ಅ.16 : ಬೆಂಗಳೂರಿನಲ್ಲಿ ಒಳನಾಡು ಮೀನು ಉತ್ಪಾದಕರ ಸಮಾವೇಶ- ಸಚಿವ ಅಂಗಾರ 

14-10-22 10:41 pm       Bangalore Correspondent   ಕರ್ನಾಟಕ

ಮೀನುಗಾರಿಕೆ ಇಲಾಖೆ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅ.16ರಂದು “ಒಳನಾಡು ಮೀನು ಉತ್ಪಾದಕರ ಸಮಾವೇಶ-2022′ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್‌.ಅಂಗಾರ ಹೇಳಿದ್ದಾರೆ.

ಬೆಂಗಳೂರು, ಅ.14 : ಮೀನುಗಾರಿಕೆ ಇಲಾಖೆ ವತಿಯಿಂದ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಅ.16ರಂದು “ಒಳನಾಡು ಮೀನು ಉತ್ಪಾದಕರ ಸಮಾವೇಶ-2022′ ಹಮ್ಮಿಕೊಳ್ಳಲಾಗಿದೆ ಎಂದು ಮೀನುಗಾರಿಕೆ ಸಚಿವ ಎಸ್‌.ಅಂಗಾರ ಹೇಳಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರ ನೀಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮಾವೇಶ ಉದ್ಘಾಟಿಸಲಿದ್ದಾರೆ.‌ ಭಾರತ ಸರ್ಕಾರದ ಮಾಹಿತಿ ಮತ್ತು ಪ್ರಸರಣ, ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಡಾ.ಎಲ್‌.ಮುರುಗನ್‌ ಮತ್ತಿತರರು ಉಪಸ್ಥಿತರಿರಲಿದ್ದಾರೆ ಎಂದರು. 

Karnataka: Covid-19 situation in state under control, says CM Bommai |  Cities News,The Indian Express

ಸಮಾವೇಶದಲ್ಲಿ 10 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದ್ದು ಸಾರ್ವಜನಿಕರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಸಮಾವೇಶದಲ್ಲಿ 4 ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

760 ಕೋಟಿ ರೂ. ಸದ್ಬಳಕೆ 

ಒಳನಾಡು ಮೀನುಗಾರಿಕಾ ರೈತರಿಗೆ ಮೀನುಗಾರಿಕಾ ಕೃಷಿಯಲ್ಲಿ ತೊಡಗಿಸಿಕೊಳ್ಳಲು ಈ ಸಮಾವೇಶ ಸಹಕಾರಿಯಾಗಲಿವೆ. 5 ವರ್ಷಗಳಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ 725 ಕೋಟಿ ರೂ. ಅನುದಾನ ನಿಗದಿಪಡಿಸಿದೆ. ಇಲಾಖೆಯಿಂದ 760 ಕೋಟಿ ರೂ. ಅನುದಾನವನ್ನು ಕಳೆದ 3 ವರ್ಷಗಳಲ್ಲಿ ಸದ್ಬಳಕೆ ಮಾಡಲಾಗಿದೆ ಎಂದು ಹೇಳಿದರು.

Minister Angara to hold fish generating program in Bangalore on October 16.