ಬ್ರೇಕಿಂಗ್ ನ್ಯೂಸ್
08-09-22 10:41 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.8: ಬಿಹಾರದ ಪಾಟ್ನಾದಲ್ಲಿ ದಾಖಲಾಗಿದ್ದ ಪ್ರಕರಣ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಗುರುವಾರ ಒಂದೇ ದಿನ ಬಿಹಾರ, ಕರ್ನಾಟಕ, ತಮಿಳುನಾಡಿನ 20 ಕಡೆಗಳಲ್ಲಿ ದಾಳಿ ಕಾರ್ಯಾಚರಣೆ ನಡೆಸಿರುವ ಬಗ್ಗೆ ಮಾಹಿತಿ ನೀಡಿದೆ.
ಬಿಹಾರದಲ್ಲಿ ನಲಂದಾ, ಕತಿಹಾರ್, ಅರಾರಿಯಾ, ಮಧುಬನಿ, ಪಾಟ್ನಾ, ವೈಶಾಲಿ, ದರ್ಭಾಂಗ, ಮುಝಾಫರ್ ಪುರ ಮತ್ತು ಸರಣ್ ಜಿಲ್ಲೆಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ತಮಿಳುನಾಡಿನ ಶಿವಗಂಗಾ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ದಾಳಿ ನಡೆಸಲಾಗಿತ್ತು.
ಬಿಹಾರದ ಪಾಟ್ನಾ ಜಿಲ್ಲೆಯ ಪುಲ್ವಾರಿ ಶರೀಫ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 12ರಂದು ದೇಶ ವಿರೋಧಿ ಚಟುವಟಿಕೆ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಧಾನಿ ಮೋದಿ ಪಾಟ್ನಾಕ್ಕೆ ಭೇಟಿ ನೀಡುವ ಸಂದರ್ಭದಲ್ಲಿಯೇ ದೇಶ ವಿರೋಧಿ ಕೃತ್ಯಕ್ಕೆ ಸಂಚು ನಡೆಸಿದ್ದರು ಅನ್ನುವ ಆರೋಪದಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿದ್ದರು. ಘಟನೆ ಸಂಬಂಧಿಸಿ ಎನ್ಐಎ ತನಿಖೆ ಆರಂಭಿಸಿದ್ದು, ಉತ್ತರ ಪ್ರದೇಶ, ಬಿಹಾರ ಸೇರಿ ವಿವಿಧೆಡೆ ದಾಳಿ ನಡೆಸಿತ್ತು. ಬಂದಿತರು ಎಸ್ಡಿಪಿಐ ಮತ್ತು ಪಿಎಫ್ಐ ಕಾರ್ಯಕರ್ತರು ಅನ್ನುವ ನೆಲೆಯಲ್ಲಿ ತನಿಖೆ ನಡೆದಿತ್ತು.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ರಿಯಾಜ್ ಪರಂಗಿಪೇಟೆ ಎಂಬವರು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದು, ಅಲ್ಲದೆ, ಬಿಹಾರದಲ್ಲಿ ಎಸ್ಡಿಪಿಐ ಪಕ್ಷದ ಉಸ್ತುವಾರಿ ಆಗಿದ್ದಾರೆ. ಬಿಹಾರಕ್ಕೆ ತೆರಳಿ ಪಕ್ಷದ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಬಂಧಿತ ಆರೋಪಿಗಳಿಗೆ ರಿಯಾಜ್ ಪರಂಗಿಪೇಟೆ ಜೊತೆಗೆ ನಂಟು ಇದೆಯೆಂಬ ಆರೋಪದಲ್ಲಿ ಎನ್ಐಎ ಅಧಿಕಾರಿಗಳು ಗುರುವಾರ ಬೆಳಗ್ಗೆ ಬಂಟ್ವಾಳಕ್ಕೆ ಆಗಮಿಸಿ ತನಿಖೆ ಕೈಗೊಂಡಿದ್ದಾರೆ. ದಾಳಿ ವೇಳೆ, ಡಿಜಿಟಲ್ ಸಾಕ್ಷ್ಯವುಳ್ಳ ಮೊಬೈಲ್, ಲ್ಯಾಪ್ ಟಾಪ್, ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಪಾಟ್ನಾ ಘಟನೆ ಸಂಬಂಧ ಎನ್ಐಎ ದೆಹಲಿ ಕಚೇರಿಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರತ್ಯೇಕ ತನಿಖೆ ನಡೆಸುತ್ತಿದ್ದಾರೆ.
The National Investigation Agency is conducting searches across 30 locations in Bihar in connection with its probe into a suspected terror module allegedly linked to the Popular Front of India. Officials told News18 on condition of anonymity that the outfit is alleged to be running “arms training camps under the guise of martial arts training".
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 10:37 pm
Mangalore Correspondent
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm