ಬ್ರೇಕಿಂಗ್ ನ್ಯೂಸ್
04-11-22 06:55 pm HK News Desk ಕರ್ನಾಟಕ
ತುಮಕೂರು, ನ.4: ತಾಯಿ ಕಾರ್ಡ್ ತಂದಿಲ್ಲವೆಂದು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿದ್ದರಿಂದ ಗರ್ಭಿಣಿ ಮಹಿಳೆ ಮತ್ತು ನವಜಾತ ಅವಳಿ ಮಕ್ಕಳು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಮೂವರು ನರ್ಸ್, ಒಬ್ಬರು ವೈದ್ಯಾಧಿಕಾರಿ ಸೇರಿ ನಾಲ್ವರನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. ಅಲ್ಲದೆ, ಘಟನೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ.ಸುಧಾಕರ್, ತುರ್ತು ಚಿಕಿತ್ಸೆಗೆ ಯಾವುದೇ ದಾಖಲೆ ಕೇಳುವಂತಿಲ್ಲ ಎಂದು ಆದೇಶ ಇದ್ದರೂ ಯಾಕಾಗಿ ನಿರ್ಲಕ್ಷ್ಯ ವಹಿಸಿದ್ದೀರಿ ಎಂದು ತೀವ್ರ ತರಾಟೆಗೆತ್ತಿಕೊಂಡಿದ್ದಾರೆ.
ಬುಧವಾರ ರಾತ್ರಿ ತುಮಕೂರು ನಗರದ ತುಂಬು ಗರ್ಭಿಣಿ ಮಹಿಳೆಯೊಬ್ಬರು ಹೆರಿಗೆ ಬೇನೆಯಿಂದಾಗಿ ಜಿಲ್ಲಾಸ್ಪತ್ರೆಗೆ ಬಂದಿದ್ದರು. ತನ್ನ ಐದು ವರ್ಷದ ಒಬ್ಬಳು ಪುತ್ರಿಯ ಜೊತೆಗೆ ಆಸ್ಪತ್ರೆಗೆ ಬಂದಿದ್ದಾಗ, ತಾಯಿ ಕಾರ್ಡ್ ತಂದಿಲ್ಲವೆಂದು ಆಸ್ಪತ್ರೆಗೆ ದಾಖಲಿಸಲು ನಿರಾಕರಿಸಿ ಹಿಂದಕ್ಕೆ ಕಳಿಸಿದ್ದರು. ಒಬ್ಬಂಟಿಯಾಗಿದ್ದ ಮಹಿಳೆ ರಾತ್ರಿಯೇ ಮನೆಗೆ ಮರಳಿದ್ದು, ರಾತ್ರಿ ವೇಳೆ ಮನೆಯಲ್ಲೇ ಹೆರಿಗೆಗೆ ಒಳಗಾಗಿದ್ದಾಳೆ. ಅವಳಿ ಮಕ್ಕಳಿಗೆ ಜನ್ಮ ನೀಡಿದ್ದ ಮಹಿಳೆ ತೀವ್ರ ರಕ್ತಸ್ರಾವದಿಂದಾಗಿ ಸಕಾಲದಲ್ಲಿ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾಳೆ. ಬೆಳಗ್ಗೆ ಸ್ಥಳೀಯರು ನೋಡಿದಾಗ, ಅವಳಿ ಶಿಶುಗಳು ಮತ್ತು ಮಹಿಳೆ ಮೃತಪಟ್ಟಿರುವುದು ಕಂಡುಬಂದಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲಾಸ್ಪತ್ರೆಯ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.
ಮುಂದಕ್ಕೆ ಮರುಕಳಿಸಿದಲ್ಲಿ ವಜಾ ಶಿಕ್ಷೆ
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಾ.ಸುಧಾಕರ್, ಅಮಾನವೀಯ ಘಟನೆ ನಡೆದುಹೋಗಿದೆ. ಹೆರಿಗೆ ವಾರ್ಡ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ದಾದಿಯರು ಮತ್ತು ವೈದ್ಯರು ಕರ್ತವ್ಯ ಲೋಪ ಎಸಗಿದ್ದಾರೆ. ಮುಂದಕ್ಕೆ ಈ ರೀತಿ ಘಟನೆಯಾದಲ್ಲಿ ವಜಾ ಶಿಕ್ಷೆ ಮತ್ತು ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಯಾವುದೇ ತುರ್ತು ಸಂದರ್ಭದಲ್ಲಿ ಚಿಕಿತ್ಸೆಯೇ ಮುಖ್ಯವಾಗಿದ್ದು, ದಾಖಲೆ ಅಗತ್ಯ ಇರುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಈ ಬಗ್ಗೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ. ವರದಿ ಬಂದ ಮೇಲೆ ಅಮಾನತುಗೊಂಡವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದಿದ್ದಾರೆ.
ದಾಖಲೆ ಕೇಳಿ ಚಿಕಿತ್ಸೆ ವಿಳಂಬಿಸಿದರೆ ಕ್ರಿಮಿನಲ್ ಕೇಸು
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ದಾಖಲೆ ಕೇಳಿ ಚಿಕಿತ್ಸೆ ವಿಳಂಬಿಸಿ ಸಾವಿಗೆ ಕಾರಣವಾದರೆ, ಸಿಬಂದಿ ಮತ್ತು ವೈದ್ಯರ ವಿರುದ್ಧವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರು ಈ ಬಗ್ಗೆ ಮಾರ್ಗಸೂಚಿ ಹೊರಡಿಸಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡಲು ಯಾವುದೇ ದಾಖಲೆ ಕೇಳಿ ವಿಳಂಬಿಸುವಂತಿಲ್ಲ. ಯಾವುದೇ ವ್ಯಕ್ತಿ ಆಸ್ಪತ್ರೆಗೆ ದಾಖಲಾಗುವ ಸಂದರ್ಭದಲ್ಲಿ ದಾಖಲೆ ಅಗತ್ಯವಿರುವುದಿಲ್ಲ. ಯಾವುದೇ ದಾಖಲೆಯನ್ನು ವೈದ್ಯರಿಗೆ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ. ತುರ್ತು ಚಿಕಿತ್ಸೆ ಅನಿವಾರ್ಯ ಇದ್ದಾಗ ಆತನ ಜಾತಿ, ಹಿನ್ನೆಲೆ, ದಾಖಲೆ ನೋಡದೆ ಚಿಕಿತ್ಸೆ ನೀಡುವುದು ವೈದ್ಯರ ಕರ್ತವ್ಯ ಎಂದು ಹೇಳಿದ್ದಾರೆ.
A pregnant woman and her just-born twin babies died due to the negligence of doctors and medical staff at the Tumkur district government hospital in Karnataka. Four people have been suspended over the incident. The deceased, Kasthuri (30), was a single mother who is survived by a daughter. She was staying in a rented house in Bharathi Nagar of Karnataka’s Tumkur district. She was nine months pregnant with twin babies. She got her labour pain on Wednesday evening.
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 10:33 pm
Mangalore Correspondent
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm