜ್ಯ ಸರಕಾರ ಇತ್ತೀಚೆಗೆ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದಿದ್ದಲ್ಲಿ 1,000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸಲು ತೀರ್ಮಾನಿಸಿತ್ತು. ಇದಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸರಕಾರ ಇದೀಗ ದಂಡದ ಪ್ರಮಾಣವನ್ನು ಕಡಿತಗೊಳಿಸಿದೆ.