ಬ್ರೇಕಿಂಗ್ ನ್ಯೂಸ್
07-11-22 11:03 pm HK News Desk ಕರ್ನಾಟಕ
ಚಿತ್ರದುರ್ಗ, ನ. 8 : ಮುರುಘಾ ಶರಣ ಸ್ವಾಮೀಜಿ ವಿರುದ್ಧ ಇಬ್ಬರು ಬಾಲಕಿಯರು ನೀಡಿದ್ದ ದೂರಿನ ಪ್ರಕರಣದಲ್ಲಿ ತನಿಖೆ ಭಾಗಶಃ ಪೂರ್ಣಗೊಂಡಿದ್ದು ಚಾರ್ಜ್ಶೀಟ್ ಸಲ್ಲಿಸಲಾಗಿದೆ ಎಂದು ಚಿತ್ರದುರ್ಗದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಪರಶುರಾಮ್ ಹೇಳಿದ್ದಾರೆ.
ಅಕ್ಟೋಬರ್ 27ರಂದೇ ತನಿಖಾಧಿಕಾರಿ ಅನಿಲ್, ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಚಾರ್ಜ್ಶೀಟ್ನ ಸಿಸಿ ನಂಬರ್ ಬರುವುದು ಬಾಕಿಯಿದೆ. ಎ1 ಡಾ. ಶಿವಮೂರ್ತಿ ಮುರುಘಾ ಶರಣರು, ಎ2 ವಾರ್ಡನ್ ರಶ್ಮಿ ಮತ್ತು ಎ4 ಪರಮಶಿವಯ್ಯ ವಿರುದ್ಧ ಆರೋಪಗಳು ದೃಢಪಟ್ಟಿವೆ ಎಂದು ಚಿತ್ರದುರ್ಗ ಎಸ್ಪಿ ಪರಶುರಾಮ್ ಹೇಳಿದ್ದಾರೆ.
ಆದರೆ, ಎ3 ಮಠದ ಉತ್ತರಾಧಿಕಾರಿ ಮತ್ತು ಎ5 ಗಂಗಾಧರಯ್ಯ – ಇವರಿಬ್ಬರ ವಿರುದ್ಧ ಆರೋಪಗಳಿಗೆ ಸೂಕ್ತ ಸಾಕ್ಷ್ಯಾಧಾರ ಲಭ್ಯವಾಗಿಲ್ಲ. ತನಿಖೆ ಜಾರಿಯಲ್ಲಿದ್ದು ಸಾಕ್ಷ್ಯಾಧಾರ ಸಂಗ್ರಹ ಮಾಡುತ್ತಿದ್ದೇವೆ. ಬಳಿಕ ಅಂತಿಮ ಚಾರ್ಜ್ಶೀಟ್ ಸಲ್ಲಿಸುತ್ತೇವೆ ಎಂದವರು ಸ್ಪಷ್ಟಪಡಿಸಿದ್ದಾರೆ.
2ನೇ ಫೊಕ್ಸೋ ಪ್ರಕರಣ ತನಿಖೆ ನಡೆದಿದೆ
ಮುರುಘಾಶ್ರೀ ವಿರುದ್ಧ 2ನೇ ಫೊಕ್ಸೋ ಪ್ರಕರಣದಲ್ಲಿ ಸಂತ್ರಸ್ತರ ಹೇಳಿಕೆ ದಾಖಲಿಸಲಾಗಿದೆ. ಸಂತ್ರಸ್ತರ ಪೋಷಕರ ಹೇಳಿಕೆಗಳನ್ನೂ ದಾಖಲಿಸಲಾಗಿದೆ. ಎ1 ಮುರುಘಾಶ್ರೀ ಕಸ್ಟಡಿಗೆ ಪಡೆದು ವಿಚಾರಣೆ ನಡೆಸಲಾಗಿದೆ. ಸಂತ್ರಸ್ತರ ಹೇಳಿಕೆ ಆಧರಿಸಿ ಕೆಲವು ಬಾಲಕಿಯರ ಹೇಳಿಕೆ ಪಡೆದಿದ್ದೇವೆ ಎಂದವರು ಹೇಳಿದ್ದಾರೆ.
15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ !
ಮುರುಘಾಶ್ರೀಗಳಿಂದ 15ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದೆ. ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ ಅವರನ್ನು ಕರೆಸಿ ಮಾಹಿತಿ ಕೇಳಿದ್ದೇವೆ. ಸಂತ್ರಸ್ತರ ಮಾಹಿತಿ ನೀಡಿದರೆ ತನಿಖೆ ನಡೆಸುತ್ತೇವೆಂದು ತಿಳಿಸಿದ್ದೇವೆ. ಒಡನಾಡಿ ಸಂಸ್ಥೆ, ಮಕ್ಕಳ ಕಲ್ಯಾಣ ಸಮಿತಿ ಸಹಯೋಗದಲ್ಲಿ ತನಿಖೆ ನಡೆಸುವುದಾಗಿ ಮನವಿ ಮಾಡಿದ್ದೇವೆ. ಕೆಲ ಮಾಹಿತಿಯನ್ನು ಒಡನಾಡಿ ಸಂಸ್ಥೆಯವರು ನೀಡಿದ್ದಾರೆ. ಸಂತ್ರಸ್ತೆಯರ ಮಾಹಿತಿ ಸಿಕ್ಕರೆ ಖಂಡಿತ ತನಿಖೆ ನಡೆಸುತ್ತೇವೆ ಎಂದು ದುರ್ಗದ ಎಸ್ಪಿ ಹೇಳಿದರು.
ಮೊದಲ ಪ್ರಕರಣದ ಸಂತ್ರಸ್ತರು ಓರ್ವ ಬಾಲಕಿಯ ರೇಪ್ ಅಂಡ್ ಮರ್ಡರ್ ಆಗಿದೆ ಎಂದಿದ್ದರು. ಆದರೆ ಆಂಧ್ರ ವ್ಯಾಪ್ತಿಯಲ್ಲಿ ಆಕಸ್ಮಿಕ ಸಾವು ಘಟಿಸಿದ್ದಾಗಿ ತಿಳಿದಿದೆ. ರೈಲಿನಿಂದ ಬಿದ್ದು ಸಾವನ್ನಪ್ಪಿರುವ ವರದಿ ಆಗಿದೆ. ಮಠದಲ್ಲಿ ಡ್ರಗ್ಸ್ ಬಳಕೆ ಆರೋಪ ವಿಚಾರ ಪ್ರಕರಣದ ತನಿಖೆ ನಡೆಯುತ್ತಿದೆ. ವೈದ್ಯಕೀಯ ಪರೀಕ್ಷೆಯ ಕೆಲ ವರದಿ ಬರಬೇಕಿದೆ ಎಂದವರು ಹೇಳಿದರು.
In a major development, Karnataka Police on Monday stated that the charges against rape accused, jailed Lingayat seer Shivamurthy Murugha Sharanaru have been held to stand during the course of investigation.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am