ಬ್ರೇಕಿಂಗ್ ನ್ಯೂಸ್
16-10-22 01:45 pm HK News Desk ಕರ್ನಾಟಕ
ಮಡಿಕೇರಿ, ಅ.16 : ಜೆಡಿಎಸ್ ನಗರಸಭೆ ಸದಸ್ಯನೊಬ್ಬ ಹಿಂದುಗಳು ಹೆಚ್ಚಿರುವ ಮಡಿಕೇರಿಯ ವಿವಿಧ ಕಡೆಗಳಲ್ಲಿ ಬಾಂಬ್ ಹಾಕಬೇಕೆಂದು ಹೇಳಿರುವ ಆಡಿಯೋ ಲೀಕ್ ಆಗಿದ್ದು ಜಿಲ್ಲೆಯ ಜನರನ್ನು ಬೆಚ್ಚಿ ಬೀಳುವಂತೆ ಮಾಡಿದೆ.
ದೇಶದಲ್ಲಿ ವಿದ್ರೋಹಿ ಚಟುವಟಿಕೆಗೆ ಸಂಚು ರೂಪಿಸಿದ ಆರೋಪದಲ್ಲಿ ಪಿಎಫ್‍ಐ ಸಂಘಟನೆಯನ್ನು ಇತ್ತೀಚೆಗಷ್ಟೇ ನಿಷೇಧ ಮಾಡಲಾಗಿತ್ತು. ಆದರೆ ಆರು ತಿಂಗಳ ಹಿಂದೆಯೇ (ಏಪ್ರಿಲ್ 25) ಮಡಿಕೇರಿ ನಗರಸಭೆ ಸದಸ್ಯ ಜೆಡಿಎಸ್ ಪಕ್ಷದ ಮುಸ್ತಫಾ ಎಂಬಾತ ಆತನ ಸ್ನೇಹಿತ ಬೆಟ್ಟಗೇರಿಯ ಅಬ್ದುಲ್ಲಾ ಎಂಬವನ ಜೊತೆ ಮಾತನಾಡುತ್ತಿದ್ದಾಗ, ಮಡಿಕೇರಿ ನಗರಕ್ಕೆ ಬಾಂಬ್ ಹಾಕಬೇಕು. ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು. ನಮ್ಮವರು ಒಂದಷ್ಟು ಜನರು ಸತ್ತರೂ ಪರವಾಗಿಲ್ಲ ಎಂದು ಮಾತನಾಡಿರುವ ಆಡಿಯೋ ಲೀಕ್ ಆಗಿದ್ದು, ಜಿಲ್ಲೆಯ ಜನರನ್ನು ಬೆಚ್ಚಿ ಬೀಳಿಸಿದೆ.
50ಕ್ಕೂ ಹೆಚ್ಚು ಪ್ರದೇಶಗಳನ್ನು ಟಾರ್ಗೆಟ್ ಮಾಡಿ ಪೆಟ್ರೋಲ್ ಬಾಂಬ್ ಹಾಕಬೇಕು ಎಂದು ಮಲೆಯಾಳಂ ಭಾಷೆಯಲ್ಲಿ ಮಾತನಾಡಿರುವ ಆಡಿಯೋ ವೈರಲ್ ಆಗಿದ್ದು ಜಾಲತಾಣದಲ್ಲಿ ಹರಿದಾಡುತ್ತಿದೆ. ಇದಕ್ಕಾಗಿ 50 ಜನರ ತಂಡ ಕಟ್ಟಿ ತರಬೇತಿ ಮಾಡಬೇಕು. ಇದಕ್ಕೆ ಎಲ್ಲರೂ 50 ಸಾವಿರ, ಒಂದು ಲಕ್ಷ ಹಣ ಹೂಡಿಕೆ ಮಾಡಬೇಕು. ಅದನ್ನು ಬಳಸಿಕೊಂಡು ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ ಹಾಕಿಬಿಡೋದು. ಇಡೀ ಮಡಿಕೇರಿ ಟೌನ್ ಹೊತ್ತಿ ಉರಿಯಬೇಕು. ಮಡಿಕೇರಿ ಮಾತ್ರ ಅಲ್ಲ ಎಲ್ಲಾ ಕಡೆ ಹಾಕಬೇಕು. ಅವರೂ ಸಾಯಲಿ, ನಾವು ಸಾಯೋಣ. ಒಟ್ನಲ್ಲಿ ಅವರಿಗೆ ಭಯ ಹುಟ್ಟಬೇಕು. 50 ಜಾಗದಲ್ಲಿ ಬಾಂಬ್ ಹಾಕಬೇಕು. ಆಗ ಅವರ ಪಾರ್ಟಿ ಲೈಫ್ ಲಾಂಗ್ ಇರಲ್ಲ. ಬಿಜೆಪಿಯವರು ನಿಲ್ಲೋದಕ್ಕೂ ಹೆದರಬೇಕು. ಈ ಬಾರಿ ರಾಜ್ಯದಲ್ಲಿ ಬಿಜೆಪಿ ಸೋಲುತ್ತದೆ. ಆಗ ಇವರಿಗೆ ಗೊತ್ತಾಗುತ್ತದೆ. ಡಿಕೆ ಶಿವಕುಮಾರ್ ಮೈಂಡ್ ಹಿಂದುತ್ವದ್ದು ಸಿದ್ದರಾಮಯ್ಯ ಮೈಂಡ್ ಜಾತ್ಯಾತೀತ ಮೈಂಡ್. ಎರಡೂ ಒಂದೇ ಆಗಲು ಸಾಧ್ಯವಿಲ್ಲ ಎಂದು ಪರಸ್ಪರ ಮಾತನಾಡಿರುವ ಆಡಿಯೋ ಫೋನ್‍ನಲ್ಲಿ ರೆಕಾರ್ಡ್ ಆಗಿದೆ.
ಆಡಿಯೋ ಲೀಕ್ ಆಗಿದ್ದು ಹೇಗೆ ?
ಮಡಿಕೇರಿ ನಿವಾಸಿ ಶೇಷಪ್ಪ ರೈ ಎಂಬವರು ಮುಸ್ತಫಾ ಅವರಿಗೆ ಯಾವುದೋ ವ್ಯವಹಾರದ ವಿಷಯ ಮಾತನಾಡುವುದಕ್ಕೆ ಕರೆ ಮಾಡಿದ್ದಾರೆ. ಈ ವೇಳೆ ಮುಸ್ತಫಾ, ಶೇಷಪ್ಪ ರೈ ಅವರ ಫೋನ್ ಕಟ್ ಮಾಡುವ ಬದಲು, ಕನೆಕ್ಟ್ ಆಗಿರುವಾಗಲೇ ಆ ಫೋನನ್ನು ಜೇಬಿನಲ್ಲಿರಿಸಿಕೊಂಡು ತನ್ನ ಸ್ನೇಹಿತ ಅಬ್ದುಲ್ಲಾ ಜೊತೆಗೆ ಮಡಿಕೇರಿಗೆ ಬಾಂಬ್ ಹಾಕುವ ಬಗ್ಗೆ ಮಾತನಾಡಿದ್ದಾನೆ. ಆತನ ಮಾತುಗಳು ಮುಸ್ತಫಾಗೆ ಕರೆ ಮಾಡಿದ್ದ ಶೇಷಪ್ಪ ರೈ ಅವರ ಫೋನ್‌ನಲ್ಲಿ ಕಾಲ್ ರೆಕಾರ್ಡ್ ಆಗಿದೆ. ಇತ್ತೀಚೆಗೆ ಕಾಲ್ ರೆಕಾರ್ಡ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾಗ ಬಾಂಬ್ ಹಾಕುವ ವಿಚಾರ ಬೆಳಕಿಗೆ ಬಂದಿದ್ದು ಶೇಷಪ್ಪ ರೈ ಮಡಿಕೇರಿ ನಗರ ಠಾಣೆಗೆ ದೂರು ನೀಡಿದ್ದಾರೆ.
The Karnataka Police have arrested a corporator, who allegedly threatened to carry out bomb blasts in Madikeri city, police said on Sunday. Mustafa, a member of the Madikeri City Corporation, is attached to the JD(S) in Kodagu district.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:02 pm
HK News Desk
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm