ರಾಜ್ಯದಲ್ಲಿ 4752 ಹೊಸ ಕೊರೋನಾ ಪ್ರಕರಣಗಳ ಪತ್ತೆ, 98 ಜನ ಸಾವು!

03-08-20 04:20 pm       Bangalore Correspondent   ಕರ್ನಾಟಕ

ರಾಜ್ಯ ಇಂದು ಒಂದೇ ದಿನ 4752 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿಕೆಯಾಗಿದೆ.

ರಾಜ್ಯ ಇಂದು ಒಂದೇ ದಿನ 4752 ಜನರಲ್ಲಿ ಕೊರೋನಾ ಸೋಂಕು ಕಂಡುಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,39,571ಕ್ಕೆ ಏರಿಕೆಯಾಗಿದೆ. ಅಲ್ಲದೆ, 98 ಜನ ಮೃತಪಟ್ಟಿದ್ದು ಸಾವಿನ ಸಂಖ್ಯೆಯೂ 2594ಕ್ಕೆ ಏರಿಕೆಯಾಗಿದೆ. 

ಲಾಕ್‌ಡೌನ್‌ ಸಡಿಲಿಕೆ ಆರಂಭವಾದ ನಂತರ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಊಹೆಗೂ ಮೀರಿ ಏರಿಕೆಯಾಗುತ್ತಲೇ ಇದೆ. ಸರಾಸರಿಯಾಗಿ ಪ್ರತಿದಿನ ನಾಲ್ಕು ಸಾವಿರಕ್ಕೂ ಅಧಿಕ ಈ ಸೋಂಕಿಗೆ ತುತ್ತಾಗುತ್ತಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ರಾಜ್ಯಾದ್ಯಂತ 4,776 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು ಬೆಂಗಳೂರಿನಲ್ಲಿ 2693 ಜನ ಗುಣಮುಖರಾಗಿ ಮನೆಗೆ ತೆರಳಿರುವುದು ತುಸು ನೆಮ್ಮದಿ ನೀಡಿದೆ. ಆದರೆ, 629 ಸೋಂಕಿತರು ಐಸಿಯುಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.