ಅಕ್ರಮ ಗಣಿಗಾರಿಕೆ ; ಸಾಕ್ಷಿಗಳಿಗೆ ಬೆದರಿಕೆ, ಜನಾರ್ದನ ರೆಡ್ಡಿಗೆ ಮತ್ತೆ ಸಂಕಷ್ಟ, ಜಾಮೀನು ರದ್ದತಿಗೆ ಸುಪ್ರೀಂ ಕೋರ್ಟಿಗೆ ಸಿಬಿಐ ಅರ್ಜಿ 

16-09-22 12:17 pm       HK News Desk   ಕರ್ನಾಟಕ

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಅವರಿಗೆ ನೀಡಿರುವ ಷರತ್ತಿನ ಜಾಮೀನು ರದ್ದುಗೊಳಿಸುವಂತೆ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

ಬೆಂಗಳೂರು, ಸೆ.16 : ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮತ್ತೆ ಸಂಕಷ್ಟಕ್ಕೀಡಾಗಿದ್ದಾರೆ. ಗಾಲಿ ಜನಾರ್ದನ ರೆಡ್ಡಿ ಅವರಿಗೆ ನೀಡಿರುವ ಷರತ್ತಿನ ಜಾಮೀನು ರದ್ದುಗೊಳಿಸುವಂತೆ ಸಿಬಿಐ ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. 

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಸಾಕ್ಷಿಗಳು ಜನಾರ್ದನ ರೆಡ್ಡಿ ಪ್ರಭಾವದಿಂದಾಗಿ ಪ್ರಕರಣವನ್ನು ಅಡ್ಡದಾರಿ ಹಿಡಿಯುವಂತೆ ಮಾಡುತ್ತಿವೆ. ಹೀಗಾಗಿ ರೆಡ್ಡಿ ಅವರನ್ನು ಬಳ್ಳಾರಿಯಿಂದ ಹೊರಗೆ ಕಳುಹಿಸುವಂತೆ ಸಿಬಿಐ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದೆ. ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಎ-2 ಆರೋಪಿ ಆಗಿರುವ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಹತ್ತು ವರ್ಷಗಳ ಬಳಿಕ ಬಳ್ಳಾರಿ ಪ್ರವೇಶಕ್ಕೆ  ಸುಪ್ರೀಂ ಕೋರ್ಟ್ ಕಳೆದ ವರ್ಷ ಆಗಸ್ಟ್ 19ರಂದು ಅವಕಾಶ ನೀಡಿತ್ತು. 

Supreme Court: Latest news, Updates, Photos, Videos and more.

ಆದರೆ ಬಳ್ಳಾರಿಯಲ್ಲಿ ಬೀಡುಬಿಟ್ಟಿರುವ ಗಾಲಿ ಜನಾರ್ದನರೆಡ್ಡಿ ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಪ್ರಧಾನ ಸಾಕ್ಷಿ ಶ್ಯಾಮಪ್ರಸಾದ್ ಗೆ ಬೆದರಿಕೆ ಕರೆಗಳು ಬಂದಿವೆ. ಅವರಿಗೆ ಗಾಲಿ ಜನಾರ್ದನ ರೆಡ್ಡಿ ಅವರಿಂದ ಸಂದೇಶ ಬಂದಿದೆ ಎಂದು ಸಿಬಿಐ ಅಧಿಕಾರಿಗಳು ಕೋರ್ಟಿನಲ್ಲಿ ಅಫಿಡವಿಟ್‌ನಲ್ಲಿ ತಿಳಿಸಿದ್ದಾರೆ. ರಕ್ಷಣೆ ನೀಡುವಂತೆ ಸಿಬಿಐ ನ್ಯಾಯಾಲಯಕ್ಕೆ ಶ್ಯಾಮ್ ಪ್ರಸಾದ್ ಮನವಿ ಮಾಡಿದ್ದಾರೆ. ಮತ್ತೊಬ್ಬ ಸಾಕ್ಷಿದಾರರಿಗೂ ಬಂದಿರುವ ಬೆದರಿಕೆಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. 

CBI raids 40 locations in NGO bribes case, detains 7 Home Ministry officials

2007ರಂದು ಗಾಲಿ ಜನಾರ್ದನ್ ರೆಡ್ಡಿ ಒಡೆತನದ ಓಬಳಾಪುರಂ ಮೈನಿಂಗ್ ಕಂಪನಿ (ಒಎಂಸಿ) ಮೇಲೆ ನಡೆದಿದ್ದ ಆದಾಯ ತೆರಿಗೆ ಇಲಾಖೆ ದಾಳಿಯಲ್ಲಿ 18.75 ಕೋಟಿ ರೂಪಾಯಿ ತೆರಿಗೆ ವಂಚನೆ  ಕಂಡುಬಂದಿತ್ತು. ಇದಲ್ಲದೆ, ಕರ್ನಾಟಕ ಲೋಕಾಯುಕ್ತದಲ್ಲೂ ಪ್ರಕರಣ ದಾಖಲಾಗಿ ರೆಡ್ಡಿ ಜೈಲು ಪಾಲಾಗಿದ್ದರು. ಆನಂತರ ಸಿಬಿಐ ಮತ್ತು ಇಡಿ ತನಿಖೆ ಆರಂಭಗೊಂಡಿತ್ತು.

The Supreme Court on Wednesday said that the 12-year delay in proceeding with the trial against former Karnataka minister Gali Janardhan Reddy in a serious offence involving illegal mining amounts to a “travesty of justice” and demanded a report from the trial judge on why the matter has not proceeded despite a clear direction from the top court a year ago to expedite the trial.