ಬ್ರೇಕಿಂಗ್ ನ್ಯೂಸ್
03-11-22 06:38 pm HK News Desk ಕರ್ನಾಟಕ
ದಾವಣಗೆರೆ, ನ.3 : ಐದು ದಿನಗಳಿಂದ ನಾಪತ್ತೆಯಾಗಿ ಸಂಚಲನ ಸೃಷ್ಟಿಸಿದ್ದ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರ ಸೋದರನ ಪುತ್ರ ಚಂದ್ರಶೇಖರ್ ಶವವಾಗಿ ಪತ್ತೆಯಾಗಿದ್ದು ಆತಂಕದ ವಾತಾವರಣ ನೆಲೆಯಾಗಿದೆ. ಹೊನ್ನಾಳಿ ತಾಲೂಕಿನ ತುಂಗಾ ಮೇಲ್ದಂಡೆ ಕಾಲುವೆಯಲ್ಲಿ ಕಾರು ಸಹಿತ ಶವ ಪತ್ತೆಯಾಗಿದೆ.
ಐದು ದಿನಗಳ ಹಿಂದೆ ರೇಣುಕಾಚಾರ್ಯ ಸೋದರನ ಪುತ್ರ ಚಂದ್ರಶೇಖರ್ ಕಾರಿನಲ್ಲಿ ತೆರಳಿದ್ದವರು ಎಲ್ಲಿ ಹೋಗಿದ್ದಾರೆಂದು ತಿಳಿಯದೆ ಶಾಸಕ ರೇಣುಕಾಚಾರ್ಯ ಮತ್ತು ಕುಟುಂಬಸ್ಥರು ಆತಂಕಕ್ಕೆ ಒಳಗಾಗಿದ್ದರು. ಪೊಲೀಸರು ಪ್ರಕರಣದ ಬೆನ್ನತ್ತಿದ್ದರೂ ಕೂಡ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಹೊನ್ನಾಳಿ-ನ್ಯಾಮತಿ ಮಧ್ಯ ಭಾಗದ ಕಡದಕಟ್ಟೆ ಬಳಿ ಕಾಲುವೆಯಲ್ಲಿ ಚಂದ್ರಶೇಖರ್ ಕಾರು ಮತ್ತು ಅದರಲ್ಲಿ ಶವ ಪತ್ತೆಯಾಗಿದೆ. ತುಂಗಾ ನದಿಯ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು ಕೊಲೆಯೋ, ಅಪಘಾತವೋ ಎನ್ನುವುದು ಗೊತ್ತಾಗಿಲ್ಲ.
ಕಡದಕಟ್ಟೆಯ ತುಂಗಾ ಕಾಲುವೆ ಬಳಿ ಕಾರು ಸಂಚರಿಸಿರುವ ಕುರುಹುಗಳು ಪತ್ತೆಯಾಗಿದ್ದವು. ಪೊಲೀಸರು ಪರಿಶೀಲನೆ ನಡೆಸಿದಾಗ, ಕಾರು ಸಹ ತುಂಗ ಕಾಲುವೆಯಲ್ಲಿ ಪತ್ತೆಯಾಗಿದೆ.
ಕಡದಕಟ್ಟೆ ಗ್ರಾಮದ ಬಳಿ ಇರುವ ತುಂಗಾ ಕಾಲುವೆಯಲ್ಲಿ ಬಿಳಿ ಬಣ್ಣದ ಕಾರು ಪತ್ತೆಯಾಗಿದ್ದು, ಕ್ರೇನ್ ಬಳಸಿ ಪೊಲೀಸರು ಕಾರನ್ನು ಮೇಲೆತ್ತಿದ್ದಾರೆ. ಬಳಿಕ ಕಾರಿನಲ್ಲಿ ಚಂದ್ರಶೇಖರ್ ಶವ ಪತ್ತೆಯಾಗಿದ್ದು ತನಿಖೆ ಕೈಗೊಂಡಿದ್ದಾರೆ.
ಗುರುವಾರ ಬೆಳಗ್ಗೆ ಚಂದ್ರಶೇಖರ್ ಬಗ್ಗೆ ಯಾವುದೇ ಮಾಹಿತಿ ದೊರಕದ ಕಾರಣ ಶಾಸಕ ರೇಣುಕಾಚಾರ್ಯ, ಅಪಹರಣ ಆಗಿರುವ ಶಂಕೆ ವ್ಯಕ್ತಪಡಿಸಿದ್ದರು. ಅಲ್ಲದೆ, ಹಣ ಕೇಳಿದರೆ ಕೊಡಲು ಸಿದ್ಧನಿದ್ದೇನೆ ಎಂದು ಭಾವುಕರಾಗಿ ಹೇಳಿಕೊಂಡಿದ್ದರು. ಇದರ ಬೆನ್ನಲ್ಲೇ ಶವ ಪತ್ತೆಯಾಗಿದ್ದು ಬಿಜೆಪಿ ಸರಕಾರಕ್ಕೂ ಸವಾಲಾಗಿ ಪರಿಣಮಿಸಿದೆ.
Political Secretary to the Chief Minister and Honnalli MLA MP Renukacharya's nephew Chandrashekhar's body was found inside his car at Tunga canal near Kadakatte village in Honnali taluk of Davanagere district, TV9 Kannada reported. He had been missing since October 30. On Thursday afternoon locals spotted a car in the canal and informed the police. The district administration along with Renukacharya reached the spot. The car with registration number KA-17-MA-2534 was removed from the canal using a crane in which Chandrashekhar's body was found.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm