ಬ್ರೇಕಿಂಗ್ ನ್ಯೂಸ್
08-11-22 02:12 pm HK News Desk ಕರ್ನಾಟಕ
ಬೆಳಗಾವಿ, ನ.8: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ‘ಹಿಂದೂ’ ಪದದ ಮೂಲದ ಬಗ್ಗೆ ಅವರು ಮಾಡಿದ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದೆ.
ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ನಾನು ಹೇಳಿದ್ದರಲ್ಲಿ ತಪ್ಪೇನೂ ಇಲ್ಲ. ಈ ಪರ್ಷಿಯನ್ ಪದ (ಹಿಂದೂ) ಹೇಗೆ ಬಂದಿತು ಎಂಬುದರ ಬಗ್ಗೆ ನೂರಾರು ದಾಖಲೆಗಳಿವೆ. ಸ್ವಾಮಿ ದಯಾನಂದ ಸರಸ್ವತಿ ಅವರ 'ಸತ್ಯಾರ್ಥ ಪ್ರಕಾಶ', ಡಾ.ಜಿ.ಎಸ್.ಪಾಟೀಲ್ ಅವರ 'ಬಸವ ಭಾರತ' ಮತ್ತು ಬಾಲಗಂಗಾಧರ ತಿಲಕರ 'ಕೇಸರಿ' ಪತ್ರಿಕೆಗಳಲ್ಲಿಯೂ ಈ ಬಗ್ಗೆ ಉಲ್ಲೇಖವಿದೆ. ಇವು ಕೇವಲ 3-4 ಉದಾಹರಣೆಗಳಾಗಿವೆ, ವಿಕಿಪೀಡಿಯಾ ಅಥವಾ ಯಾವುದೇ ವೆಬ್ ಸೈಟ್ ನಲ್ಲಿ ಇಂತಹ ಅನೇಕ ಲೇಖನಗಳು ಲಭ್ಯವಿವೆ, ನೀವು ಅದನ್ನು ಓದಬೇಕು". ನಾನು ಯಾವುದೇ ಧರ್ಮ, ಭಾಷೆ ಬಗ್ಗೆ ಅವಮಾನಿಸುವ ಪ್ರಶ್ನೆ ಇಲ್ಲ. ನಾನು ಯಾವುದೇ ಜಾತಿ, ಧರ್ಮಕ್ಕೆ ಸೀಮಿತವಾಗಿಲ್ಲ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಹಿಂದೂ ಧರ್ಮದ ಬಗ್ಗೆ ಅಟಲ್ ಬಿಹಾರಿ ವಾಜಪೇಯಿ ಭಾಷಣ ಒಮ್ಮೆ ಕೇಳಬೇಕು. ಹಿಂದೂ ಧರ್ಮ ಅಂದ್ರೆ ಅದು, ವೇ ಆಫ್ ಲೈಫ್. ನಮ್ಮ ಬಾಳ್ವೆ ಅಂದಿದ್ದಾರೆ. ಇದನ್ನೇ ಸುಪ್ರೀಂಕೋರ್ಟ್ ಸಹ ತನ್ನ ತೀರ್ಪಿನಲ್ಲಿ ಹೇಳಿದೆ. ನಾನಗೆ ಯಾರನ್ನು ಅಪಮಾನ ಮಾಡುವ ಉದ್ದೇಶ ಇಲ್ಲ. ಯಾವುದೇ ಧರ್ಮ ಜಾತಿ ನಂಬದೇ ಇರುವಂತಹ ವ್ಯಕ್ತಿ ನಾನು. ಜಾತಿ, ಧರ್ಮದಿಂದ ನಾನು ದೂರ ಇರೋ ವ್ಯಕ್ತಿ. ಈ ರೀತಿ ನಮ್ಮ ಮೇಲೆ ದೊಡ್ಡ ಅಪರಾಧ ಮಾಡಿರುವ ಹಾಗೆ ಬಿಂಬಿಸಬೇಡಿ. ನನ್ನ ಭಾಷಣ ಹತ್ತು ಸಲ ಕೇಳಿ. ತಪ್ಪಿದ್ರೆ ಚರ್ಚೆ ಇದೇ ರೀತಿ ಚರ್ಚೆ ಮುಂದುವರೆಸಿ. ಹೀಗೆ ಮುಂದುವರೆದರೆ ಮಾನಹಾನಿ ಮೊಕದ್ದಮೆ, ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ನಾನು ಯಾವುದೇ ಧರ್ಮ, ಭಾಷೆ ಅವಮಾನ ಮಾಡುವ ಪ್ರಶ್ನೆಯೆ ಇಲ್ಲ. ಮೂವತ್ತು ವರ್ಷಗಳಿಂದ ಇದೇ ಕೆಲಸ ಮಾಡುತ್ತಿದ್ದೇನೆ. ಬಹಳಷ್ಟು ವಿಷಯ ನೋಡ್ತೀನಿ. ವಿಕಿಪೀಡಿಯದಲ್ಲಿ ಇರೋದು ಹೇಳಿದ್ದೇನೆ. ದಯವಿಟ್ಟು ತಾವು ಇದನ್ನ ಇಲ್ಲೆ ನಿಲ್ಲಿಸಬೇಕು. ನಾನು ಯಾವುದೇ ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ ಆ ರೀತಿ ನಾನು ಕೆಲಸ ಮಾಡ್ತಿದೀನಿ. ಯಾವ ರೀತಿ ಪಿತೂರಿ ನಡೀತಿದೆ ಅನ್ನೋದು ಸಾರ್ವಜನಿಕರು ತಿಳಿದುಕೊಳ್ಳಬೇಕು ಎಂದಿದ್ದಾರೆ.
ಸೋಮವಾರ ರಾತ್ರಿ ನಿಪ್ಪಾಣಿಯ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, “ಹಿಂದೂ ಎಂಬ ಪದವು ಎಲ್ಲಿಂದ ಹುಟ್ಟಿತು? ಅದು ನಮ್ಮದೇ? ಇದು ಪರ್ಷಿಯನ್, ಇರಾನ್, ಇರಾಕ್, ಉಜ್ಬೇಕಿಸ್ತಾನ್, ಕಜಕಿಸ್ತಾನ್ ಪ್ರದೇಶದಿಂದ ಬಂದಿದೆ. ಹಿಂದೂ ಪದಕ್ಕೂ ಭಾರತಕ್ಕೂ ಏನು ಸಂಬಂಧ? ಹಾಗಾದರೆ ನೀವು ಅದನ್ನು ಹೇಗೆ ಒಪ್ಪಿಕೊಳ್ಳುತ್ತೀರಿ? ಇದರ ಚರ್ಚೆಯಾಗಲಿ" ಎಂದು ಹೇಳಿದ್ದರು. ಅಲ್ಲದೆ 'ಹಿಂದೂ ಶಬ್ದದ ಅರ್ಥ ತಿಳಿದರೆ ನಿಮಗೆ ನಾಚಿಕೆಯಾಗುತ್ತದೆ” ಎಂದೂ ಹೇಳಿದ್ದರು.
ಸತೀಶ್ ಜಾರಕಿಹೊಳಿ ಹೇಳಿಕೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಕೂಡಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟ್ವೀಟ್ ಮಾಡಿದ ಅವರು, “ಸತೀಶ್ ಜಾರಕಿಹೊಳಿ ಅವರ ಹೇಳಿಕೆಯು ಅತ್ಯಂತ ದುರದೃಷ್ಟಕರ. ನಾವು ಇದನ್ನು ಖಂಡಿಸುತ್ತೇವೆ” ಎಂದು ಹೇಳಿದ್ದಾರೆ.
Known to speak his mind, including on issues that might trod politically incorrect ground, former Karnataka minister and Congress working president Satish Jarkiholi found himself in a fresh controversy Monday. The 60-year-old said the word ‘Hindu’ had origins in Persian and the original word did not carry a pleasant meaning. Not just the BJP, even the Congress swiftly distanced itself from Jarkiholi’s remarks.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am