ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು ; ಘಟನೆಗೆ ಸರ್ಕಾರವೇ ಹೊಣೆ, ಆರೋಗ್ಯ ಸಚಿವರೇ ಜವಾಬ್ದಾರಿ ; ವಿಧಾನಸಭೆಯಲ್ಲಿ ಸಿದ್ದರಾಮಯ್ಯ ಆಕ್ರೋಶ 

15-09-22 02:35 pm       Bengalore Correspondent   ಕರ್ನಾಟಕ

ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವರೇ ಜವಾಬ್ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಬೆಂಗಳೂರು, ಸೆ.15: ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿನ ರೋಗಿಗಳ ದುರಂತ ಸಾವು ಪ್ರಕರಣ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಮೂವರು ರೋಗಿಗಳ ಸಾವಿಗೆ ಸರ್ಕಾರವೇ ನೇರ ಹೊಣೆ, ಆರೋಗ್ಯ ಮತ್ತು ವೈದ್ಯಕೀಯ ಸಚಿವರೇ ಜವಾಬ್ದಾರಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ವಿಧಾನಸಭೆ ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತಗೊಂಡ ಪರಿಣಾಮ ನಿನ್ನೆ ರಾತ್ರಿ ಮೂವರು ರೋಗಿಗಳು ಸಾವನ್ನಪ್ಪಿದ್ದಾರೆ. ವಿದ್ಯುತ್ ಇಲ್ಲದ ಸಂದರ್ಭದಲ್ಲಿ ಜನರೇಟರ್ ಕಾರ್ಯ ನಿರ್ವಹಿಸಿಲ್ಲ. ಹಾಗಾಗಿ ವೆಂಟಿಲೇಟರ್ ಸಮಸ್ಯೆಯಾಗಿದೆ. ಐಸಿಯುನಲ್ಲಿದ್ದ ಮೂವರು ರೋಗಿಗಳು ಮೃತಪಟ್ಟಿದ್ದಾರೆ. ಈ ದುರಂತಕ್ಕೆ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು, ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರೇ ನೇರ ಜವಾಬ್ದಾರಿ. ಸರ್ಕಾರದ ಬೇಜವಾಬ್ದಾರಿಯಿಂದಾಗಿಯೇ ಈ ದುರಂತ ಸಂಭವಿಸಿದೆ. ಘಟನೆ ಹೊಣೆ ಹೊತ್ತು ಮೊದಲು ಆರೋಗ್ಯ ಸಚಿವರು, ವೈದ್ಯಕೀಯ ಶಿಕ್ಷಣ ಸಚಿವರು ರಾಜೀನಾಮೆ ಕೊಡಲಿ ಎಂದು ಆಗ್ರಹಿಸಿದರು.

Vijaynagar Institute of Medical Sciences Bellary 2022-23: Fees

Differences between BJP MP, Madhuswamy in Tumakuru come to fore | Deccan  Herald

Sriramulu is BC, not ST, says KRBHS president

ಸಿದ್ದರಾಮಯ್ಯ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವ ಮಾಧುಸ್ವಾಮಿ ಹಾಗೂ ಶ್ರೀರಾಮುಲು, ಸರ್ಕಾರ ಹೇಗೆ ಜವಾಬ್ದಾರಿಯಾಗಲು ಸಾಧ್ಯ? ನಿಮ್ಮ ಕಾಲದಲ್ಲಿ ನಡೆದ ರೋಗಿಗಳ ಸಾವಿಗೆ ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿತ್ತು ಎಂದು ಪ್ರಶ್ನಿಸಿದರು. ವಿದ್ಯುತ್ ಸಮಸ್ಯೆಯಿಂದ ರೋಗಿಗಳು ಸಾವನ್ನಪ್ಪಿಲ್ಲ ಎಂದು ಸಮಜಾಯಿಷಿ ನೀಡಿದರು. ಇದಕ್ಕೆ ಕೆಂಡಾಮಂಡಲರಾದ ಸಿದ್ದರಾಮಯ್ಯ, ಕರೆಂಟ್ ಹೋಗಿದ್ದರಿಂದ ಜನರೇಟರ್ ಕೂಡ ಕಾರ್ಯ ನಿರ್ವಹಿಸಿಲ್ಲ. ಇದರಿಂದಾಗಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಚಿಕಿತ್ಸೆ ಸಾಧ್ಯವಾಗಿಲ್ಲ. ಸಾವಿನ ಜೊತೆ ಚೆಲ್ಲಾಟವಾಡುತ್ತಿದ್ದೀರಾ? ಮೊದಲು ತಪ್ಪನ್ನು ಒಪ್ಪಿಕೊಳ್ಳಿ ಎಂದು ಗುಡುಗಿದರು. ಮೃತರ ಕುಟುಂಬಕ್ಕೆ 25 ಲಕ್ಷ ಪರಿಹಾರ ನೀಡುವಂತೆ ಒತ್ತಾಯಿಸಿದರು.

Two patients admitted to the Intensive Care Unit (ICU) of Vijayanagar Institute of Medical Sciences (VIMS) in Karnataka’s Ballari died Wednesday, reportedly after a power cut in the hospital.