ಬ್ರೇಕಿಂಗ್ ನ್ಯೂಸ್
30-10-22 06:00 pm HK News Desk ಕರ್ನಾಟಕ
ಶಿವಮೊಗ್ಗ, ಅ.30: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತೀನಿ ಅನ್ನೋದನ್ನು ಇನ್ನೊಂದು ತಿಂಗಳಲ್ಲಿ ನಿರ್ಧಾರ ಮಾಡುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಬಾದಾಮಿ, ವರುಣಾ, ಚಾಮರಾಜನಗರ, ಕೋಲಾರ ಸೇರಿದಂತೆ ಆರೇಳು ಕ್ಷೇತ್ರದಿಂದ ಸ್ಪರ್ಧೆಗೆ ಒತ್ತಡ ಇದೆ. ವರುಣಾ ಕ್ಷೇತ್ರದಲ್ಲಿ ಮಗ ಯತೀಂದ್ರ ಶಾಸಕರಾಗಿದ್ದಾರೆ. ಹಾಗಾಗಿ ಇನ್ನೊಂದು ತಿಂಗಳಲ್ಲಿ ತಾವು ಸ್ಪರ್ಧೆ ಮಾಡುವ ಕ್ಷೇತ್ರವನ್ನು ಫೈನಲ್ ಮಾಡುತ್ತೇನೆ ಎಂದು ತಿಳಿಸಿದರು.
ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಬಿಜೆಪಿ ನಾಯಕರ ಟೀಕೆ ಕುರಿತು ಕೇಳಿದ ಪ್ರಶ್ನೆಗೆ, ನರೇಂದ್ರ ಮೋದಿ ಅವರು ವಾರಣಾಸಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧೆ ಮಾಡಿದರು. ಅದನ್ನು ಬೇರೆ ರೀತಿ ಬಿಂಬಿಸುತ್ತೀರಾ. ನಾನು ಬೇರೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೆ ವಿಭಿನ್ನ ವ್ಯಾಖ್ಯಾನವೇಕೆ ಎಂದು ತಿರುಗೇಟು ನೀಡಿದರು.
ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಧರ್ಮ ಸಂಘರ್ಷ, ದ್ವೇಷ ರಾಜಕಾರಣ ಹೆಚ್ಚಾಗಿದೆ. ಧರ್ಮ ಸಂಘರ್ಷ ಹೆಚ್ಚಾದರೆ ಮನಸುಗಳು ಒಡೆದು ಹೋಗುತ್ತವೆ. ಆರ್.ಎಸ್.ಎಸ್ ಕಾರ್ಯಕರ್ತರು ಕಾನೂನು ಕೈಗೆತ್ತಿಕೊಳ್ಳಲು ಪ್ರಾರಂಭಿಸಿದ್ದಾರೆ. ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಬಿಜೆಪಿಯವರು ಸಹಜ ಸಾವಿಗೂ ಜಾತಿ, ಧರ್ಮದ ಲೇಪನ ಮಾಡುತ್ತಿದ್ದಾರೆ. ಪರೇಶ್ ಮೇಸ್ತ ಪ್ರಕರಣ ಇದಕ್ಕೆ ಉದಾಹರಣೆಯಾಗಿದೆ. ಬಿಜೆಪಿಯ ಪ್ರಧಾನಿ, ಅವರದ್ದೇ ಗೃಹಸಚಿವರು ಇದ್ದಾಗ ತಾನು ಪ್ರಕರಣವನ್ನು ಸಿಬಿಐಗೆ ವಹಿಸಿದೆ. ಅದು ಕೊಲೆಯಲ್ಲ ಆಕಸ್ಮಿಕ ಸಾವು ಎಂದು ವರದಿ ಬಂದಿದೆ. ಈಗ ಸಿದ್ದರಾಮಯ್ಯ ಸಾಕ್ಷಿ ನಾಶ ಮಾಡಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಿದ್ದಾರೆ. 2008ರಿಂದ ಈಚೆಗೆ ಬಿಜೆಪಿ ಒಂದೇ ಒಂದು ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ ಎಂದರು.
At an event last month in Varuna Assembly constituency, former Karnataka Chief Minister Siddaramaiah suggested that he might return to what is his old seat for the state polls in 2023. While Siddaramiah has won the seat twice earlier, it is being seen as a setback for the veteran, who had expressed his desire to contest from other constituencies.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm