ಪಿಎಸ್ಐ ನೇಮಕಾತಿ ಹಗರಣ ; ಮೊದಲ ರ‍್ಯಾಂಕ್ ಪಡೆದಿದ್ದ ಸುಪ್ರಿಯಾ ಹುಂಡೇಕರ್ ಸಿಐಡಿ ಬಲೆಗೆ, 52ಕ್ಕೇರಿದ ಬಂಧಿತರ ಸಂಖ್ಯೆ 

03-11-22 03:37 pm       HK News Desk   ಕರ್ನಾಟಕ

ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಪರೀಕ್ಷೆಯಲ್ಲಿ ಫಸ್ಟ್‌ ರ‍್ಯಾಂಕ್ ಪಡೆದಿದ್ದ ಜೇವರ್ಗಿಯ ಸುಪ್ರಿಯಾ ಹುಂಡೇಕರ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 

ಕಲಬುರಗಿ, ನ.3 : ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿ ಪರೀಕ್ಷೆಯಲ್ಲಿ ಫಸ್ಟ್‌ ರ‍್ಯಾಂಕ್ ಪಡೆದಿದ್ದ ಜೇವರ್ಗಿಯ ಸುಪ್ರಿಯಾ ಹುಂಡೇಕರ್‌ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. 

ಪಿಎಸ್​ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿ ಇದುವರೆಗೆ 52 ಮಂದಿಯನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿಯಲ್ಲಿ 8 ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ಸಿಐಡಿ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದೆ. ರಾಜ್ಯ ಸರ್ಕಾರವು 2021ರ ಅಕ್ಟೋಬರ್‌ನಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳ ನೇಮಕಾತಿಗಾಗಿ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಿತ್ತು. 50 ಸಾವಿರಕ್ಕೂ ಹೆಚ್ಚು ಮಂದಿ ಪರೀಕ್ಷೆ ಬರೆದಿದ್ದರು. 

PSI exam scam: CID summons toppers for questioning | udayavani

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕು ಹಿಪ್ಪರಗಿ ಗ್ರಾಮದ ಸುಪ್ರೀಯಾ ಹುಂಡೇಕರ್‌ ಅವರು ಬ್ಲೂಟೂತ್‌ ಬಳಸಿ ಪರೀಕ್ಷೆ ಬರೆದ ಆರೋಪ ಎದುರಿಸುತ್ತಿದ್ದಾರೆ. ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಪರೀಕ್ಷೆ ಬರೆದಿದ್ದು ಫಸ್ಟ್‌ ರ‍್ಯಾಂಕ್ ಪಡೆದಿದ್ದರು. ಸುಪ್ರಿಯಾ ಅವರ ವಿಚಾರಣೆಯ ಬಳಿಕ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಇತರರ ಮಾಹಿತಿಯೂ ಲಭ್ಯವಾಗಬಹುದು. 

ಸುಪ್ರಿಯಾ ಅವರು ಕಲಬುರಗಿಯ ಸರ್ಕಾರಿ ಪದವಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗಳ ನೇಮಕಾತಿ ಪರೀಕ್ಷೆ ಬರೆದಿದ್ದರು. ಅವರು 1ನೇ ಪತ್ರಿಕೆಯಲ್ಲಿ 50ಕ್ಕೆ 24, 2ನೇ ಪತ್ರಿಕೆಯಲ್ಲಿ 150ಕ್ಕೆ 131.25 ಅಂಕ ಪಡೆದಿದ್ದರು. ಎರಡೂ ಪತ್ರಿಕೆಗಳಿಂದ ಒಟ್ಟು 155.25 ಅಂಕ ಪಡೆದಿದ್ದ ಸುಪ್ರಿಯಾ ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆಗೆ ಆಯ್ಕೆಯಾಗಿದ್ದರು.

The CID police has arrested Supriya Hundekar, who got the first rank, in connection with the illegal recruitment of sub-inspector posts (PSI Recruitment Scam). The CID team, which has intensified the investigation of the case, has laid a trap for the arrest of another accused and is conducting a search. Supriya, a resident of Hipparaga village in Jewargi taluk of Kalaburgi district, is facing charges of writing the exam using Bluetooth. He got first rank in Kalyan Karnataka Quota. CID officials are expecting that after Supriya's interrogation, the information of more people who wrote the exam illegally will be available.