ಎಸ್ಸೆಂ ಕೃಷ್ಣ ಆಸ್ಪತ್ರೆಗೆ ದಾಖಲು ; ಅನಾರೋಗ್ಯದ ಬಗ್ಗೆ ವದಂತಿ ಹರಡಿಸದಿರಿ ಎಂದು ಮನವಿ 

25-09-22 02:43 pm       Bangalore Correspondent   ಕರ್ನಾಟಕ

ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸಂಜೆ ಎಸ್.ಎಂ.ಕೃಷ್ಣ ಅವರಿಗೆ ತೀವ್ರ ಜ್ವರ, ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿದ್ದರು. 

ಬೆಂಗಳೂರು, ಸೆ.25 : ತೀವ್ರ ಜ್ವರದಿಂದ ಬಳಲುತ್ತಿರುವ ಮಾಜಿ ಸಿಎಂ, ಬಿಜೆಪಿ ಹಿರಿಯ ನಾಯಕ ಎಸ್.ಎಂ.ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶನಿವಾರ ಸಂಜೆ ಎಸ್.ಎಂ.ಕೃಷ್ಣ ಅವರಿಗೆ ತೀವ್ರ ಜ್ವರ, ತಲೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಗರದ ಹೆಚ್‌ಎಎಲ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ತಡರಾತ್ರಿ ದಾಖಲಾಗಿದ್ದರು. 

ಎಸ್.ಎಂ.ಕೃಷ್ಣ ಅವರ ಆರೋಗ್ಯ ಕುರಿತಂತೆ ಅವರ ಕಚೇರಿ ಮುಖ್ಯಸ್ಥರು ಮಾಧ್ಯಮ ಪ್ರಕಟನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಎಸ್‌.ಎಂ.ಕೃಷ್ಣ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಕೋವಿಡ್ ಹಾಗೂ ಜ್ವರಕ್ಕೆ ಸಂಬಂಧಿಸಿದ ಪರೀಕ್ಷೆಗಳನ್ನು ಮಾಡಿದ್ದೇವೆ. ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಜೊತೆಗೆ ಯಾವುದೇ ಊಹಾಪೋಹದ ಮಾಹಿತಿಗಳನ್ನು ಪ್ರಸಾರ ಮಾಡಬಾರದೆಂದು ಮನವಿ ಮಾಡ್ತೇನೆ ಎಂದು ತಿಳಿಸಿದ್ದಾರೆ.

Former chief minister S M Krishna has been admitted in Manipal Hospital in Bengaluru with an acute respiratory tract infection, hospital sources said on Sunday.Krishna was admitted in the hospital on Saturday night. He is under the care of Dr Satyanarayana Mysore, HOD – Pulmonology, Dr Sunil Karanth, HOD -- Intensive Care, and a broad specialty medical team. The former CM is on minimal respiratory support and “in a cheerful frame of mind”, the sources said. His health status is being monitored by Health Minister Dr K Sudhakar.