ಬ್ರೇಕಿಂಗ್ ನ್ಯೂಸ್
11-09-22 10:26 pm HK News Desk ಕರ್ನಾಟಕ
ಹೈದರಾಬಾದ್, ಸೆ.1: ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಕ್ಕೆದುರಾಗಿ ಶೀಘ್ರದಲ್ಲೇ ಪರ್ಯಾಯ ರಾಷ್ಟ್ರೀಯ ಪಕ್ಷವೊಂದನ್ನು ಸ್ಥಾಪಿಸಲಾಗುವುದು ಎಂದು ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್ ಹೇಳಿದ್ದಾರೆ.
ಭಾನುವಾರ ಮಧ್ಯಾಹ್ನ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ಡಿ ಕುಮಾರಸ್ವಾಮಿ ಅವರು ದಿಢೀರ್ ಆಗಿ ಹೈದರಾಬಾದಿಗೆ ತೆರಳಿ ಚಂದ್ರಶೇಖರ್ ರಾವ್ ಅವರ ಜೊತೆಗೆ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಮುಂದಿನ ಚುನಾವಣೆಗೂ ಮುನ್ನ ಮಹತ್ವದ ಬೆಳವಣಿಗೆ ಆಗುವ ಬಗ್ಗೆ ಇಬ್ಬರ ಭೇಟಿ ಕುತೂಹಲ ಮೂಡಿಸಿದೆ. ಇವರಿಬ್ಬರ ಮಾತುಕತೆಯ ಬೆನ್ನಲ್ಲೇ ಚಂದ್ರಶೇಖರ್ ರಾವ್, ರಾಷ್ಟ್ರೀಯ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದಾರೆ.
ಅಕ್ಟೋಬರ್ ಮೊದಲ ವಾರದಲ್ಲಿ ಭಾರತ್ ರಾಷ್ಟ್ರ ಸಮಿತಿ ಹೆಸರಲ್ಲಿ ರಾಷ್ಟ್ರೀಯ ಪಕ್ಷ ಸ್ಥಾಪಿಸುವ ಸುಳಿವು ನೀಡಿದ್ದಾರೆ. ಇದಕ್ಕಾಗಿ ದೇಶಾದ್ಯಂತ ಬಿಜೆಪಿ ಮತ್ತು ಕಾಂಗ್ರೆಸ್ ಹೊರತಾದ ಪಕ್ಷಗಳ ನಾಯಕರ ಜೊತೆಗೆ ಕೆಸಿಆರ್ ಮಾತುಕತೆಯನ್ನೂ ನಡೆಸಿದ್ದಾರೆ. ತೆಲಂಗಾಣ ರಾಷ್ಟ್ರ ಸಮಿತಿ ಪಕ್ಷದ ಮುಖ್ಯಸ್ಥರೂ ಆಗಿರುವ ಚಂದ್ರಶೇಖರ್ ರಾವ್ ಪಕ್ಷದ ವತಿಯಿಂದಲೇ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆಗಾಗಿ ಆಂದೋಲನ ರಚಿಸುವುದಕ್ಕೂ ಮುನ್ನ ಕೈಗೊಂಡಿದ್ದ ರೀತಿಯಲ್ಲೇ ರಾಷ್ಟ್ರೀಯ ಕಾರ್ಯಸೂಚಿ ರೂಪಿಸಲಿದ್ದು, ಅದಕ್ಕಾಗಿ ಸಮಾಜದ ವಿವಿಧ ಸ್ತರಗಳ ಪ್ರಮುಖರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ. ಅರ್ಥ ಶಾಸ್ತ್ರಜ್ಞರು, ವಿಚಾರವಾದಿಗಳು ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷದ ಘೋಷಣೆ ಆಗಲಿದೆ. ಅದಕ್ಕಾಗಿ ರೂಪುರೇಷೆ ಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿಕೆಯಲ್ಲಿ ಕೆಸಿಆರ್ ತಿಳಿಸಿದ್ದಾರೆ.
ತೆಲಂಗಾಣ ಮತ್ತು ಕರ್ನಾಟಕ ರಾಜ್ಯಗಳಿಗೆ ಸಂಬಂಧಿಸಿದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕೆಟಿ ರಾಮ ರಾವ್ ನೀಡಿದ ಆತಿಥ್ಯಕ್ಕೆ ಋಣಿಯಾಗಿದ್ದೇನೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ. ಕೆಸಿಆರ್ ಭೇಟಿಗೂ ಮುನ್ನ ಟಿಆರ್ ಎಸ್ ಕಾರ್ಯಾಧ್ಯಕ್ಷ ಕೆ.ಟಿ ರಾಮ ರಾವ್ ಅವರನ್ನೂ ಭೇಟಿ ಮಾಡಿ ಚರ್ಚೆ ನಡೆಸಿದ್ದರು.
As new political equations emerge in the run-up to the 2024 general elections, Former Karnataka Chief Minister and Janata Dal Secular (JDS) leader HD Kumaraswamy met Telangana Chief Minister K Chandrashekar Rao (KCR) in Hyderabad today to discuss the prevailing political situation in the country and KCR's plan to launch a national-level party.
25-12-25 12:12 pm
HK News Desk
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm