ಬ್ರೇಕಿಂಗ್ ನ್ಯೂಸ್
07-09-22 06:11 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.7: ಬಿಜೆಪಿ ಸರಕಾರ ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮಕ್ಕೆ ಮತ್ತೆ ಗ್ರಹಣ ಬಂದಿದೆ. ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಹಮ್ಮಿಕೊಂಡಿದ್ದ ಜನೋತ್ಸವ ಕಾರ್ಯಕ್ರಮವನ್ನು ಮತ್ತೆ ಮುಂದೂಡಿಕೆ ಮಾಡಲಾಗಿದ್ದು, ಸದ್ಯಕ್ಕೆ ಸೆ.11ರಂದು ಮಾಡಲು ನಿಶ್ಚಯಿಸಲಾಗಿದೆ ಎನ್ನಲಾಗುತ್ತಿದೆ.
ರಾಜ್ಯ ಅರಣ್ಯ ಮತ್ತು ಆಹಾರ ನಾಗರಿಕೆ ಪೂರೈಕೆ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೂರು ದಿನಗಳ ಶೋಕಾಚರಣೆ ಘೋಷಣೆ ಮಾಡಿದ್ದಾರೆ. ಹೀಗಾಗಿ ಜನೋತ್ಸವ ಕಾರ್ಯಕ್ರಮ ಮುಂದೂಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಇದರೊಂದಿಗೆ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಸತತ ಎರಡನೇ ಬಾರಿಗೆ ಮುಂದೂಡಿಕೆ ಮಾಡಿದಂತಾಗಿದೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಮತ್ತು ವಿಧಾನಸಭೆ ಚುನಾವಣೆಗೆ ತಯಾರಿ ನಡೆಸುವ ಉದ್ದೇಶದಲ್ಲಿ ರಾಜ್ಯದ ಏಳು ಕಡೆ ಜನೋತ್ಸವ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸಲಾಗಿತ್ತು. ಮೊದಲ ಜನೋತ್ಸವ ಈ ಬಾರಿ ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ಆಯೋಜನೆಯಾಗಿತ್ತು. ಕಳೆದ ಬಾರಿ ಜುಲೈ 28ರಂದು ಇದೇ ರೀತಿ ಜನೋತ್ಸವ ಕಾರ್ಯಕ್ರಮಕ್ಕೆ ಎಲ್ಲ ಸಿದ್ಧತೆಗಳನ್ನು ನಡೆಸಿ ಕೊನೆಕ್ಷಣದಲ್ಲಿ ರದ್ದು ಪಡಿಸಲಾಗಿತ್ತು.
ಅದೇ ಸಂದರ್ಭದಲ್ಲಿ ಸುಳ್ಯದಲ್ಲಿ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆಗೈದ ಪ್ರಕರಣ ರಾಜ್ಯದಲ್ಲಿ ಸಂಚಲನ ಎಬ್ಬಿಸಿತ್ತು. ಅಲ್ಲದೆ, ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದ್ದರು. ಇದರಿಂದ ಎಚ್ಚೆತ್ತ ಕೇಂದ್ರ ನಾಯಕರು, ರಾಜ್ಯ ಬಿಜೆಪಿ ಮತ್ತು ಸರಕಾರಕ್ಕೆ ಎಚ್ಚರಿಕೆ ರವಾನಿಸಿ ಜನೋತ್ಸವ ರದ್ದುಪಡಿಸುವಂತೆ ಸೂಚಿಸಿದ್ದರು. ಹಾಗಾಗಿ, ಕಾರ್ಯಕ್ರಮ ನಡೆಯುವ ಮುನ್ನಾ ದಿನ ನಡುರಾತ್ರಿಯಲ್ಲಿ ಮುಖ್ಯಮಂತ್ರಿ ಬೊಮ್ಮಾಯಿ ಸುದ್ದಿಗೋಷ್ಠಿ ಕರೆದು ಜನೋತ್ಸವ ನಡೆಸುವುದಿಲ್ಲ ಎಂದು ಹೇಳಿದ್ದರು. ಆಮೂಲಕ ಆ ಘಟನೆ ಬಿಜೆಪಿ ಪಾಲಿಗೆ ತೀವ್ರ ಮುಜುಗರಕ್ಕೂ ಕಾರಣವಾಗಿತ್ತು. ಇದೀಗ ಮತ್ತೆ ಜನೋತ್ಸವ ಕಾರ್ಯಕ್ರಮ ರದ್ದಾಗಿದ್ದು, ದೊಡ್ಡಬಳ್ಳಾಪುರದಲ್ಲಿ ಸಚಿವ ಸುಧಾಕರ್ ನೇತೃತ್ವದಲ್ಲಿ ನಡೆಸುತ್ತಿರುವ ಕಾರ್ಯಕ್ರಮಕ್ಕೆ ಗ್ರಹಣ ಬಡಿದಂತಾಗಿದೆ.

ಭ್ರಷ್ಟಾಚಾರ ಆರೋಪಕ್ಕೀಡಾಗಿರುವ ಆರೋಗ್ಯ ಸಚಿವ ಸುಧಾಕರ್ ತನ್ನ ಕ್ಷೇತ್ರದಲ್ಲಿಯೇ ಮೂರ್ನಾಲ್ಕು ಲಕ್ಷ ಜನರನ್ನು ಸೇರಿಸಿ ದೊಡ್ಡ ಕಾರ್ಯಕ್ರಮ ಏರ್ಪಾಡು ಮಾಡುವ ಮೂಲಕ ಕೇಂದ್ರಕ್ಕೆ ತನ್ನ ಸಾಮರ್ಥ್ಯ ತೋರಿಸುವ ಹುಮ್ಮಸ್ಸಿನಲ್ಲಿದ್ದರು. ಆದರೆ, ಎರಡೆರಡು ಬಾರಿ ಸುಧಾಕರ್ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ವಿಘ್ನ ಎದುರಾಗಿರುವುದು ಕಾಕತಾಳೀಯ ಅಷ್ಟೇ.
The much-publicised ‘Janotsava’ rally scheduled to be held on Thursday at Doddaballapur to mark three years of the BJP in power and Chief Minister Basavaraj Bommai’s first anniversary in office has been postponed for the third time. This time, the postponement is due to Forest, Food & Civil Supplies Minister Umesh Katti’s demise. The ‘Janotsava’ rally will now be held on Sunday, September 11, at Doddaballapur.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm