ಬ್ರೇಕಿಂಗ್ ನ್ಯೂಸ್
26-09-22 11:02 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.26 : "ನನಗೆ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ" ಎಂದು ಸರ್ಕಾರಿ ಕಚೇರಿಗಳಲ್ಲಿ ಬೋರ್ಡ್ ಹಾಕಿಸಲು ರಾಜ್ಯ ಸರ್ಕಾರ ಆದೇಶ ಮಾಡಿದೆ. ರಾಜ್ಯ ಸರಕಾರದ ಆದೇಶವನ್ನು ಅಣಕಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಮುಖ್ಯಮಂತ್ರಿ ಬೊಮ್ಮಾಯಿಯವರೇ, ಮೊದಲು ನಿಮ್ಮ ಮತ್ತು ಸಚಿವರ ಕಚೇರಿಗಳು ಹಾಗೂ ಮನೆಯ ಮುಂದೆ ಈ ಬೋರ್ಡ್ ಹಾಕಿಸಿ ಎಂದು ಸರಣಿ ಟ್ವೀಟ್ ಮಾಡಿ ಕೆಣಕಿದ್ದಾರೆ.
ಸಚಿವರ ಮೇಲೆ, ಅಧಿಕಾರಿಗಳ ಮೇಲೆ ಅಲ್ಲ. ಅಧಿಕಾರಿಗಳನ್ನು ತೋರಿಸಿ ಲಂಚ/ಕಮಿಷನ್ ಆರೋಪದಿಂದ ತಪ್ಪಿಸಿಕೊಳ್ಳುವ ಪ್ರಯತ್ನ ಬೇಡ. ಲಂಚಾವತಾರ ನಾಟಕದಲ್ಲಿ ಅಧಿಕಾರಿಗಳದ್ದು ಪೋಷಕ ಪಾತ್ರ, ಇಲಾಖಾ ಸಚಿವರದ್ದೇ ಮುಖ್ಯ ಪಾತ್ರ. ಸಚಿವರಿಂದ ರಕ್ಷಣೆಯ ಅಭಯ ಇಲ್ಲದೆ ಯಾವ ಅಧಿಕಾರಿಯೂ ಲಂಚಕ್ಕೆ ಕೈಯೊಡ್ಡುವ ಸಾಹಸ ಮಾಡುವುದಿಲ್ಲ. ಸಚಿವರು ಪ್ರಾಮಾಣಿಕವಾಗಿದ್ದಾಗ ಸರ್ಕಾರಿ ಅಧಿಕಾರಿಗಳು ಕೂಡಾ ಪ್ರಾಮಾಣಿಕವಾಗಿರುತ್ತಾರೆ. ಸಚಿವರು ಭ್ರಷ್ಟರಾದಾಗ 'ಯಥಾ ರಾಜಾ ತಥಾ ಪ್ರಜಾ' ಅಷ್ಟೆ ಎಂದು ಸಿದ್ದರಾಮಯ್ಯ ತಿವಿದಿದ್ದಾರೆ.
1663752321040.jpg)
'ಸನ್ಮಾನ್ಯ ಮುಖ್ಯಮಂತ್ರಿಗಳೇ, ಈ ಬೋರ್ಡ್ ಬರೆಸಿ ಹಾಕುವ ನಾಟಕಗಳನ್ನೆಲ್ಲ ನಿಲ್ಲಿಸಿ. ಮೊದಲು 40% ಕಮಿಷನ್ ಆರೋಪವೂ ಸೇರಿದಂತೆ ಸಚಿವರುಗಳ ಮೇಲಿನ ಭ್ರಷ್ಟಾಚಾರದ ಆರೋಪಗಳ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶ ಹೊರಡಿಸಿ. ಸರ್ಕಾರಿ ಕಚೇರಿಗಳಲ್ಲಿ "ಲಂಚ ಕೊಡಬೇಕಾಗಿಲ್ಲ" ಎಂಬ ಬೋರ್ಡ್ ಅಳವಡಿಸುವ ಮೊದಲು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ. ನೊಂದ ಜನರು ದೂರು ಕೊಟ್ಟರೆ ಭ್ರಷ್ಟ ಅಧಿಕಾರಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಿ ಎಂದು ಆಗ್ರಹ ಮಾಡಿದ್ದಾರೆ.
ಖಾಸಗಿ ಸಂಸ್ಥೆಯೊಂದು ಭ್ರಷ್ಟಾಚಾರ ಮುಕ್ತ ಅಭಿಯಾನದ ಅಂಗವಾಗಿ ಅಕ್ಟೋಬರ್ 2ರಿಂದ 20ರ ವರೆಗೆ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು 'ನನಗೆ ಯಾರು ಲಂಚ ಕೊಡಬೇಕಿಲ್ಲ. ನಾನು ಭ್ರಷ್ಟ ಅಧಿಕಾರಿಯಾಗಲಾರೆ' ಎಂಬ ನಾಮಫಲಕ ಅಳವಡಿಸಿಕೊಳ್ಳುವಂತೆ ಮನವಿ ಮಾಡಿದ್ದು, ಈ ಸಂಬಂಧ ಅಗತ್ಯ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಕಚೇರಿಯು ಆಡಳಿತ ಮತ್ತು ಸುಧಾರಣಾ ಇಲಾಖೆಗೆ ಸೂಚನೆ ನೀಡಿದೆ. ಇದನ್ನೇ ಅಣಕಿಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.
Don't try to shift the blame on the bureaucrats & officers. The contractors have pointed towards the ministers & not the officers.
— Siddaramaiah (@siddaramaiah) September 26, 2022
Initiate a judicial investigation on the 40% corruption allegation on the ministers, before staging the drama of putting the anti-graft boards.
The Citizen Enquiry Council (CEC) trust had sent a proposal requesting the Karnataka government to start a campaign against corruption. They tabled a plan for installing a board in all government and public offices, stating that no official accepted a bribe.As per reports, the BJP Karnataka government will direct every government office to put a board stating 'No one needs to pay me a bribe. I will not be a corrupt officer'.
09-11-25 03:47 pm
Bangalore Correspondent
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 03:50 pm
Mangalore Correspondent
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm