ನ.11ರಿಂದ ಬೆಂಗಳೂರು- ಮೈಸೂರು- ಚೆನ್ನೈ ಮಧ್ಯೆ ವಂದೇ ಭಾರತ್ ಎಕ್ಸ್‌ಪ್ರೆಸ್‌ ; ಇದರ ವಿಶೇಷತೆ ಏನು ಗೊತ್ತಾ? 

03-11-22 12:47 pm       Bangalore Correspondent   ಕರ್ನಾಟಕ

ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ದಕ್ಷಿಣ ಭಾರತದ ಮೊದಲ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿಗೆ ಚಾಲನೆ ನೀಡಲಿದ್ದಾರೆ. ಇದು ದೇಶದ ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್. ಬೆಂಗಳೂರಿನಿಂದ ಚೆನ್ನೈ ಮತ್ತು ಮೈಸೂರು ನಡುವೆ ರೈಲು ಓಡಲಿದೆ. 

ಬೆಂಗಳೂರು, ನ.3: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11ರಂದು ದಕ್ಷಿಣ ಭಾರತದ ಮೊದಲ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲಿಗೆ ಚಾಲನೆ ನೀಡಲಿದ್ದಾರೆ. ಇದು ದೇಶದ ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್. ಬೆಂಗಳೂರಿನಿಂದ ಚೆನ್ನೈ ಮತ್ತು ಮೈಸೂರು ನಡುವೆ ರೈಲು ಓಡಲಿದೆ. 

ನವೆಂಬರ್ 5 ರಂದು ಈ ಸೆಮಿ ಹೈ ಸ್ಪೀಡ್ ರೈಲು ಇಂಟಗ್ರೇಟೆಡ್ ಕೋಚ್ ಫ್ಯಾಕ್ಟರಿಯಿಂದ ಪ್ರಾಯೋಗಿಕ ಸಂಚಾರ ನಡೆಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್, ಭಾರತದ ಮೊದಲ ಅತಿ ವೇಗದ ರೈಲು. ಇದು ವಿಶ್ವದರ್ಜೆಯ ಪ್ರಯಾಣಿಕರ ಸೌಕರ್ಯಗಳನ್ನು ಹೊಂದಿದೆ. ಪ್ರಯಾಣದ ಸಮಯವನ್ನು ಶೇ.25 ರಿಂದ 45 ರಷ್ಟು ಕಡಿಮೆ ಮಾಡುತ್ತದೆ. ರೈಲು 0-100 ಕಿಮೀ ವೇಗವನ್ನು 52 ಸೆಕೆಂಡುಗಳಲ್ಲಿ ತಲುಪುತ್ತದೆ. ಎಲ್ಲಾ ವಂದೇ ಭಾರತ್ ಕೋಚ್‌ಗಳು ಸ್ವಯಂಚಾಲಿತ ಬಾಗಿಲುಗಳನ್ನು ಹೊಂದಿವೆ. 

Vande Bharat Express Train: Travel in luxury New Delhi to Katra

GPS ಆಧಾರಿತ ಆಡಿಯೋ-ದೃಶ್ಯ, ಪ್ರಯಾಣಿಕರ ಮಾಹಿತಿ ವ್ಯವಸ್ಥೆ, ಮನರಂಜನಾ ಉದ್ದೇಶಗಳಿಗಾಗಿ ಆನ್-ಬೋರ್ಡ್ ಹಾಟ್‌ಸ್ಪಾಟ್ Wi-Fi ಮತ್ತು ಅತ್ಯಂತ ಆರಾಮದಾಯಕ ಆಸನ ಈ ರೈಲಿನ ವಿಶೇಷತೆ. ತಿರುಗುವ ಕುರ್ಚಿಗಳನ್ನು ಸಹ ಹೊಂದಿರುತ್ತದೆ. ರೈಲಿನಲ್ಲಿ ಶೌಚಾಲಯಗಳು ಜೈವಿಕ ನಿರ್ವಾತ ಮಾದರಿಯವು. ದಿವ್ಯಾಂಗ್ ಸ್ನೇಹಿ ವಾಶ್ ರೂಂಗಳು ಮತ್ತು ಬ್ರೈಲ್ ಅಕ್ಷರಗಳಲ್ಲಿ ಸೀಟ್ ಸಂಖ್ಯೆಗಳೊಂದಿಗೆ ಸೀಟ್ ಹ್ಯಾಂಡಲ್ ಅನ್ನು ಸಹ ರೈಲಿನಲ್ಲಿ ಒದಗಿಸಲಾಗಿದೆ. ಪ್ರತಿ ಕೋಚ್‌ನಲ್ಲಿ ಬಿಸಿ ಊಟ, ಬಿಸಿ ಮತ್ತು ತಂಪು ಪಾನೀಯಗಳನ್ನು ಪೂರೈಸಲು ಪ್ಯಾಂಟ್ರಿ ಇದೆ.

ಮೈಸೂರು-ಬೆಂಗಳೂರು-ಚೆನ್ನೈ ವಂದೇ ಭಾರತ್‌ ಎಕ್ಸ್‌ಪ್ರೆಸ್‌ ವೇಳಾಪಟ್ಟಿ | Vande Bharat  Express Chennai-Bengaluru-Mysuru route, train number, schedule, timings,  stations details - Kannada Oneindia

20607 ಎಂಜಿಆರ್ ಚೆನ್ನೈ ಸೆಂಟ್ರಲ್-ಮೈಸೂರು ಜಂಕ್ಷನ್ ವಂದೇ ಭಾರತ್ ಎಕ್ಸ್‌ಪ್ರೆಸ್ ಬೆಂಗಳೂರು ಸಿಟಿ ಜಂಕ್ಷನ್‌ನಲ್ಲಿ ಕೇವಲ 1 ನಿಲುಗಡೆಯನ್ನು ಹೊಂದಿರುತ್ತದೆ. ಎಂಜಿಆರ್ ಚೆನ್ನೈ ಸೆಂಟ್ರಲ್‌ನಿಂದ ಬೆಳಗ್ಗೆ 5:50ಕ್ಕೆ ಹೊರಟು ಬೆಳಗ್ಗೆ 10:25ಕ್ಕೆ ಬೆಂಗಳೂರು ಸಿಟಿ ಜಂಕ್ಷನ್‌ಗೆ ತಲುಪಲಿದೆ. ಬೆಂಗಳೂರಿನಿಂದ ಬೆಳಗ್ಗೆ 10:30ಕ್ಕೆ ಹೊರಟು ಮಧ್ಯಾಹ್ನ 12:30ಕ್ಕೆ ಮೈಸೂರನ್ನು ತಲುಪಲಿದೆ.

Replacing Chocolate Bars With Peanut Chikki: Vande Bharat Express To Offer  Low Calorie Meals To Passengers | India.com

ರೈಲು ಸುಮಾರು 497 ಕಿ.ಮೀ ದೂರವನ್ನು 6 ಗಂಟೆ 40 ನಿಮಿಷಗಳಲ್ಲಿ ಕ್ರಮಿಸಲಿದೆ. ವಂದೇ ಭಾರತ್ ಎಕ್ಸ್‌ಪ್ರೆಸ್ ಭಾನುವಾರ, ಸೋಮವಾರ, ಮಂಗಳವಾರ, ಗುರುವಾರ, ಶುಕ್ರವಾರ ಮತ್ತು ಶನಿವಾರ ವಾರದಲ್ಲಿ ಆರು ದಿನ ಚಲಿಸುತ್ತದೆ. ಹಿಂದಿರುಗುವ ಪ್ರಯಾಣದಲ್ಲಿ ಮೈಸೂರು ಜಂಕ್ಷನ್‌ನಿಂದ ಮಧ್ಯಾಹ್ನ 1:05 ಕ್ಕೆ ಹೊರಟು 2:55 ಕ್ಕೆ ಬೆಂಗಳೂರು ಸಿಟಿ ಜಂಕ್ಷನ್‌ಗೆ ತಲುಪಲಿದೆ. ಬೆಂಗಳೂರು ಸಿಟಿ ಜಂಕ್ಷನ್‌ನಿಂದ ಮಧ್ಯಾಹ್ನ 3 ಗಂಟೆಗೆ ಹೊರಡುವ ರೈಲು ರಾತ್ರಿ 7:35 ಕ್ಕೆ ಎಂಜಿಆರ್ ಚೆನ್ನೈ ಸೆಂಟ್ರಲ್ ತಲುಪಲಿದೆ.

The semi-high-speed train Vande Bharat Express will start to run on the Mysuru-Bengaluru-Chennai route from November 11. The train that has a maximum speed of 160-180kmh will run at a speed of 75-77kmh on the route, a bit faster than the Shatabdi Express.