ಬ್ರೇಕಿಂಗ್ ನ್ಯೂಸ್
11-10-20 06:08 pm Headline Karnataka News Network ಕರ್ನಾಟಕ
ಕಾರವಾರ, ಅಕ್ಟೋಬರ್ 11 : ದೇಶದ ಒಟ್ಟು ಎಂಟು ಕಡಲತೀರಗಳಿಗೆ ಪ್ರತಿಷ್ಠಿತ 'ಬ್ಲೂ ಫ್ಲ್ಯಾಗ್' ಮಾನ್ಯತೆಯನ್ನು ನೀಡಲಾಗಿದ್ದು, ಈ ಪಟ್ಟಿಯಲ್ಲಿ ಹೊನ್ನಾವರ ತಾಲ್ಲೂಕಿನ ಕಾಸರಕೋಡು ಮತ್ತು ಉಡುಪಿ ಜಿಲ್ಲೆಯ ಪಡುಬಿದ್ರಿ ಸೇರಿಕೊಂಡಿದೆ.
ಇದರ ಜೊತೆಗೆ ಗುಜರಾತ್‌ನ ಶಿವರಾಜಪುರ, ಡಿಯುನ ಘೋಗ್ಲಾ, ಕೇರಳದ ಕಪ್ಪಾಡ್, ಆಂಧ್ರಪ್ರದೇಶದ ಋಷಿಕೊಂಡ, ಒಡಿಶಾದ ಗೋಲ್ಡನ್, ಮತ್ತು ಅಂಡಮಾನ್ ದ್ವೀಪದ ರಾಧಾನಗರ ಕಡಲ ತೀರಗಳಿಗೂ ಪ್ರಮಾಣ ಪತ್ರ ಘೋಷಣೆಯಾಗಿದೆ.
ಡೆನ್ಮಾರ್ಕ್ ನಲ್ಲಿರುವ “ಫೌಂಡೇಶನ್ ಫಾರ್ ಎನ್ವಿರಾನ್ಮೆಂಟ್ ಎಜುಕೇಷನ್ ” ಸಂಸ್ಥೆಯು ಪರಿಸರ ಶಿಕ್ಷಣ ಮತ್ತು ಮಾಹಿತಿ, ನೀರಿನ ಗುಣಮಟ್ಟ, ಪರಿಸರ ನಿರ್ವಹಣೆ ಮತ್ತು ಸಂರಕ್ಷಣೆ, ಭದ್ರತೆ ಹಾಗೂ ಸೇವೆ ಎಂಬ ಪ್ರಮುಖ ನಾಲ್ಕು ಭಾಗಗಳಲ್ಲಿ 33 ಮಾನದಂಡಗಳನ್ನಿಟ್ಟುಕೊಂಡು ಈ ಮಾನ್ಯತೆಯನ್ನು ನೀಡುತ್ತದೆ. ಇದನ್ನು ಭಾರತ ಸಹಿತ 47 ರಾಷ್ಟ್ರಗಳು ಮಾನ್ಯ ಮಾಡಿವೆ. ಬ್ಲೂ ಫ್ಲ್ಯಾಗ್ ಮಾನ್ಯತೆ ಪಡೆದ ಬೀಚ್ ಗಳನ್ನು ವಿಶ್ವದ ಅತಿ ಸ್ವಚ್ಛ ಕಡಲ ತಡಿಗಳೆಂದು ಪರಿಗಣಿಸಲಾಗುತ್ತದೆ.
ವಿಶ್ವದಲ್ಲಿ ಬ್ಲೂ ಫ್ಲ್ಯಾಗ್ ಪಡೆದಿರುವ 50 ದೇಶಗಳ ಪೈಕಿ, ಕಡಲತೀರಗಳ ಉತ್ತಮ ನಿರ್ವಹಣೆಗಾಗಿ ಭಾರತವು ಮೂರನೇ ಸ್ಥಾನ ಗೆದ್ದುಕೊಂಡಿದೆ. ಈ ಮೂಲಕ ಭಾರತವು ಪ್ರತಿಷ್ಠಿತ ದೇಶಗಳ ಸಾಲಿಗೆ ಸೇರಿದೆ ಎಂದು 'ಭಾರತೀಯ ಬ್ಲೂ ಫ್ಲ್ಯಾಗ್ ಕಡಲತೀರ' ಅಭಿಯಾನದ ನಾಯಕ ಸಂಜಯ್ ಜಲ್ಲಾ ತಿಳಿಸಿದ್ದಾರೆ.
In a major boost to tourism in Karnataka, the Kasarkod beach in Honnavar and Udupi Padubidri beach has been accorded the prestigious 'Blue Flag' tag.
15-07-25 12:27 pm
Bangalore Correspondent
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:32 am
Mangalore Correspondent
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
15-07-25 11:38 am
Mangalore Correspondent
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am