ಬ್ರೇಕಿಂಗ್ ನ್ಯೂಸ್
06-11-22 10:52 pm Bangalore Correspondent ಕರ್ನಾಟಕ
ಬೆಂಗಳೂರು, ನ.6: ತಾನು ಶಾಸಕನಾಗಬೇಕು, ಸಚಿವನಾಗಬೇಕು, ಸಿಎಂ ಆಗಬೇಕು ಎಂದು ಕುರ್ಚಿಯ ಆಸೆ ಇಟ್ಟುಕೊಂಡು ಕಾಂಗ್ರೆಸ್ ಪಕ್ಷ ಸೇರಬೇಡಿ. ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಬನ್ನಿ ಎಂದು ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷರಾಗಿ ಮೊದಲ ಬಾರಿಗೆ ತವರು ರಾಜ್ಯಕ್ಕೆ ಆಗಮಿಸಿದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು. ಬೃಹತ್ ಸೇಬಿನ ಹಾರ ತೊಡಿಸಿ ಖರ್ಗೆ ಅವರನ್ನು ಸ್ವಾಗತಿಸಲಾಯಿತು. ಬಳಿಕ ಅರಮನೆ ಮೈದಾನದಲ್ಲಿ ನಡೆದ ಸರ್ವೋದಯ ಸಮಾವೇಶದಲ್ಲಿ ಮಾತನಾಡಿದ ಖರ್ಗೆ, ಯಾರಿಗೆ ಬದ್ಧತೆ, ನಂಬಿಕೆ ಇರುತ್ತದೆಯೋ ಅವರು ಎಂದಿಗೂ ಪಕ್ಷ ಬಿಡುವುದಿಲ್ಲ. ಹಲವು ಜನ ಮಂತ್ರಿ ಸ್ಥಾನ, ಅಧ್ಯಕ್ಷ ಸ್ಥಾನ ಸಿಕ್ಕಿಲ್ಲ ಎಂದು ಪಕ್ಷ ಬಿಡುತ್ತಾರೆ. ನಾವು ಕುರ್ಚಿಗಾಗಿ ಪಕ್ಷ ಸೇರಬಾರದು ಎಂದು ಪರೋಕ್ಷವಾಗಿ ಪಕ್ಷ ಬಿಟ್ಟು ಹೋಗುವವರಿಗೆ ಟಾಂಗ್ ನೀಡಿದರು.
ಕಳೆದ 70 ವರ್ಷಗಳಿಂದ ಏನು ಮಾಡಿದ್ದೀರೆಂದು ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಕೇಳುತ್ತಾರೆ. ನಾವು ಕೆಲಸ ಮಾಡಿದ್ದರಿಂದಲೇ ದೇಶ ಈ ಹಂತಕ್ಕೆ ಬೆಳೆದು ನಿಂತಿದೆ. ಕಾಂಗ್ರೆಸ್ ಪಕ್ಷ ಸಂವಿಧಾನ, ಪ್ರಜಾಪ್ರಭುತ್ವ ಉಳಿಸಿದೆ. ದೇಶವನ್ನು ಒಗ್ಗಟ್ಟಾಗಿ ಇರಿಸಿದೆ. ನಾವು ಕಟ್ಟಿದ ಶಾಲೆಗಳಲ್ಲಿ ಕಲಿತು ಈಗ ನಮ್ಮನ್ನೇ ಏನೂ ಮಾಡಿಲ್ಲ ಅಂತ ಟೀಕಿಸುತ್ತಾರೆ. ಹಿಂದಿನ ಯಾವುದೇ ಸರ್ಕಾರ ಈ ರೀತಿ ಕೆಟ್ಟದಾಗಿ ನಡೆದುಕೊಂಡಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ ನಡೆಸಿದರು.
ಪದೇ ಪದೆ ಕಾಂಗ್ರೆಸ್ ಪಕ್ಷದ ನಾಯಕರನ್ನು ಟೀಕೆ ಮಾಡುವುದು ಸರಿಯಲ್ಲ. ದೇಶಕ್ಕಾಗಿ ಗಾಂಧಿ ಕುಟುಂಬದ ತ್ಯಾಗ, ಕೊಡುಗೆ ಸಾಕಷ್ಟಿದೆ. ಇದರಲ್ಲಿ ಸ್ವಲ್ಪನಾದರೂ ನೀವು ಕೊಟ್ಟಿದ್ದರೆ ದೇಶ ಮತ್ತಷ್ಟು ಅಭಿವೃದ್ಧಿಯಾಗುತ್ತಿತ್ತು. ತಾಯಿ, ಮಕ್ಕಳ ಪಕ್ಷವೆಂದು ಪ್ರಧಾನಿ ಮೋದಿ ಕಾಂಗ್ರೆಸ್ನ್ನು ಟೀಕಿಸುತ್ತಾರೆ. ನಮ್ಮ ಪಕ್ಷದ ಆಂತರಿಕ ವಿಚಾರ ನಿಮಗೇಕೆ? ಜನ ನಿಮಗೆ ಅವಕಾಶ ಕೊಟ್ಟಿದ್ದಾರೆ, ದೇಶದ ಅಭಿವೃದ್ಧಿ ಕಡೆ ಗಮನ ಕೊಡಿ ಎಂದು ತಿರುಗೇಟು ನೀಡಿದರು.
ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಯವರಿಗೆ ನಡುಕ ಹುಟ್ಟಿದೆ. ಭಾರತ್ ಜೋಡೋ ಯಾತ್ರೆ ಬಳಿಕ ಪ್ರಧಾನಿ ಮೋದಿ ಎಚ್ಚೆತ್ತಿದ್ದಾರೆ. ಪ್ರಧಾನಿ ಮೋದಿ ನೇತೃತ್ವದಲ್ಲಿ ದೇಶದ ಅಭಿವೃದ್ಧಿಯಲ್ಲಿ ಹಿನ್ನಡೆ ಆಗಿದೆ. ಹೀಗಾಗಿ ಒಗ್ಗಟ್ಟಾಗಿ ಕೆಲಸ ಮಾಡಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ತರೋಣ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತೆ ಎಂದು ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.
Stressing upon the need to remain united to remove the BJP from power in 2023 elections, newly-elected president of All India Congress Committee Mallikarjun Kharge on Sunday urged his party leaders in Karnataka to bury their differences and work towards bringing the Congress back to power
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am