ಬ್ರೇಕಿಂಗ್ ನ್ಯೂಸ್
09-09-22 02:49 pm HK News Desk ಕರ್ನಾಟಕ
ಮೈಸೂರು, ಸೆ.9 : ಖ್ಯಾತ ನಟ ಪುನೀತ್ ರಾಜಕುಮಾರ್ ಅನುವಂಶೀಯ ಕಾರಣಗಳಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿದರು. ಪುನೀತ್ ಸಹೋದರರಿಗೂ ಹೃದಯ ಸಂಬಂಧಿ ತೊಂದರೆಗಳಿವೆ. ರಾಘವೇಂದ್ರ, ಶಿವರಾಜಕುಮಾರ್ ಅವರಿಗೂ ಹೃದಯ ತೊಂದರೆಗಳಿವೆ. ಹಾಗಾಗಿ ಪುನೀತ್ ಸಾವಿಗೆ ಅನುವಂಶೀಯ ಹಿನ್ನೆಲೆಯೇ ಕಾರಣ ಎಂದು ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ, ಖ್ಯಾತ ಹೃದಯ ತಜ್ಞ ಡಾ.ಸಿ.ಎನ್ ಮಂಜುನಾಥ್ ಹೇಳಿದ್ದಾರೆ.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪುನೀತ್ ರಾಜ್ಕುಮಾರ್ ಸಾವಿನ ಬಗ್ಗೆ ಕೇಳಿದ ಪ್ರಶ್ನೆಗೆ, ಕುಟುಂಬದ ಅನುವಂಶಿಕ ಹಿನ್ನೆಲೆಯೇ ಕಾರಣ ಎಂದು ಹೇಳಿದರು.
ನಮ್ಮ ದೇಶದಲ್ಲಿ 50% ಸಾವುಗಳು ಹೃದಯಾಘಾತ, ಹೃದಯ ಸಂಬಂಧಿ ಕಾಯಿಲೆ, ಸಕ್ಕರೆ ಕಾಯಿಲೆ, ಅಧಿಕ ರಕ್ತದೊತ್ತಡ, ಕ್ಯಾನ್ಸರ್ ರೋಗದಿಂದ ಸಂಭವಿಸುತ್ತಿದೆ. ಇದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಒಂಟಿತನದಿಂದ ಸಾವನ್ನಪ್ಪುವವರ ಸಂಖ್ಯೆಯೂ ಹೆಚ್ಚುತ್ತಿದೆ. ಮೊಬೈಲ್, ಟಿವಿ ಗೀಳಿಗೆ ಅಂಟಿಕೊಂಡು ಬಹುಬೇಗನೆ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಮೊದಲೆಲ್ಲಾ ವಯಸ್ಸಾದ ತಂದೆ ತಾಯಿಯರನ್ನು ಮಕ್ಕಳು ಆಸ್ಪತ್ರೆಗೆ ಕರೆ ತರುತ್ತಿದ್ದರು. ಆದರೀಗ ತಂದೆ ತಾಯಿಯೇ ಅವರ ಮಕ್ಕಳನ್ನು ಚಿಕಿತ್ಸೆಗೆ ಕರೆತರುವ ಪರಿಸ್ಥಿತಿ ನಿರ್ಮಾಣವಾಗಿದೆ. ಜನರ ಜೀವನ ಶೈಲಿ ಬದಲಾಗಿದ್ದು, ಇದಕ್ಕೆ ನಗರ ಪಟ್ಟಣಗಳು, ಹಳ್ಳಿಗಳು ಹೊರತಾಗಿಲ್ಲ. ಯುವ ಭಾರತೀಯರ, ಮಧ್ಯ ವಯಸ್ಕರ ಹೃದಯದ ಆರೋಗ್ಯ ಚೆನ್ನಾಗಿಲ್ಲ. ಹೃದ್ರೋಗಕ್ಕೆ ತುತ್ತಾಗುತ್ತಿರುವ ವಯಸ್ಕರಲ್ಲಿ ಶೇಕಡ 50 ರಷ್ಟು ಧೂಮಪಾನಿಗಳಾಗಿರುತ್ತಾರೆ. ಕೆಲವರಿಗೆ ಅನುವಂಶೀಯವಾಗಿಯೂ ಹೃದಯಾಘಾತ ಆಗುವ ಸಂಭವವಿದೆ. ಅಂತಹ ಕುಟುಂಬ ಸದಸ್ಯರು ಎಚ್ಚರಿಕೆ ವಹಿಸಬೇಕು. ಬದಲಾದ ಜೀವನ ಶೈಲಿಯಿಂದಾಗಿ ಅತಿಯಾದ ಒತ್ತಡದಿಂದ ಹೃದಯಾಘಾತ ಸಂಭವಿಸುತ್ತಿದೆ ಎಂದು ಮಂಜುನಾಥ್ ಹೇಳಿದರು.
ವಾಯುಮಾಲಿನ್ಯ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತಿದೆ. ವಾಹನಗಳು ಹೊರಸೂಸುವ ಹೊಗೆ, ಕಾರ್ಖಾನೆಗಳು ಹೊರಸೂಸುವ ಹೊಗೆಯಿಂದಾಗಿ ವಾಯು ಮಾಲಿನ್ಯ ಹೆಚ್ಚಾಗುತ್ತಿದೆ. ಮಾಲಿನ್ಯವಾದ ಗಾಳಿಯನ್ನು ಉಸಿರಾಡುವುದರಿಂದ ಹೃದಯಾಘಾತಕ್ಕೆ ಕಾರಣವಾಗುತ್ತಿದೆ ಎಂದು ಹೇಳಿದರು. ಹೃದಯಾಘಾತ ಸಂಭವಿಸಿದಾಗ ತಡ ಮಾಡದೇ ಚಿಕಿತ್ಸೆ ಪಡೆಯಬೇಕು. ಮೂವತ್ತು ನಿಮಿಷ ತಡಮಾಡಿದರೆ ಸಾವಿನ ಪ್ರಮಾಣ 7% ಹೆಚ್ಚುತ್ತಾ ಹೋಗುತ್ತದೆ. ಕೂಡಲೇ ಪ್ರಾಥಮಿಕ ಚಿಕಿತ್ಸೆ ಪಡೆಯುವುದರಿಂದ ಸಾವನ್ನು ತಡೆಯಬಹುದು. 35 ವರ್ಷ ದಾಟಿದ ಪುರುಷರು, 45 ವರ್ಷ ದಾಟಿದ ಮಹಿಳೆಯರು ಸಕಾಲಕ್ಕೆ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಡಾ. ಮಂಜುನಾಥ್ ಸಲಹೆ ನೀಡಿದ್ದಾರೆ.
Actor Puneeth Rajkumar death of heart attack was due to family heredity issue says cardiologist doctor
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 12:00 pm
HK News Desk
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm