ವಿಪಕ್ಷ ನಾಯಕ ಸಿದ್ದರಾಮಯ್ಯಗೂ ಕೊರೋನಾ ಪಾಸಿಟಿವ್

04-08-20 03:33 am       Bangalore Correspondent   ಕರ್ನಾಟಕ

ಮೂತ್ರಕೋಶದ ಸೋಂಕು ಹೆಚ್ಚಳವಾದ್ದರಿಂದ ಸೋಮವಾರ ಮಧ್ಯರಾತ್ರಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊರೋನಾ ತಪಾಸಣೆ ಮಾಡಲಾಗಿದ್ದು, ಇಂದು ಕೊರೋನಾ ಪಾಸಿಟಿವ್ ದೃಢಪಟ್ಟಿದೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ತಡರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲಿ ಕೊರೋನಾ ಟೆಸ್ಟ್ ನಡೆಸಲಾಗಿದ್ದು ಕೊರೋನಾ ಪಾಸಿಟಿವ್ ಬಂದಿದೆ.

15 ದಿನಗಳ ಹಿಂದೆ ಅವರಿಗೆ ಮೂತ್ರಕೋಶ ಸೋಂಕು ಕಾಣಿಸಿಕೊಂಡಿತ್ತು. ಮನೆಯಲ್ಲೇ ಮನೆಮದ್ದಾಗಿ ದಿನಕ್ಕೆ ಮೂರು ಬಾರಿ ಬಾರ್ಲಿ ಗಂಜಿ ಕುಡಿಯುತ್ತಿದ್ದರು. ಆದರೆ, ನಿನ್ನೆ ರಾತ್ರಿ ಅವರಿಗೆ ಮತ್ತೆ ನೋವು ಕಾಣಿಸಿಕೊಂಡಿದೆ. ಮಗ ಡಾ. ಯತೀಂದ್ರ ಅವರ ಸೂಚನೆ ಮೇರೆಗೆ ಸಿದ್ದರಾಮಯ್ಯ ಅವರನ್ನು ರಾತ್ರಿ 3:30ರ ಸುಮಾರಿಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂತರ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಕೋವಿಡ್-19 ಪರೀಕ್ಷೆಗಾಗಿ ಸ್ಯಾಂಪಲ್ ಪಡೆಯಲಾಗಿದೆ. ಕೋವಿಡ್ ವರದಿ ಬಂದಿದ್ದು, ಕೊರೋನಾ ಸೋಂಕು ದೃಢಪಟ್ಟಿದೆ.

ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ.

ಆತಂಕಕ್ಕೆ ಕಾರಣ ಇಲ್ಲ. ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕದಲ್ಲಿದ್ದವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ.

— Siddaramaiah (@siddaramaiah) August 4, 2020

 

ಈ ಬಗ್ಗೆ ಸಿದ್ದರಾಮಯ್ಯ ಇಂದು ಟ್ವೀಟ್ ಮಾಡಿದ್ದು, ನನ್ನ ಕೊರೋನಾ ತಪಾಸಣೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗಲಕ್ಷಣಗಳು ಇಲ್ಲದೇ ಇದ್ದರೂ ಆಸ್ಪತ್ರೆಗೆ ದಾಖಲಾಗಿದ್ದೇನೆ. ಯಾರೂ ಆತಂಕ ಪಡಬೇಕಾದ ಅಗತ್ಯವಿಲ್ಲ. ನನ್ನ ಸಂಪರ್ಕದಲ್ಲಿದವದರು ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಸಿಕೊಳ್ಳಿ ಹಾಗೂ ಕ್ವಾರಂಟೈನ್ ಆಗಿ ಎಂದು ಮನವಿ ಮಾಡಿದ್ದಾರೆ.