ಬ್ರೇಕಿಂಗ್ ನ್ಯೂಸ್
26-09-22 11:12 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.26 : ಬಹುಕೋಟಿ ರೂಪಾಯಿಗಳ ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್ ಹಗರಣದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುತ್ತೇನೆ. ಹಗರಣದ ಕುರಿತ ಎಲ್ಲ ದಾಖಲೆಗಳನ್ನು ಪ್ರಧಾನಿ ಕಚೇರಿಗೆ ತಲುಪಿಸುತ್ತೇನೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಪ್ರಧಾನಿ ಮೋದಿ ಇದಕ್ಕೇನು ಕ್ರಮ ಕೈಗೊಳ್ಳುತ್ತಾರೆ ನೋಡೋಣ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರಧಾನಿ ಮೋದಿ ಸಮಯ ಬಂದಾಗಲೆಲ್ಲ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಕಳೆದ ಚುನಾವಣೆ ವೇಳೆ ಹತ್ತು ಶೇ., 20 ಶೇ. ಕಮಿಷನ್ ಬಗ್ಗೆ ಮಾತನಾಡಿದ್ದರು. ಈಗ ಅವರದೇ ಪಕ್ಷ ಅಧಿಕಾರದಲ್ಲಿದ್ದು ಕರ್ನಾಟಕದಲ್ಲಿ ನಲ್ವತ್ತು ಪರ್ಸೆಂಟ್ ಜನರ ಬಾಯಲ್ಲಿ ಹರಿದಾಡುತ್ತಿದೆ. ಈಗ ಯಾಕೆ ಮೋದಿ ಬಾಯಿ ಮುಚ್ಚಿಕೊಂಡಿದ್ದಾರೆ ಎಂದು ಕೇಳಿದರು.
ನನ್ನ ಬಳಿ ಬಿಎಂಎಸ್ ಟ್ರಸ್ಟ್ ಅಕ್ರಮದ ಕುರಿತ ದಾಖಲೆಗಳಿದ್ದು ಕ್ರಮಕ್ಕಾಗಿ ಪ್ರಧಾನಿಗೆ ಬರೆಯುತ್ತೇನೆ. ವಿಧಾನಸಭೆಯಲ್ಲಿ ದಾಖಲೆಗಳನ್ನ ಇಟ್ಟು ಮಾತನಾಡಿದರೂ ಬಿಜೆಪಿ ಸರಕಾರಕ್ಕೆ ತನಿಖೆ ಮಾಡಿಸುವ ಧೈರ್ಯ ಇಲ್ಲ. ತಾಕತ್ತು, ದಮ್ಮು ಎಂದೆಲ್ಲ ಮಾತನಾಡುವ ಮುಖ್ಯಮಂತ್ರಿಗಳಿಗೆ ತನಿಖೆ ನಡೆಸುವ ಧಮ್ ಇದೆಯೇ ಎಂದು ಕುಮಾರಸ್ವಾಮಿ ಚಾಟಿ ಬೀಸಿದರು.
ಬಿಜೆಪಿ ಭಂಡತನ ತೋರುತ್ತಿದೆ. ದಾಖಲೆಗಳನ್ನು ಮುಂದಿಟ್ಟು ಕೇಳಿದರೂ ವಿತಂಡ ವಾದ ಮಾಡುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಜನರ ಸಮಸ್ಯೆಗಳ ಕಡೆ ಗಮನ ಕೊಡುತ್ತಿಲ್ಲ. ಭ್ರಷ್ಟಾಚಾರದ ಬಗ್ಗೆ ಸ್ಪರ್ಧೆ ಮಾಡುತ್ತಿದೆ. ಪರಸ್ಪರ ಕೆಸರೆರಚಾಟ ಮಾಡುವಲ್ಲಿ ತೊಡಗಿವೆ ಎಂದವರು ದೂರಿದರು.
ಪೇ ಸಿಎಂ ಎನ್ನುವ ಪ್ರಚಾರವನ್ನು ಒಂದು ಪಕ್ಷ ಶುರು ಮಾಡಿದೆ, ಅದಕ್ಕೆ ಪ್ರತಿಯಾಗಿ ಇನ್ನೊಂದು ಪಕ್ಷ ಮತ್ತೊಂದು ಕೌಂಟರ್ ಮಾಡಿದೆ. ಈ ಮೂಲಕ ಜನರಲ್ಲಿ ಜಾಗೃತಿ ಮೂಡಿಸ್ತೀವಿ ಅಂತ ಹೊರಟಿದ್ದಾರೆ. ಕಾಂಗ್ರೆಸ್, ಬಿಜೆಪಿ ಸರಕಾರದಲ್ಲಿ ಹಗರಣಗಳು ನಡೆಯುತ್ತಿವೆ. ಮತ್ತೆ ಅಧಿಕಾರ ಕೊಟ್ಟರೆ ಎಲ್ಲವನ್ನೂ ಸರಿ ಮಾಡುತ್ತೇವೆ ಎನ್ನುತ್ತಿದ್ದಾರೆ. ಹಗರಣಗಳ ದಾಖಲೆ ಕೊಟ್ಟರೂ ಕಳಂಕಿತ ಸಚಿವರನ್ನು ರಕ್ಷಣೆ ಮಾಡುವುದಾ? ಎಂದು ಎಚ್ಡಿಕೆ ಪ್ರಶ್ನೆ ಮಾಡಿದರು.
HDK slams BJP party on BMS Trust Scam, says let's see what does PM Modi does. JD(S) floor leader in the State Assembly and former chief minister H D Kumaraswamy has demanded the resignation of Higher Education Minister Dr C N Ashwath Narayan over the alleged irregularities and hasty manner in which the BMS Education Trust was favoured.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm