ಬ್ರೇಕಿಂಗ್ ನ್ಯೂಸ್
03-11-22 04:08 pm Bangalore Correspondent ಕರ್ನಾಟಕ
ಬೆಂಗಳೂರು, ನ.3 : ತುಮಕೂರಿನ ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ಚಿತ್ರನಟ ಶಶಿಕುಮಾರ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಇಬ್ಬರು ಮುಖಂಡರು ಕೇಸರಿ ಪಕ್ಷ ಸೇರಿದ್ದಾರೆ.
ಇವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಂಡರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವರಾದ ಗೋವಿಂದ ಕಾರಜೋಳ, ಸಿ.ಪಿ.ಯೋಗೀಶ್ವರ್, ರಾಜ್ಯಸಭೆ ಸದಸ್ಯ ಜಗ್ಗೇಶ್, ಮಸಾಲಾ ಜಯರಾಂ ಸೇರಿದಂತೆ ಹಲವು ಪ್ರಮುಖರು ಸಮಾರಂಭದಲ್ಲಿ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮುದ್ದಹನುಮೇಗೌಡ, ಶಶಿಕುಮಾರ್ ಸೇರ್ಪಡೆಯಿಂದ ಬಿಜೆಪಿಗೆ ಬಲ ಬಂದಿದೆ' ಎಂದು ಅಭಿಪ್ರಾಯಪಟ್ಟರು. ಕಾಂಗ್ರೆಸ್ ಪಕ್ಷದಲ್ಲಿ ಜನರಿಗೆ ವಿಶ್ವಾಸವಿಲ್ಲ. ಜನಪರ ಕೆಲಸಗಳನ್ನು ಬಿಜೆಪಿ ಮಾಡುತ್ತಿದೆ. ಜನರು ಬಿಜೆಪಿಯಲ್ಲಿ ವಿಶ್ವಾಸ ಇರಿಸಿದ್ದಾರೆ. ಮುದ್ದಹನುಮೇಗೌಡ ಜನಪರ ನಾಯಕರು. ಶಶಿ ಕುಮಾರ್ ನಮ್ಮಲ್ಲೆ ಇದ್ದವರು. ಈಗ ಮತ್ತೆ ಗೂಡಿಗೆ ಮರಳಿದ್ದಾರೆ ಎಂದು ಬೊಮ್ಮಾಯಿ ಹೇಳಿದರು.
ದೇಶದಲ್ಲಿ ಬಿಜೆಪಿಗೆ ಜನಮನ್ನಣೆ ಇದೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಕಾರಣ. ನಾನು ಅನೇಕ ಬಾರಿ ಲೋಕಸಭೆ ಕಲಾಪದಲ್ಲಿ ಭಾಗವಹಿಸಿದ್ದೇನೆ. ಮೋದಿಯವರು ಯಾವತ್ತಿಗೂ ಮುಜುಗರ ಆಗುವ ರೀತಿಯಲ್ಲಿ ಮತನಾಡಿಲ್ಲ. ತುಮಕೂರಿನ ಕಾರ್ಯಕರ್ತರ ಜೊತೆಗೂ ನನಗೆ ಹತ್ತಿರದ ಸಂಬಂಧವಿದೆ ಎಂದು ಮುದ್ದಹನುಮೇಗೌಡ ತಿಳಿಸಿದರು.
ಇದೇ ವೇಳೆ ಮಾತನಾಡಿದ ಚಿತ್ರದುರ್ಗದ ಮಾಜಿ ಸಂಸದ ಶಶಿಕುಮಾರ್, 'ಬಿಜೆಪಿಗೆ ನಾನು ಹಳಬ. ಈ ಹಿಂದೆ ಜೆಡಿಯುನಲ್ಲಿದ್ದಾಗ ಎನ್‌ಡಿಎ ಕೂಟದ ಭಾಗವಾಗಿದ್ದೆ. ವಾಜಪೇಯಿ ಜೊತೆ ಕೆಲಸ ಮಾಡಿದ್ದೇನೆ. ನಾನು ನಾಯಕ ಸಮುದಾಯದವನು. ನಾನೊಬ್ಬ ನಟ. ಎಲ್ಲ ಸಮುದಾಯಗಳನ್ನು ಒಂದೇ ರೀತಿಯಲ್ಲಿ ನೋಡುತ್ತೇನೆ. ಪಕ್ಷ ನೀಡುವ ಜವಾಬ್ದಾರಿಗಳನ್ನು ನಿಭಾಯಿಸುತ್ತೇನೆ. ಪಕ್ಷಕ್ಕೆ ಸ್ವಾಗತಿಸಿದ ನಾಯಕರಿಗೆ ಧನ್ಯವಾದಗಳು ಎಂದರು.
Kannada actor and former MP Shashi Kumar and former MP S P Muddahanumegowda joined the BJP at a program held at the BJP office in Malleswaram, Bengaluru, on Wednesday.In addition, retired IAS officer B H Anil Kumar, Seva Dal state vice president Hanumanth Rao Javali, Ramesh Muniyappa, G Venkatachalaiah also joined the BJP on Wednesday.Karnataka Chief Minister Basavaraj Bommai and BJP state president Nalin Kumar Kateel, along with other BJP members and activists, welcomed the new members into the party at the event.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm