ಬ್ರೇಕಿಂಗ್ ನ್ಯೂಸ್
10-10-22 01:31 pm Bangalore Correspondent ಕರ್ನಾಟಕ
ಬೆಂಗಳೂರು, ಅ.10: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಿರ್ಮಿಸಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆ ಹಾಗೂ ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಗಾಗಿ ಪ್ರಧಾನಿ ನರೇಂದ್ರ ಮೋದಿ ನವೆಂಬರ್ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.
ಈ ಕುರಿತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಮಾಹಿತಿ ನೀಡಿದ್ದು, ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಬಳಿಯ ನಾಡಪ್ರಭು ಕೆಂಪೇಗೌಡರ 108 ಅಡಿ ಕಂಚಿನ ಪ್ರತಿಮೆಯನ್ನು ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಅಲ್ಲದೆ, ಕೆಂಪೇಗೌಡ ಥೀಮ್ ಪಾರ್ಕ್ ಉದ್ಘಾಟನೆಯನ್ನೂ ಇದೇ ವೇಳೆ ಪ್ರಧಾನಿ ನೇರವೇರಿಸಲಿದ್ದಾರೆ. ಆನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಸೆ.2ರಂದು ಮಂಗಳೂರಿಗೆ ಆಗಮಿಸಿದ್ದ ಪ್ರಧಾನಿ ಮೋದಿ, ಮುಂದೆ ಪ್ರತಿ ತಿಂಗಳು ರಾಜ್ಯಕ್ಕೆ ಆಗಮಿಸುವ ಸುಳಿವು ನೀಡಿದ್ದರು. ಅದರಂತೆ, ರಾಜ್ಯ ಬಿಜೆಪಿಯಿಂದ ಕಾರ್ಯಕ್ರಮ ಆಯೋಜಿಸಿದ್ದು ಚುನಾವಣೆ ಪ್ರಚಾರಕ್ಕೆ ಬಳಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ. ಈ ನಡುವೆ, ರಾಜ್ಯ ಸರ್ಕಾರದ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ ಕಾರ್ಯಕ್ರಮದಲ್ಲಿ ನಿರೀಕ್ಷಿತ ಜನರು ಸೇರದೇ ರಾಜ್ಯ ಬಿಜೆಪಿಗೆ ಮುಜುಗರ ಸೃಷ್ಟಿಯಾಗಿತ್ತು. ದೊಡ್ಡಬಳ್ಳಾಪುರದಲ್ಲಿ ಖಾಲಿ ಖಾಲಿ ಕುರ್ಚಿಗಳ ಮುಂದೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಭಾಷಣ ಮಾಡಿದ್ದ ವಿಡಿಯೋ ವೈರಲ್ ಆಗಿತ್ತು. ಅದೇ ಕಾರಣಕ್ಕೆ ಬಿಜೆಪಿಯಿಂದ ರಾಜ್ಯದಲ್ಲಿ ಸರಣಿ ಜನಸ್ಪಂದನ ಏರ್ಪಡಿಸಿದ್ದನ್ನು ಸದ್ದಿಲ್ಲದೆ ಮುಂದಕ್ಕೆ ಹಾಕಲಾಗಿತ್ತು.
ಇದೇ ವೇಳೆ ಬಿಜೆಪಿ ಕಾರ್ಯದರ್ಶಿ ರವಿಕುಮಾರ್, ಅಕ್ಟೋಬರ್ 10 ರಂದು ಜನಸಂಕಲ್ಪ ಯಾತ್ರೆ ಆರಂಭಿಸಲಾಗುತ್ತದೆ. 30 ರಂದು ಕಲಬುರಗಿಯಲ್ಲಿ ಒಬಿಸಿ ಸಮಾವೇಶ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ. ರಾಜ್ಯ ಬಿಜೆಪಿ ನಾಯಕರು ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ನಾನಾ ಕಸರತ್ತು ನಡೆಸುತ್ತಿದ್ದಾರೆ.
The second terminal of the Kempegowda International Airport (KIA) on the outskirts of Bengaluru will likely be inaugurated in November by Prime Minister Narendra Modi. As per reports, the Prime Minister has been invited to inaugurate the new terminal, however, The Hindu reported that the PMO (Prime Minister’s Office) has not yet responded. As per reports, PM Modi has also been invited to inaugurate the massive 108-ft statue of Kempe Gowda, hailed as the founder of Bengaluru.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm