ಬ್ರೇಕಿಂಗ್ ನ್ಯೂಸ್
01-11-22 10:17 pm Bangalore Correspondent ಕರ್ನಾಟಕ
ಬೆಂಗಳೂರು, ನ.1 : ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ರಾಜ್ಯ ಸರ್ಕಾರದಿಂದ ಮರಣೋತ್ತರ ನೆಲೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ವಿಧಾನಸೌಧದ ಹೊರಗಿನ ಮೆಟ್ಟಿಲಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆದಿದ್ದು ಪ್ರಶಸ್ತಿಯನ್ನು ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಗೆ ಪ್ರದಾನ ಮಾಡಲಾಯಿತು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸೂಪರ್ ಸ್ಟಾರ್ ರಜನಿಕಾಂತ್, ಜೂ.ಎನ್ಟಿಆರ್ ಅವರು ಜೊತೆಯಾಗಿ ಪ್ರಶಸ್ತಿ ಪ್ರದಾನ ಮಾಡುತ್ತಿದ್ದಂತೆ ಹೊರಗೆ ಅದೇ ಸಮಯದಲ್ಲಿ ವರುಣ ಸಿಂಚನವಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳಿಂದಲೂ ಹರ್ಷೋದ್ಗಾರ ಹೊರಹೊಮ್ಮಿತು. ಭಾರೀ ಸಂಖ್ಯೆಯಲ್ಲಿ ವಿಧಾನಸೌಧ ಹೊರ ಆವರಣದಲ್ಲಿ ಜನರು, ಅಭಿಮಾನಿಗಳು ಸೇರಿದ್ದರು.





ಇದೇ ವೇಳೆ, ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಪುನೀತ್ ಅವರನ್ನು ಕನ್ನಡಿಗರು ಯಾವತ್ತಿಗೂ ಮರೆಯಲ್ಲ. ಕೇವಲ 46 ವರ್ಷಗಳಲ್ಲಿ ಅವರು ನೀಡಿದ ಕೊಡುಗೆ ಚಿರಸ್ಮರಣೀಯ. ನಾವು ಕನ್ನಡಿಗರು ಅಪ್ಪುವನ್ನು ದಿನವೂ ನೆನೆಯುತ್ತೇವೆ. ಮತ್ತೊಮ್ಮೆ ಹುಟ್ಟಿ ಬರುವಂತೆ ನಾವು ಅಪ್ಪು ಬಳಿ ಕೇಳಿಕೊಳ್ಳುತ್ತೇವೆ. ಇದೇ ಕನ್ನಡ ನಾಡಿನಲ್ಲಿ ಮತ್ತೆ ಹುಟ್ಟಿ ಬಾ ಅಪ್ಪು ಎಂದು ಭಾವುಕರಾಗಿ ಹೇಳಿದರು.


ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಕನ್ನಡದಲ್ಲಿಯೇ ಮಾತನಾಡಿ ಪುನೀತ್ ಮತ್ತು ರಾಜಕುಮಾರ್ ಜೊತೆಗಿನ ಒಡನಾಟವನ್ನು ಸ್ಮರಿಸಿದರು. ಶಿವ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಸೇರಿದಂತೆ ಚಿತ್ರರಂಗದ ಪ್ರಮುಖರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. ಹೊರಗಡೆ ಮಳೆ ಹನಿಯುತ್ತಿದ್ದರೂ ಜನರು ಮಳೆಯ ನಡುವೆಯೇ ನಿಂತು ಕಾರ್ಯಕ್ರಮ ವೀಕ್ಷಿಸಿದರು.
Karnataka government conferred 'Karnataka Ratna' award to late Kannada superstar Puneeth Rajkumar on Tuesday at a grand function held in the premises of the Vidhana Soudha.Thousands of fans witnessed the programme amid rains and cheered the recognition to their favourite star in the presence of Tamil superstar Rajinikanth, Telugu superstar Jr NTR and Indian author, educator, philanthropist and chairperson of Infosys Foundation Sudha Murthy.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm