ಬ್ರೇಕಿಂಗ್ ನ್ಯೂಸ್
07-09-22 08:33 pm HK News Desk ಕರ್ನಾಟಕ
ಧಾರವಾಡ, ಸೆ.7: ಕನ್ನಡ ಭಾಷೆಯಲ್ಲಿ ಚೆಕ್ ಹಾಳೆಯನ್ನು ತುಂಬಿದ್ದಕ್ಕಾಗಿ ಸ್ವೀಕರಿಸಲು ಒಪ್ಪದೆ ನಿರಾಕರಿಸಿದ್ದ ಹಳಿಯಾಳದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಗೆ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 85 ಸಾವಿರ ರೂಪಾಯಿ ದಂಡ ವಿಧಿಸಿದೆ.
ಧಾರವಾಡದ ಇಂಗ್ಲಿಷ್ ಪ್ರಾಧ್ಯಾಪಕ ವಾದಿರಾಜಾಚಾರ್ಯ ಇನಾಮದಾರ ಅವರು ತಮ್ಮ ಖಾತೆಯಲ್ಲಿದ್ದ ಹಣವನ್ನು ಪಡೆಯಲು ಚೆಕ್ ಪುಸ್ತಕವನ್ನು ತುಂಬಿ ಬ್ಯಾಂಕ್ ಶಾಖೆಯಲ್ಲಿ ನೀಡಿದ್ದರು. ಆದರೆ, ವಾದಿರಾಜ ಅವರು ಕನ್ನಡ ಭಾಷೆಯಲ್ಲಿ ಚೆಕ್ ಹಾಳೆಯಲ್ಲಿ ಬರೆದಿದ್ದಕ್ಕಾಗಿ ಶಾಖಾ ವ್ಯವಸ್ಥಾಪಕರು ನಿರಾಕರಣೆ ಮಾಡಿದ್ದರು. ಇದರ ವಿರುದ್ಧ ಧಾರವಾಡದ ಜಿಲ್ಲಾ ಗ್ರಾಹಕರ ವ್ಯಾಜ್ಯ ಪರಿಹಾರ ಆಯೋಗದಲ್ಲಿ ದೂರು ದಾಖಲಿಸಿದ್ದರು.
ಪ್ರಕರಣವನ್ನು ವಿಚಾರಣೆ ನಡೆಸಿದ ಆಯೋಗ ಸದಸ್ಯರು, ಗ್ರಾಹಕರ ಉಳಿತಾಯ ಖಾತೆಯಲ್ಲಿ 9 ಲಕ್ಷ ರೂ. ಹಣ ಇದ್ದರೂ ಕೇವಲ ಆರು ಸಾವಿರ ರೂ. ಪಡೆಯಲು ಚೆಕ್ ನೀಡಿದ್ದರು. ಆದರೆ, ಚೆಕ್ ಹಾಳೆಯನ್ನು ಕನ್ನಡದಲ್ಲಿ ತುಂಬಿದ್ದಕ್ಕಾಗಿ ಅಮಾನ್ಯ ಮಾಡಿದ್ದು ಸೇವಾ ನ್ಯೂನತೆಯೆಂದು ಪರಿಗಣಿಸಿ ಬ್ಯಾಂಕ್ ಶಾಖೆಗೆ ದಂಡ ವಿಧಿಸಿದ್ದಾರೆ. ಬ್ಯಾಂಕ್ ಶಾಖೆಯ ವ್ಯವಸ್ಥಾಪಕರು ದೂರುದಾರರಿಗೆ 85,177 ರೂಪಾಯಿ ದಂಡದ ರೂಪದಲ್ಲಿ ನೀಡುವಂತೆ ಆದೇಶ ಮಾಡಿದ್ದಾರೆ. ಆಯೋಗದ ಅಧ್ಯಕ್ಷ ಈಶಪ್ಪ ಭೂತೆ, ಸದಸ್ಯರಾದ ವಿ.ಅ. ಬೋಳಶೆಟ್ಟಿ ಹಾಗೂ ಪಿ.ಸಿ. ಹಿರೇಮಠ ಈ ತೀರ್ಪು ನೀಡಿದ್ದಾರೆ.
ಬ್ಯಾಂಕಿನಲ್ಲಿ ತ್ರಿಭಾಷಾ ಸೂತ್ರದ ಪ್ರಕಾರ, ಇಂಗ್ಲಿಷ್, ಹಿಂದಿ ಮತ್ತು ಆಯಾ ರಾಜ್ಯಗಳ ಭಾಷೆಯಲ್ಲಿ ಚೆಕ್ ಪುಸ್ತಕ ಇನ್ನಿತರ ವಿಚಾರಗಳಲ್ಲಿ ವ್ಯವಹರಿಸಲು ಅವಕಾಶ ಇರುತ್ತದೆ. ಆದರೆ ಹೆಚ್ಚಿನ ಕಡೆಗಳಲ್ಲಿ ಇಂಗ್ಲಿಷ್ ಭಾಷೆ ಬಳಕೆ ಮಾತ್ರ ಇರುವುದರಿಂದ ಶಾಖಾ ಸಿಬಂದಿ ಕೂಡ ಇಂಗ್ಲಿಷ್ ಭಾಷೆಗೇ ಪ್ರೋತ್ಸಾಹ ನೀಡುತ್ತಾರೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಆಯೋಗದ ತೀರ್ಪು ಮಹತ್ವದ್ದಾಗಿದೆ.
In a significant judgment that will go a long way in the implementation of the three-language policy in banks, the Dharwad District Consumer Redressal Forum has imposed a penalty of ₹85,177 on the Haliyal branch of the State Bank of India for dishonouring a cheque issued in Kannada for a sum of ₹6,000 despite the customer having adequate balance in his savings account.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm