ನಾಡಗೀತೆ ಹಾಡಲು ಸಮಯ ಮಿತಿ ; ಸರ್ಕಾರದ ಆದೇಶಕ್ಕೆ ತಡೆಕೋರಿ ಹೈಕೋರ್ಟ್ನಲ್ಲಿ ಗಾಯಕರಿಂದಲೇ ತಕರಾರು ಅರ್ಜಿ 

30-09-22 10:48 pm       Bangalore Correspondent   ಕರ್ನಾಟಕ

ರಾಷ್ಟ್ರಕವಿ ಕುವೆಂಪು ರಚನೆಯ ನಾಡಗೀತೆಯ ಗಾಯನ ಧಾಟಿ ಹಾಗೂ ಸಮಯದ ಮಿತಿಗೆ ಸಂಬಂಧಿಸಿ ರಾಜ್ಯ ಸರಕಾರದ ನಿರ್ಣಯ ಪ್ರಶ್ನಿಸಿ ಹೈಕೋರ್ಟಿನಲ್ಲಿ ತಕರಾರು ಅರ್ಜಿ ಸಲ್ಲಿಕೆಯಾಗಿದೆ.

ಬೆಂಗಳೂರು, ಸೆ.30 : ರಾಷ್ಟ್ರಕವಿ ಕುವೆಂಪು ರಚನೆಯ ನಾಡಗೀತೆಯ ಗಾಯನ ಧಾಟಿ ಹಾಗೂ ಸಮಯದ ಮಿತಿಗೆ ಸಂಬಂಧಿಸಿ ರಾಜ್ಯ ಸರಕಾರದ ನಿರ್ಣಯ ಪ್ರಶ್ನಿಸಿ ಹೈಕೋರ್ಟಿನಲ್ಲಿ ತಕರಾರು ಅರ್ಜಿ ಸಲ್ಲಿಕೆಯಾಗಿದೆ. ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ನಾಡಗೀತೆ ಹಾಡುವ ಕುರಿತು ಸರ್ಕಾರದ ಆದೇಶ ರದ್ದು ಪಡಿಸಬೇಕೆಂದು ಅರ್ಜಿಯಲ್ಲಿ ಕೇಳಲಾಗಿದೆ. 

ನಾಡಗೀತೆಯ ಧಾಟಿ ಹಾಗೂ ಸಮಯ ನಿಗದಿಪಡಿಸಿ ಸೆ.25ರಂದು ಸರ್ಕಾರ ಆದೇಶ ಹೊರಡಿಸಿರುವುದನ್ನು ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿರುವ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ಪೀಠ ಶುಕ್ರವಾರ ವಿಚಾರಣೆ ನಡೆಸಿದೆ. ಅರ್ಜಿದಾರರ ಪರ ವಾದ ಆಲಿಸಿದ ಪೀಠ, ಪ್ರತಿವಾದಿಗಳಾದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಆಡಳಿತ ಮತ್ತು ಸಿಬ್ಬಂದಿ ಸುಧಾರಣೆ ಇಲಾಖೆಗೆ ತುರ್ತು ನೋಟಿಸ್ ಜಾರಿಗೊಳಿಸಿದೆ. ಜತೆಗೆ, ಯಾವ ನಿಯಮಗಳಡಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ ಎಂಬ ಬಗ್ಗೆ ವಿವರಣೆ ನೀಡುವಂತೆ ಸರ್ಕಾರದ ಪರ ವಕೀಲರಿಗೆ ನಿರ್ದೇಶನ ನೀಡಿದೆ. 

Karnataka 'Naada Geete' to be 2½ mins long; here is its new singing style |  Bengaluru - Hindustan Times

ಅರ್ಜಿದಾರರ ಮನವಿ ಏನು? 

ಮೈಸೂರು ಅನಂತಸ್ವಾಮಿಯವರು ಫೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿದ್ದರು ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ. ಹೀಗಿದ್ದರೂ, ನಾಡಗೀತೆಯ ರಾಗ, ಧಾಟಿ ಮತ್ತು ಸಮಯದ ಮಿತಿ ಕುರಿತು ಸರ್ಕಾರ ತರಾತುರಿಯಲ್ಲಿ ಆದೇಶ ಹೊರಡಿಸಿದೆ. ಆದ್ದರಿಂದ, ಸರ್ಕಾರ ಸೆ.25ರಂದು ಹೊರಡಿಸಿರುವ ಆದೇಶ ರದ್ದುಪಡಿಸಬೇಕೆಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿ ಇತ್ಯರ್ಥ ಆಗುವ ವರೆಗೆ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಿದ್ದಾರೆ. 

ಅಲ್ಲದೆ, ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ 2013ರ ಜೂ.12ರಂದು ವಸಂತ ಕನಕಪುರ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ಧಾರಕ್ಕೆ ತದ್ವಿರುದ್ಧವಾಗಿದೆ. ಮೈಸೂರು ಅನಂತಸ್ವಾಮಿಯವರು ಸಂಪೂರ್ಣ ನಾಡಗೀತೆಗೆ ರಾಗ ಸಂಯೋಜನೆ ಮಾಡಿಲ್ಲ ಎಂದು ಆ ಸಭೆಯಲ್ಲಿ ಚರ್ಚಿಸಲಾಗಿತ್ತು. ಜತೆಗೆ, ಡಾ. ಸಿ. ಅಶ್ವಥ್ ಸಂಯೋಜಿಸಿದ್ದ ರಾಗವನ್ನೇ ಮುಂದುವರಿಸುವ ಬಗ್ಗೆ ಸ್ವತಃ ಮೈಸೂರು ಅನಂತಸ್ವಾಮಿಯವರೇ ಒಪ್ಪಿಕೊಂಡಿದ್ದರು ಎಂದು ಅರ್ಜಿಯಲ್ಲಿ ಹೇಳಲಾಗಿದೆ.

The Bommai administration on Friday decided that the duration of the Nada Geete composed by Rashtrakavi Kuvempu, will be fixed at 2.30 minutes, drawing curtains on the debate over how the state anthem should be rendered at public events.