ಬ್ರೇಕಿಂಗ್ ನ್ಯೂಸ್
01-10-22 08:07 pm HK News Desk ಕರ್ನಾಟಕ
ಮೈಸೂರು, ಅ1: ವರ್ಷದೊಳಗೆ 202 ಕೋಟಿ ರೂ.ವೆಚ್ಚದಲ್ಲಿ ರಾಜ್ಯದಲ್ಲಿ 117 ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಶನಿವಾರ ಮೈಸೂರು ಜಿಲ್ಲಾ ಪೊಲೀಸ್ ಡಿಎಆರ್ ಘಟಕದ ಆಡಳಿತ ಕಚೇರಿ ಹಾಗೂ ಶಸ್ತ್ರಗಾರ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಪೊಲೀಸರಿಗೆ 2025ರ ವೇಳೆಗೆ ಸುಮಾರು 11 ಸಾವಿರ ಮನೆಗಳನ್ನು ನಿರ್ಮಾಣ ಮಾಡುವ ಮೂಲಕ ನೆಮ್ಮದಿಯಿಂದ ಬದುಕಲು ಸರಕಾರ ಅನುಕೂಲ ಮಾಡಿಕೊಡುತ್ತದೆ. ಜೊತೆಗೆ ಕರ್ತವ್ಯಕ್ಕೆ ಕಚೇರಿಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.
ಪೊಲೀಸರ ಕೈಗೆ ಶಸ್ತ್ರಾಸ್ತ್ರಗಳನ್ನು ನೀಡಿ, ಬೆರಳಚ್ಚು ತಂತ್ರಜ್ಞಾನ ಕೇಂದ್ರಗಳನ್ನು ಸ್ಥಾಪಿಸಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಉತ್ತಮ ವಾತಾವರಣ ನಿರ್ಮಿಸಲಾಗುವುದು. ಈ ಮೂಲಕ ಅಪರಾಧಿಗಳನ್ನು ತಕ್ಷಣ ಪತ್ತೆ ಹಚ್ಚಲು ಸಹಕಾರಿಯಾಗಲಿದೆ. ಜೊತೆಗೆ ನ್ಯಾಯಾಲಯಕ್ಕೆ ಹೋಗುವ ಪ್ರಕರಣಗಳ ಸಂಖ್ಯೆಯನ್ನ ಸಹ ಕಡಿಮೆ ಮಾಡಲಾಗುವುದು ಎಂದು ತಿಳಿಸಿದರು.
ಜಿಲ್ಲಾ ಪ್ರವಾಸದಲ್ಲಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಮೈಸೂರು ಕೇಂದ್ರ ಕಾರಾಗೃಹಕ್ಕೆ ಭೇಟಿ ನೀಡಿ, ಕಾರಾಗೃಹದ ಸಿಬ್ಬಂದಿಗಳೇ ನಿರ್ವಹಿಸುವ, ಕಾರಾಗೃಹದ ಎಫ್‌ಎಂ ಬಾನುಲಿ ಕೇಂದ್ರವನ್ನು ವೀಕ್ಷಿಸಿದರು. ಬಾನುಲಿ ಪ್ರಸಾರ ಕೇಂದ್ರದ ಮೂಲಕ, ಕಾರಾಗೃಹ ವಾಸಿಗಳನ್ನು ಉದ್ದೇಶಿಸಿ ಮಾತನಾಡಿ, ಕಾರಾಗೃಹವನ್ನು ಸುಧಾರಣೆಯ ಹಾಗೂ ಮನ ಪರಿವರ್ತನೆಯ ತಾಣವೆಂದು, ಸ್ವೀಕರಿಸಿ, ಹಾಗೂ ಇಲ್ಲಿನ ಹೊರತಾಗಿಯೂ ಬದುಕು ಇದೆ ಎಂಬ ವಾಸ್ತವವನ್ನು ಅರಿತು ಕೊಳ್ಳಿ ಎಂದು, ಹೇಳಿದ ಸಚಿವರು, ಎಲ್ಲರಿಗೂ ಶುಭ ಹಾರೈಸಿದರು.
ಕಾರಾಗೃಹ ದಲ್ಲಿರುವ, ಕೈ ಮಗ್ಗ ಘಟಕ, ಕೌಶಲ್ಯ ಅಭಿವೃದ್ದಿ ಕೇಂದ್ರ, ಹೊಲಿಗೆ ತರಭೇತಿ ಘಟಕಕ್ಕೂ ಭೇಟಿ ನೀಡಿದ ಸಚಿವರು, ಸಜಾ ಬಂಧಿ ಕೈದಿಗಳ ಜತೆ ಸಂಭಾಷಣೆ ನಡೆಸಿದರು. ಕಾರಾಗೃಹದ ಒಳಗಿರುವ, ಕೈದಿಗಳ ಪ್ರಾರ್ಥನಾ ಮಂದಿರಕ್ಕೆ ಭೇಟಿ ನೀಡಿದ ಸಚಿವರನ್ನು, ಕೈದಿಗಳು, ಸುಶ್ರಾವ್ಯ ವಾಗಿ ಹಾಡುವುದರ ಮೂಲಕ ಬರ ಮಾಡಿಕೊಂಡರು.
ಸಜಾ ಬಂಧಿ ಕೈದಿಗಳು, ಮಹಿಳಾ ಸಜಾಬಂಧಿಗಳನ್ನು ಸಚಿವರು ಅವರ ಅಹವಾಲುಗಳನ್ನು ಸ್ವೀಕರಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವುದಾಗಿ ಸಚಿವರು ಭರವಸೆ ನೀಡಿದ ಸಚಿವ, ಕಾರಾಗೃಹದ ಅಡುಗೆ ವಿಭಾಗಕ್ಕೆ ಭೇಟಿ ನೀಡಿದ ಸಚಿವರು, ಸ್ವಚ್ಛತೆಗೆ ಆದ್ಯತೆ ನೀಡಬೇಕೆಂದು, ಸೂಚಿಸಿದರು.
ನಂತರ ಜೈಲು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಜೈಲಿನ ಒಳಗಡೆ, ಮಾದಕ ವಸ್ತುಗಳು, ಮೊಬೈಲ್ ಫೋನ್ ಬಳಕೆ ವಿರುದ್ಧ ತೀವ್ರ ನಿಗಾ ವಹಿಸಬೇಕು ಎಂದು, ನಿರ್ದೇಶನ ನೀಡಿದರು.
11 thousand houses for Police personnel to be built in Karnataka by 2025 says Home Minister Araga in Mysuru. Also 117 police station with the cost of 202 crores to be built in the state he added speaking to media persons in Mysuru.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm