ಪಿಎಸ್ಐ ಅಕ್ರಮ ; ಸರ್ಕಾರದ ಮರು ಪರೀಕ್ಷೆ ನಿರ್ಧಾರಕ್ಕೆ ಹೈಕೋರ್ಟ್ ತಡೆಯಾಜ್ಞೆ 

28-09-22 11:02 pm       Bangalore Correspondent   ಕರ್ನಾಟಕ

ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಬೆಂಗಳೂರು, ಸೆ.28 : ಪಿಎಸ್ಐ ನೇಮಕಾತಿ ಅಕ್ರಮದ ಹಿನ್ನೆಲೆಯಲ್ಲಿ 545 ಪಿಎಸ್‌ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಮರು ಪರೀಕ್ಷೆ ನಡೆಸುವುದನ್ನು ರದ್ದು ಮಾಡುವಂತೆ ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾ| ಜಿ. ನರೇಂದ್ರ ಅವರಿದ್ದ ವಿಭಾಗೀಯ ನ್ಯಾಯಪೀಠ, ಮರುಪರೀಕ್ಷೆ ನಿರ್ಧಾರಕ್ಕೆ ತಡೆ ನೀಡಿದೆ.

full information about psi exam scam in Karnataka | Explained: ಏನಿದು PSI  Exam Scam? ಇದರ ಆಳ, ಅಗಲ ಏನು? ಈವರೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ– News18 Kannada

ಅರ್ಜಿದಾರರ ಪರ ವಾದ ಮಂಡಿಸಿದ ಪಿ.ಎಸ್‌. ರಾಜಗೋಪಾಲ್‌, ಎ.ಎಸ್‌. ಪೊನ್ನಣ್ಣ, ಡಿ.ಆರ್‌.ರವಿಶಂಕರ್‌ ಅವರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅಗತ್ಯ ಇಲ್ಲ ಎಂದರು.

ಸರಕಾರದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಆರ್‌.ಸುಬ್ರಹ್ಮಣ್ಯ ಅವರು, ಪ್ರಕರಣ ವ್ಯಾಪಕವಾಗಿ ಹರಡಿದ್ದು, ಹಲವು ಅಧಿಕಾರಿಗಳು, ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿದ್ದಾರೆ.

ಪರೀಕ್ಷೆಯಲ್ಲೇ ಅಕ್ರಮವಾಗಿರುವುದರಿಂದ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ. ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿ ಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ ಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸರಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡರು.

Psi scam in Karnataka, high court brings stay order on re examination of PSI exams in state.