ಪಿಎಸ್ಐ ಅಕ್ರಮ, ಪರೀಕ್ಷೆ ರದ್ದು ಹಿನ್ನೆಲೆ ; ಅಭ್ಯರ್ಥಿ ವಯೋಮಿತಿ ಎರಡು ವರ್ಷ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ 

04-11-22 01:05 pm       Bangalore Correspondent   ಕರ್ನಾಟಕ

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದು ಪರೀಕ್ಷೆ ರದ್ದುಗೊಳಿಸಿದ್ದರಿಂದ ವಯೋಮಿತಿ ಹೆಚ್ಚಿಸಬೇಕೆಂದು ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದರು. ಇದರಂತೆ, ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ. 

ಬೆಂಗಳೂರು, ನ.4 : ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದು ಪರೀಕ್ಷೆ ರದ್ದುಗೊಳಿಸಿದ್ದರಿಂದ ವಯೋಮಿತಿ ಹೆಚ್ಚಿಸಬೇಕೆಂದು ಅಭ್ಯರ್ಥಿಗಳು ಬೇಡಿಕೆ ಇಟ್ಟಿದ್ದರು. ಇದರಂತೆ, ರಾಜ್ಯ ಸರ್ಕಾರ ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ ಎರಡು ವರ್ಷಗಳಿಗೆ ಹೆಚ್ಚಿಸಿ ಆದೇಶಿಸಿದೆ. 

ಈ ಮೂಲಕ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಯ ಆಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ನೀಡಿದೆ. ಈ ಸಂಬಂಧ ಒಳಾಡಳಿತ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ. ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ (ಸಿಎಆರ್ ಮತ್ತು ಡಿಎಆರ್) ಹುದ್ದೆಗಳಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿಗೆ ಮಾತ್ರ 2022-23ನೇ ಸಾಲಿನಲ್ಲಿ ಎರಡು ವರ್ಷ ಹೆಚ್ಚಿಸಲಾಗಿದೆ. 

ನೇಮಕಾತಿಗೆ ಕರೆದಿರುವ ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್) 420+3064 ಸೇರಿ ಒಟ್ಟು 3484 ಹುದ್ದೆಗಳಿಗೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿವಿಲ್ ) 1137+454 ಸೇರಿದಂತೆ 1591 ಹುದ್ದೆಗಳಿಗೆ ಮಾತ್ರ ಗರಿಷ್ಠ ವಯೋಮಿತಿಯನ್ನು ಎರಡು ವರ್ಷಗಳಿಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಪೊಲೀಸ್ ಕಾನ್ಸ್ ಟೇಬಲ್ (ಸಿವಿಲ್) ಹುದ್ದೆ ಮತ್ತು ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್ ಮತ್ತು ಡಿಎಆರ್ ) ಹುದ್ದೆಗಳಿಗೆ ಗರಿಷ್ಠ ವಯೋಮಿತಿಯ ಕುರಿತಂತೆ ಸಂಬಂಧಿಸಿದ ನೇಮಕಾತಿ ನಿಯಮಗಳಿಗೆ ಅಗತ್ಯ ತಿದ್ದುಪಡಿ ಮಾಡಲು ಷರತ್ತಿಗೆ ಒಳಪಟ್ಟು ಈ ಆದೇಶ ಹೊರಡಿಸಲಾಗಿದೆ ಎಂದಿದ್ದಾರೆ. ಎರಡು ದಿನಗಳ ಹಿಂದೆ ಪಿಎಸ್ಐ ಅಭ್ಯರ್ಥಿಗಳು ವಯೋಮಿತಿ ಹೆಚ್ಚಿಸಲು ಗೃಹ ಸಚಿವರಿಗೆ ಮನವಿ ನೀಡಿದ್ದರು. ಈ ವೇಳೆ, ಗೊಂದಲ ಏರ್ಪಟ್ಟು ಒಬ್ಬ ಅಭ್ಯರ್ಥಿಗೆ ಡಿವೈಎಸ್ಪಿ ಕಪಾಳಮೋಕ್ಷ ಮಾಡಿದ್ದು ವಿವಾದಕ್ಕೆ ಕಾರಣವಾಗಿತ್ತು.

Civil, CAR, DAR, Police Constable (police constable) Recruitment Age Limit (Age limit) The state government has issued an order to increase by 2 years. This will be applicable only for constable recruitment for the year 2022-23. The maximum recruitment age of the state police constable has been increased once before and now it has been ordered to increase it to two years. In this regard, the Under Secretary to the Government of the District Administration Department has fixed the maximum age limit for the posts of Police Constable (Civil) and Police Constable (CAR and DAR).