ಬ್ರೇಕಿಂಗ್ ನ್ಯೂಸ್
16-10-22 10:54 pm HK News Desk ಕರ್ನಾಟಕ
ಬಳ್ಳಾರಿ, ಅ.16 : ಎಐಸಿಸಿ ಮುಖಂಡ ರಾಹುಲ್ ಗಾಂಧಿ ಗಣಿನಾಡು ಕರ್ನಾಟಕದಲ್ಲಿ 17 ದಿನಗಳಿಂದ ಕೈಗೊಂಡಿದ್ದ ಭಾರತ್ ಜೋಡೋ ಯಾತ್ರೆ ಭಾನುವಾರ ಸಂಜೆ ಆಂಧ್ರಪ್ರದೇಶಕ್ಕೆ ಪ್ರವೇಶಿಸಿದ್ದು ಕರ್ನಾಟಕ ಯಾತ್ರೆ ಅಂತ್ಯಗೊಂಡಿದೆ.
ಬಳ್ಳಾರಿ ಜಿಲ್ಲೆಯ ಸಂಗನಕಲ್ಲು ಗ್ರಾಮದ ಹೊರವಲಯದಲ್ಲಿ ಶನಿವಾರ ರಾತ್ರಿ ತಂಗಿದ್ದ ರಾಹುಲ್ ಗಾಂಧಿ ಭಾನುವಾರ ಬೆಳಗ್ಗೆ 6.30ಕ್ಕೆ ಗ್ರಾಮದ ಕಾಳಿದಾಸ ವೃತ್ತದಿಂದ ಯಾತ್ರೆ ಆರಂಭಿಸಿದರು. ಆರಂಭದಲ್ಲಿ ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ, ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಜೊತೆಗೆ ಹೆಜ್ಜೆ ಹಾಕಿದರು.
ಈ ನಡುವೆ, ಯಾತ್ರೆ ಮೋಕಾಕ್ಕೆ ತಲುಪಿದಾಗ ವಿದ್ಯುತ್ ಅವಘಡ ಸಂಭವಿಸಿದ್ದು ಯಾತ್ರೆಯಲ್ಲಿ ಪಾಲ್ಗೊಂಡಿದ್ದವರು ಗಲಿಬಿಲಿಗೆ ಒಳಗಾದರು. ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದಾಗಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ನಾಲ್ವರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ವಿದ್ಯುತ್ ಅವಘಡದ ಕಾರಣ ರಾಹುಲ್ ಜೊತೆಗಿದ್ದ ಎಸ್‌ಪಿಜಿ ಸಿಬಂದಿ ಕಟ್ಟುನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ.
ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸುರ್ಜೇವಾಲ ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಸ್‌ಪಿಜಿ ಕ್ಲಿಯರೆನ್ಸ್ ಸಿಕ್ಕ ನಂತರ ರಾಹುಲ್ ಗಾಂಧಿ ಕೂಡ ಆಸ್ಪತ್ರೆಗೆ ಆಗಮಿಸಿ ಗಾಯಾಳುಗಳಿಗೆ ಸಾಂತ್ವನ ಹೇಳಿದರು. ಸಂಜೆ ನಿಗದಿಯಾದಂತೆ 4.30ಕ್ಕೆ ಯಾತ್ರೆ ಆರಂಭಗೊಂಡ ವೇಳೆ ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲನಾಥ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದರು. ರಾಹುಲ್ ಗಾಂಧಿ ಜತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಕೆಲವರು ಮುಗಿಬಿದ್ದರಾದರೂ ಎಸ್‌ಪಿಜಿ ಅವಕಾಶ ಕೊಡಲಿಲ್ಲ.
ಅ.17ರಂದು ಎಐಸಿಸಿ ಚುನಾವಣೆ ನಿಮಿತ್ತ ಪಾದಯಾತ್ರೆ ಇರುವುದಿಲ್ಲ. ಅ.19ರಿಂದ ಆಂಧ್ರಪ್ರದೇಶದ ಛತ್ರಗುಡಿಯಿಂದ ಯಾತ್ರೆ ಪುನರಾರಂಭಗೊಳ್ಳಲಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ.
The miles, smiles and trials as Bharat Jodo completes 1,000 km
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 01:13 pm
HK News Desk
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm