ಬ್ರೇಕಿಂಗ್ ನ್ಯೂಸ್
27-09-22 11:43 am HK News Desk ಕರ್ನಾಟಕ
ಬೆಂಗಳೂರು, ಸೆ.27: ಪಿಎಫ್ಐ ನಾಯಕರನ್ನು ಗುರಿಯಾಗಿಸಿ ಮತ್ತೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ರಾಜ್ಯದಾದ್ಯಂತ ಐವತ್ತಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರತೀ ಜಿಲ್ಲೆಯಲ್ಲಿ ಪಿಎಫ್ಐ ಸಂಘಟನೆಯಲ್ಲಿ ಎರಡನೇ ಹಂತದ ನಾಯಕರಾಗಿ ಗುರುತಿಸಿಕೊಂಡವರನ್ನು ರಾತ್ರೋರಾತ್ರಿ ವಶಕ್ಕೆ ಪಡೆಯಲಾಗಿದೆ.
ಮೊನ್ನೆಯಷ್ಟೇ ಎನ್ಐಎ ಮತ್ತು ಸ್ಥಳೀಯ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಾಜ್ಯ ಮಟ್ಟದ ನಾಯಕರನ್ನು ವಶಕ್ಕೆ ಪಡೆದಿದ್ದರು. ಅವರನ್ನು ವಿಚಾರಣೆ ನಡೆಸಿದ್ದ ಪೊಲೀಸರು ಈಗ ಎರಡನೇ ಬಾರಿಗೆ ದಾಳಿ ನಡೆಸಿದ್ದಾರೆ. ಚಾಮರಾಜನಗರದಲ್ಲಿ ಪಿಎಫ್ಐ ಸಂಘಟನೆಯ ಜಿಲ್ಲಾಧ್ಯಕ್ಷ ಕಪೀಲ್ ಹಾಗೂ ಕಾರ್ಯದರ್ಶಿ ಶೋಯಬ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲಬುರಗಿಯಲ್ಲಿ ಮತ್ತೆ ನಾಲ್ಕು ಕಡೆ ಪೊಲೀಸ್ ದಾಳಿಯಾಗಿದ್ದು ಇಕ್ಬಾಲ್ ಕಾಲೋನಿಯ ಮಜಾರ್ ಹುಸೇನ್ ಹಾಗೂ ಇಸಾಮುದ್ದಿನ್ ಎಂಬವರನ್ನು ವಶಕ್ಕೆ ಪಡೆದಿರುವ ಮಾಹಿತಿಗಳಿವೆ. ಇವರಿಬ್ಬರೂ PFI ಸಂಘಟನೆಯಲ್ಲಿ ಮುಂಚೂಣಿಯಾಗಿ ಗುರುತಿಸಿಕೊಂಡಿದ್ದರು. ಅಲ್ಲದೆ, ಇವರು ನಾಲ್ಕು ದಿನಗಳ ಹಿಂದೆ ಬಂಧಿತನಾದ ಕಲಬುರಗಿ ಪಿಎಫ್ಐ ಜಿಲ್ಲಾಧ್ಯಕ್ಷ ಏಜಾಜ್ ಅಲಿ ನಿಕಟವರ್ತಿಯಾಗಿದ್ದರು.
ಮೈಸೂರಿನಲ್ಲೂ ಮತ್ತೆ ಮೂವರು ಪಿಎಫ್‌ಐ ಪ್ರಮುಖರನ್ನು ವಶಕ್ಕೆ ಪಡೆಯಲಾಗಿದೆ. ನಾಲ್ಕು ದಿನಗಳ ಹಿಂದೆ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಶಾಂತಿ ನಗರದ ಕಲೀಮುದ್ದೀನ್‌ನನ್ನು ವಶಕ್ಕೆ ಪಡೆದಿದ್ದರು. ಬಿಲಾಲ್ ಶರೀಫ್, ಫಿರೋಜ್ ಉಲ್ಲಾ ಶರೀಫ್, ಜಾಫರ್ ಪಾಷಾ ಎಂಬವರ ಬಂಧನಕ್ಕೀಡಾಗಿದ್ದಾರೆ. ಪಿಎಫ್‌ಐ ಮುಖಂಡ ಅಮೀನ್ ಸೇಠ್ ನಾಪತ್ತೆಯಾಗಿದ್ದಾನೆ.
ಗದಗ ಜಿಲ್ಲೆಯಲ್ಲೂ ಇಬ್ಬರು ಪಿಎಫ್ಐ ಸಂಘಟಕರನ್ನು ಬಂಧಿಸಲಾಗಿದೆ. ಬರುಸ್ತುಮ್ ದಂಡಿನ್ ಮತ್ತು ಸರಫರಾಜ್ ಗೌಂಡಿ ಬಂಧಿತರು. ಗದಗ ಶಹರ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಎನ್.ಆರ್.ಸಿ ಹಾಗೂ ಸಿಎಎ ಪ್ರತಿಭಟನೆಯಲ್ಲಿ ಇವರು ಭಾಗಿಯಾಗಿದ್ದರು ಎನ್ನಲಾಗುತ್ತಿದ್ದು ಪಿಎಫ್ಐನಲ್ಲಿ ಸಕ್ರಿಯವಾಗಿದ್ದರು.
ಕೋಲಾರದಲ್ಲಿ ಏಳು ಜನ ಪಿಎಫ್ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೋಲಾರ ತಹಸೀಲ್ದಾರ್ ಆದೇಶದ ಮೇರೆಗೆ ಪಿಎಫ್ ಐ ಕಾರ್ಯಕರ್ತರ ಅರೆಸ್ಟ್ ಮಾಡಲಾಗಿದೆ. 107 ಸಿಆರ್ ಪಿಸಿ, 151 ಆಕ್ಟ್ ನಡಿಯಲ್ಲಿ ತಹಸೀಲ್ದಾರ್ ಎದುರು ಹಾಜರುಪಡಿಸಿ ಪೊಲೀಸರು ಬಂಧನ ತೋರಿಸಿದ್ದಾರೆ. ಪಿಎಫ್ಐ ಜಿಲ್ಲಾಧ್ಯಕ್ಷ ಇಮ್ತಿಯಾಜ್ ಅಹ್ಮದ್, ಸಿದ್ದಿಕ್ ಪಾಷಾ, ಅಲ್ಲಾ ಬಕಾಷ್, ನಯಾಜ್ ಪಾಷ, ವಾಸಿಂ ಪಾಷಾ, ನವಾಜ್ ಪಾಷಾ, ಶಾಬಾಜ್ ಪಾಷಾ, ನೂರ್ ಪಾಷಾ ಬಂಧಿತರು.
ಶಿವಮೊಗ್ಗದಲ್ಲಿ ನಸುಕಿನ ಜಾವ ಕಾರ್ಯಾಚರಣೆ ನಡೆಸಿ ಏಳು ಜನ ಪಿಎಫ್ಐ ಮುಖಂಡರನ್ನು ಪೊಲೀಸ್ ವಶಕ್ಕೆ ಪಡೆದಿದ್ದಾರೆ. ಭದ್ರಾವತಿಯಲ್ಲಿ ತಾಹೀರ್, ಸಾದಿಕ್ ಹಾಗೂ ಖುರೇಶಿ ಎಂಬವರನ್ನು ವಶಕ್ಕೆ ಪಡೆಯಲಾಗಿದೆ. ಶಿವಮೊಗ್ಗದ ಸೂಳೆಬೈಲಿನಲ್ಲೂ ಇಬ್ಬರನ್ನು ವಶಕ್ಕೆ ಪಡೆದಿದ್ದು ಸೈಯದ್ ಹಾಗೂ ರಹೀಂ ಬಂಧಿತರು. ಶಿವಮೊಗ್ಗ ತುಂಗಾನಗರ ಠಾಣೆ ವ್ಯಾಪ್ತಿಯಲ್ಲೂ ಕಾರ್ಯಾಚರಣೆ ನಡೆಸಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಹಿರೇಕೆರೂರ ಪಟ್ಟಣದಲ್ಲಿ ಪೊಲೀಸರು ದಾಳಿ ನಡೆಸಿದ್ದು ಪಿಎಫ್ಐ ಕಾರ್ಯಕರ್ತ ರಬ್ಬಾನಿ ಅಬ್ದುಲ್ ಖಾದರ್ ಸಾಬ್ ಲೋಹಾರ(29) ಬಂಧನ ಮಾಡಲಾಗಿದೆ. ಹಿರೇಕೆರೂರಿನ ಬಸವೇಶ್ವರ ನಗರದ ಮೂರನೇ ಕ್ರಾಸ್ ನಿವಾಸಿಯಾಗಿದ್ದು ಈ ಹಿಂದೆ ಈತನ ಮೇಲೆ ಎರಡು ಪ್ರಕರಣ ದಾಖಲಾಗಿತ್ತು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಎಂಟು ಜನ ಕಾರ್ಯಕರ್ತರನ್ನ ವಶಕ್ಕೆ ಪಡೆಯಲಾಗಿದೆ. ಚಿಕ್ಕಮಗಳೂರು, ಮೂಡಿಗೆರೆ ಹಾಗೂ ಆಲ್ದೂರಿನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ನಿನ್ನೆಯೂ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
ಬೆಳಗಾವಿಯಲ್ಲಿ 7 ಜನ ಪಿಎಫ್ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. ವೈದ್ಯಕೀಯ ತಪಾಸಣೆ ಬಳಿಕ ಬಂಧಿತರನ್ನು ಹಿಂಡಲಗಾ ಜೈಲಿಗೆ ರವಾನೆ ಮಾಡಲಾಗಿದೆ. ಆಜಂ ನಗರ ನಿವಾಸಿ ಪಿಎಫ್ಐ ಮಾಜಿ ಜಿಲ್ಲಾಧ್ಯಕ್ಷ ಝಕೀವುಲ್ಲಾ ಫೈಜಿ, ಅಸಾದ್‌ಖಾನ್ ಸೊಸೈಟಿ ನಿವಾಸಿ SDPI ಜಿಲ್ಲಾಧ್ಯಕ್ಷ ಅಬೀದ್ ಖಾನ್ ಕಡೋಲಿ, ಶಿವಾಜಿ ನಗರ ನಿವಾಸಿ ಸಲಾವುದ್ದೀನ್ ಖಿಲೆವಾಲೆ, ಅಸಾದ್‌ಖಾನ್ ನಿವಾಸಿ ಬದ್ರುದ್ದೀನ್ ಪಟೇಲ್, ಅಮನ್ ನಗರ ನಿವಾಸಿ ಸಮೀವುಲ್ಲಾ ಪೀರ್ಜಾದೆ, ಬಾಕ್ಸೈಟ್ ರೋಡ್ ನಿವಾಸಿ ಜಹೀರ್ ಘೀವಾಲೆ, ವಿದ್ಯಾಗಿರಿ ನಿವಾಸಿ ರೆಹಾನ್ ಅಜೀಜ್ ಬಂಧಿತರು.
The National Investigation Agency (NIA) was conducting raids in over eight states and at multiple locations linked to the Popular Front of India (PFI) members on Tuesday.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm