ಪ್ರವೀಣ್ ನೆಟ್ಟಾರು ಕುಟುಂಬಸ್ಥರಿಗೆ ನನ್ನ ಕಚೇರಿಯಲ್ಲೇ ಉದ್ಯೋಗ ಕೊಡಿಸುತ್ತೇನೆ ; ಮುಖ್ಯಮಂತ್ರಿ

10-09-22 04:22 pm       Bangalore Correspondent   ಕರ್ನಾಟಕ

ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಯವರಿಗೆ ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಬೆಂಗಳೂರು, ಸೆ.10: ಇತ್ತೀಚೆಗೆ ದುಷ್ಕರ್ಮಿಗಳಿಂದ ಕೊಲೆಯಾಗಿದ್ದ ಸುಳ್ಯದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಯವರಿಗೆ ತನ್ನ ಕಚೇರಿಯಲ್ಲೇ ಉದ್ಯೋಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿರುವ ಜನ ಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಬೊಮ್ಮಾಯಿ, ನಮ್ಮ ಪಕ್ಷಕ್ಕೆ ಕಾರ್ಯಕರ್ತರೇ ಜೀವಾಳ. ಕಾರ್ಯಕರ್ತರೇ ನಮ್ಮ ಪಕ್ಷದ ಶಕ್ತಿ. ಅವರನ್ನು ಬಿಟ್ಟು ನಮ್ಮ ಪಕ್ಷ ಇಲ್ಲ. ಕೊಲೆಯಾದ ಎಂದು ಪ್ರವೀಣ್ ಮನೆಯವರು ನೊಂದುಕೊಳ್ಳಬೇಕಿಲ್ಲ. ಆತನ ಕುಟುಂಬದ ಒಬ್ಬರಿಗೆ ನನ್ನ ಕಚೇರಿಯಲ್ಲೇ ನೌಕರಿ ಕೊಡಿಸುತ್ತೇನೆ ಎಂದು ಹೇಳಿದ್ದಾರೆ.

Karnataka CM Bommai opens up, says leadership change talks 'baseless' |  Deccan Herald

ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಕೊಲ್ಲಲಾಗಿತ್ತು. ಆನಂತರ, ಈ ಪ್ರಕರಣದ ಬಗ್ಗೆ ರಾಜ್ಯಾದ್ಯಂತ ಭಾರೀ ಆಕ್ರೋಶವೂ ವ್ಯಕ್ತವಾಗಿತ್ತು. ರಾಜ್ಯ ಸರಕಾರದ ವಿರುದ್ಧವೇ ಬಿಜೆಪಿ ಕಾರ್ಯಕರ್ತರು ತಿರುಗಿಬಿದ್ದಿದ್ದರು. ಇದರ ಬೆನ್ನಲ್ಲೇ ಪ್ರಕರಣವನ್ನು ಎನ್ಐಎ ತನಿಖೆಗೆ ರಾಜ್ಯ ಸರಕಾರ ವಹಿಸಿತ್ತು. ಎನ್ಐಎ ಅಧಿಕಾರಿಗಳು ಈಗ ಪ್ರಕರಣದಲ್ಲಿ ಆರೋಪಿಗಳಿಗೆ ಸಹಕರಿಸಿದವರ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

Sullivan Praveen Nettaru murder case, family to get job in CM office says Bommai