ಬ್ರೇಕಿಂಗ್ ನ್ಯೂಸ್
01-11-22 01:24 pm Bangalore Correspondent ಕರ್ನಾಟಕ
ಬೆಂಗಳೂರು, ನ.01: 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಉಪ ಚುನಾವಣೆ ವೇಳೆ ನಾಮಪತ್ರದಲ್ಲಿ ತನ್ನ ಕುರಿತು ಅಪೂರ್ಣ ಮಾಹಿತಿ ನೀಡಿದ್ದ ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
ರಮೇಶ್ ಜಾರಕಿಹೊಳಿಯವರು ಚುನಾವಣಾ ನಾಮಪತ್ರದ ಜತೆಗೆ ಮೊದಲು 2018ರ ಏ.23ರಂದು ಪ್ರಮಾಣಪತ್ರ ಸಲ್ಲಿಸಿದ್ದರು. ನಂತರ 2019ರ ನ.18ರಂದು ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದಾಗ ಚುನಾವಣಾ ಆಯೋಗಕ್ಕೆ ಪ್ರತ್ಯೇಕ ಪ್ರಮಾಣಪತ್ರ ಸಲ್ಲಿಸಿದ್ದರು. ಈ ಎರಡೂ ಪ್ರಮಾಣ ಪತ್ರಗಳಲ್ಲಿ ಅಪೂರ್ಣ ಮಾಹಿತಿ ನೀಡುವುದರ ಜತೆಗೆ ಕೆಲವು ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ.
ರಮೇಶ್ ಜಾರಕಿಹೊಳಿ ಕುಟುಂಬ ಸದಸ್ಯರು ನಿರ್ದೇಶಕರಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆ 578 ಕೋಟಿ ರೂ. ಸಾಲ ಮಾಡಿದ್ದು, ಇದರ ವಿವರಗಳನ್ನು ಪ್ರಮಾಣಪತ್ರದಲ್ಲಿ ನಮೂದಿಸಿಲ್ಲ. ರೈತರಿಗೆ ಸುಮಾರು 50 ಕೋಟಿ ರೂ. ಬಾಕಿ ನೀಡಬೇಕಾಗಿದ್ದು, ಅದರ ಮಾಹಿತಿಯೂ ಕೊಟ್ಟಿಲ್ಲ. ಆದಾಯ ತೆರಿಗೆ ಇಲಾಖೆಗೆ 150 ಕೋಟಿ ರೂ. ಪಾವತಿ ಮಾಡಬೇಕಿದ್ದು, ಅದರ ವಿವರಗಳನ್ನೂ ಮುಚ್ಚಿಟ್ಟಿದ್ದಾರೆ.
ಇದು ಪ್ರಜಾಪ್ರತಿನಿಧಿ ಕಾಯ್ದೆಯ ಕಲಂ 125-ಎ ಅನ್ವಯ ಉಲ್ಲಂಘನೆಯಾಗಿದ್ದು, ಶಿಕ್ಷಾರ್ಹ ಅಪರಾಧವಾಗಿದೆ. ಇದರ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ.
M. Lakshmana, spokesperson of the Karnataka Pradesh Congress Committee, on Monday submitted a petition to the Election Commission of India to consider the alleged false affidavit filed by Ramesh Laxman Rao Jarkiholi, BJP MLA, during the 2019 byelection to Gokak Assembly constituency and demanded a probe by the Central Board of Direct Taxes and the Enforcement Directorate in public interest.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm