ಬ್ರೇಕಿಂಗ್ ನ್ಯೂಸ್
09-09-22 04:17 pm HK News Desk ಕರ್ನಾಟಕ
ತುಮಕೂರು, ಸೆ.9: 2014-15ನೇ ಸಾಲಿನ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆಸಲಾಗಿದೆ ಎನ್ನುವ ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತವರು ಜಿಲ್ಲೆ ತುಮಕೂರಿನಲ್ಲೇ 10 ಶಿಕ್ಷಕರನ್ನು ವಶಕ್ಕೆ ಪಡೆದಿದ್ದಾರೆ.
ಅಕ್ರಮ ನೇಮಕಾತಿ ಆರೋಪದಡಿ 10 ಶಿಕ್ಷಕರನ್ನ ವಶಕ್ಕೆ ಪಡೆದಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನಕಣಿವೆ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ಕಮ್ಲಾಪುರದ ಶಾಲೆಯ ಶಿಕ್ಷಕ ಹಾಗೂ ಕುಣಿಗಲ್ ತಾಲ್ಲೂಕಿನ ಕೊಡವತ್ತಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ, ನಾಗಸಂದ್ರ ಪ್ರೌಢ ಶಾಲೆಯ ಶಿಕ್ಷಕಿ, ಅಮೃತೂರಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಶಿಕ್ಷಕ, ಹೊಳಗೇರಿಪುರ ಶಾಲೆಯ ಶಿಕ್ಷಕ ಹಾಗೂ ತಿಪಟೂರು ತಾಲೂಕಿನ ಅಲ್ಬೂರು ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ, ತುರುವೇಕೆರೆ ತಾಲೂಕಿನ ಹುಲಿಕಲ್ ಸರಕಾರಿ ಪ್ರೌಢಶಾಲೆಯ ಶಿಕ್ಷಕ, ಹುಲಿಕೆರೆ ಶಾಲೆಯ ಶಿಕ್ಷಕ ಹಾಗೂ ಗುಬ್ಬಿ ತಾಲೂಕಿನ ಕೆ.ಮತ್ತಿಘಟ್ಟ ಶಾಲೆಯ ಶಿಕ್ಷಕ ಸೇರಿದಂತೆ 10 ಶಾಲೆಗಳಿಂದ ತಲಾ ಓರ್ವ ಶಿಕ್ಷಕರನ್ನ ಸಿಐಡಿ ವಶಕ್ಕೆ ಪಡೆದಿದೆ. ಅವರನ್ನು ಬೆಂಗಳೂರಿನ ಸಿಐಡಿ ಕಛೇರಿಗೆ ಕರೆದೊಯ್ದಿರುವ ಸಿಐಡಿ ಅಧಿಕಾರಿಗಳು ಅಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.
2014-15 ರಲ್ಲಿ ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನೇಮಕಾತಿ ಆಗಿದೆಯೆಂದು ಆರೋಪಿಸಿ ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ ವತಿಯಿಂದ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೆಲವು ದಿನಗಳ ಹಿಂದೆ ರಾಜ್ಯ ಸರಕಾರ ಪ್ರಕರಣವನ್ನ ಸಿಐಡಿಗೆ ವರ್ಗಾವಣೆ ಮಾಡಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ 10 ಶಿಕ್ಷಕರನ್ನ ವಶಕ್ಕೆ ಪಡೆದಿದ್ದಾರೆ. ಇತ್ತೀಚೆಗಷ್ಟೇ ಕಾಂಗ್ರೆಸ್ ಅವಧಿಯಲ್ಲಿ ಆಗಿದ್ದ ಪ್ರಕರಣಗಳನ್ನು ರೀ ಓಪನ್ ಮಾಡಲಾಗುವುದು ಎಂದಿದ್ದರು.
The Karnataka Police’s criminal investigation department (CID) arrested 10 education officials of the school education and literacy department Tuesday in connection with the alleged irregularities in teacher recruitment process in 2012-13 and 2014-15. The irregularities were part of recruiting grade-2 assistant teachers for government high schools in Karnataka.
05-02-25 06:39 pm
HK News Desk
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
Bangalore RTO, Luxury car tax: ತೆರಿಗೆ ಪಾವತಿಸದ...
04-02-25 11:04 pm
04-02-25 10:49 pm
HK News Desk
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
Conspiracy, Kumbh stampede: ಮಹಾ ಕುಂಭಮೇಳದಲ್ಲಿ...
03-02-25 02:57 pm
NHAI fined toll tax: ಅಂಗವಿಕಲ ಮಹಿಳೆಗೆ 40 ರೂ. ಟ...
01-02-25 09:51 pm
05-02-25 10:51 pm
Mangalore Correspondent
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
Mangalore gun misfire, congress, chittaranjan...
04-02-25 07:47 pm
06-02-25 12:00 pm
HK News Desk
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm
Ullal Police Station, Mangalore, Crime: ಪಿಎಸ್...
03-02-25 05:46 pm
Bangalore honeytrap case, Crime: ಮದುವೆಗೆ ವಧು...
02-02-25 09:00 pm
Mangalore Crime, Bantwal Toll, Kodikere Gang:...
01-02-25 10:11 pm