ಬ್ರೇಕಿಂಗ್ ನ್ಯೂಸ್
09-10-20 10:54 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 9: ರೈತರನ್ನು ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಕೇಂದ್ರ ಕೃಷಿ ಮಸೂದೆಯನ್ನು ವಿರೋಧಿಸಿ ಪ್ರತಿಭಟಿಸಿದ ಪಂಜಾಬ್ ರೈತರನ್ನು ಪರೋಕ್ಷವಾಗಿ ಕಂಗನಾ ರಣಾವತ್ ಭಯೋತ್ಪಾದಕರಿಗೆ ಹೋಲಿಸಿ ಟ್ವೀಟ್ ಮಾಡಿದ್ದರು. ಕಂಗನಾ ಅವರ ಹೇಳಿಕೆಯನ್ನು ಖಂಡಿಸಿ ಕರ್ನಾಟಕದ ಹೈಕೋರ್ಟ್ ವಕೀಲ ರಮೇಶ್ ನಾಯಕ್, ತುಮಕೂರು ಕೋರ್ಟ್‌ನಲ್ಲಿ ಕೇಸ್ ದಾಖಲಿಸಿದ್ದರು.
ಅರ್ಜಿ ಕುರಿತು ಅ.5ರಂದು ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಿತ್ತು. ಶುಕ್ರವಾರ ಕೋರ್ಟ್ ಈ ಬಗ್ಗೆ ಆದೇಶ ನೀಡಿದ್ದು, ಕಂಗನಾ ವಿರುದ್ಧ ಎಫ್‌ಐಆರ್ ದಾಖಲಿಸಲು ತುಮಕೂರು ನಗರದ ಕ್ಯಾತಸಂದ್ರ ಪೊಲೀಸ್ ಠಾಣೆಗೆ ಸೂಚಿಸಿದೆ.
‘ಸಿಎಎ ಕಾಯ್ದೆಯಿಂದ ಒಬ್ಬನ ನಾಗರಿಕತ್ವವೂ ಹೋಗಲಿಲ್ಲ. ಆದರೆ, ಇವರು ರಕ್ತದ ಕೋಡಿಯನ್ನೇ ಹರಿಸಿದರು. ಅದೇ ಭಯೋತ್ಪಾದಕರು ಈಗ ಪ್ರತಿಭಟಿಸುತ್ತಿದ್ದಾರೆ. ಮಲಗಿದವರನ್ನು ಎಬ್ಬಿಸಬಹುದು, ಆದರೆ ಮಲಗಿದ ರೀತಿ ನಟಿಸುವವರನ್ನು ಎಬ್ಬಿಸಲಾಗದು. ದಡ್ಡರಂತೆ ನಟಿಸುತ್ತಿರುವವರಿಗೆ ಏನು ಹೇಳಿದರೂ ಪ್ರಯೋಜನ ಇರಲ್ಲ ಎಂದು ಕಂಗನಾ ಟ್ವೀಟ್ ಮಾಡಿದ್ದರು.
ನಟಿ ಕಂಗನಾ ಟ್ವೀಟ್‌ಗೆ ನೆಟ್ಟಿಗರ ಕಡೆಯಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ ಮತ್ತೊಂದು ಟ್ವೀಟ್ ಮಾಡಿದ್ದ ಕಂಗನಾ, ಪಪ್ಪು ಸೇನೆ ಸುಳ್ಳು ಸುದ್ದಿಗಳನ್ನು ಮುಂದಿಟ್ಟು ಗಲಾಟೆ ಎಬ್ಬಿಸುತ್ತಿದೆ. ನಾನು ರೈತರನ್ನು ಭಯೋತ್ಪಾದಕರು ಎಂದಿಲ್ಲ. ನಾನು ಹಾಗೆ ಹೇಳಿದ್ದಾಗಿ ಸಾಬೀತು ಪಡಿಸಿದರೆ ಕ್ಷಮೆ ಕೇಳುತ್ತೇನೆ ಎಂದು ಸವಾಲು ಹಾಕಿದ್ದರು.
The Tumakuru district court has ordered an FIR or first information report against actor Kangana Ranaut over her tweet in which she had slammed the protests against the Centre's farm laws.
13-10-26 03:49 pm
HK News Staffer
ಸ್ಟಿಂಗ್ ವಿವಾದಕ್ಕೆ ಹೊಸ ತಿರುವು ; ಸಿದ್ದರಾಮಯ್ಯ ಗಟ...
13-10-26 03:38 pm
DK Shivakumar: ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್...
08-10-26 08:00 pm
B.Y. Vijayendra: ಸ್ಟಿಂಗ್, ಡಿಂಗ್ ಆಪರೇಷನ್ ಮಾ...
08-10-26 04:38 pm
ಜನಸಾಮಾನ್ಯರು ಅಪಘಾತದಲ್ಲಿ ಸತ್ತರೆ 5 ಲಕ್ಷ ಕೊಡಕ್ಕಾಗ...
07-10-26 10:45 pm
12-10-26 05:22 pm
HK News Staffer
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
ರಷ್ಯನ್ ತೈಲಕ್ಕಾಗಿ ಭಾರತಕ್ಕೆ ಬರೆ ಹಾಕಿದ್ದ ಅಮೆರಿಕ...
11-10-26 03:20 pm
ರಿಯಾದ್ ಏರ್ಪೋರ್ಟ್ ಮೇಲೆ ಹೌತಿಗಳಿಂದ ಬಾಂಬ್ ದಾಳಿ ;...
11-10-26 02:34 pm
Elon Musk , Ambani, Modi: ಭಾರತದ ಆತ್ಮೀಯ ಪ್ರಧಾನ...
10-10-26 10:31 pm
13-10-26 02:54 pm
HK News Staffer
ಮೈಸೂರು ಕಂಬಳಕ್ಕೆ ಕೋಣ ತರಬೇಡಿ.. ಕುಡಿಯಲೇ ನೀರಿಲ್ಲ,...
12-10-26 10:01 pm
St Agnes College: ದಸರಾ ಸಂಭ್ರಮಕ್ಕೆ ಪರೀಕ್ಷೆ ಅಡ್...
12-10-26 11:30 am
Mangalore Dasara 2026: ಮಂಗಳೂರು, ಉಚ್ಚಿಲ ದಸರಾ ಉ...
11-10-26 06:35 pm
Someshwar Beach, Mangalore: ಸೋಮೇಶ್ವರದಲ್ಲಿ ಸಮು...
11-10-26 05:37 pm
12-10-26 10:36 pm
HK News Desk
Manglore Crime: ಅನೈತಿಕ ಸಂಬಂಧ ಶಂಕೆ ; ಪತ್ನಿಯನ್ನ...
12-10-26 04:12 pm
ದೆವ್ವ ಬಿಡಿಸುವ ನೆಪದಲ್ಲಿ ಮಹಿಳೆ ಮೇಲೆ ನಿರಂತರ ಅತ್ಯ...
12-10-26 03:56 pm
Kochi accident: ಮಿನಿ ಕೂಪರ್ ಅಟ್ಟಹಾಸಕ್ಕೆ ಮಂಗಳೂರ...
12-10-26 10:06 am
Cyber Fraud, Mangalore Doctor: ಮಾಡೆಲಿಂಗ್, ಗೋಲ...
10-10-26 02:27 pm