ಬ್ರೇಕಿಂಗ್ ನ್ಯೂಸ್
08-11-22 11:03 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಟಿ.ಎಸ್. ಲೋಹಿತಾಶ್ವ(80) ಅವರು ಮಂಗಳವಾರ ಮಧ್ಯಾಹ್ನ ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ.
ಸಕ್ಕರೆ ಕಾಯಿಲೆ ಹಾಗು ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ನಾಲ್ಕೈದು ತಿಂಗಳ ಹಿಂದೆ ಎರಡು ಬಾರಿ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಈ ನಡುವೆ ಅನಾರೋಗ್ಯಕ್ಕೀಡಾದ ಅವರನ್ನು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್ ಆಸ್ಪತ್ರೆಗೆ ಅ.4ರಂದು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲೇ ಅವರಿಗೆ ಹೃದಯಾಘಾತವೂ ಆಗಿತ್ತು. ಇದರಿಂದಾಗಿ ಮಿದುಳಿಗೂ ಹಾನಿಯಾಗಿತ್ತು. ನಂತರದಲ್ಲಿ ಅವರನ್ನು ಐಸಿಯುಗೆ ದಾಖಲಿಸಿ, ವೆಂಟಿಲೇಟರ್ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು. ಆದರೆ ದಿನ ಕಳೆದಂತೆ ಅಂಗಾಂಗ ವೈಫಲ್ಯದಿಂದ ಆರೋಗ್ಯ ಮತ್ತಷ್ಟು ಕ್ಷೀಣಿಸಿತ್ತು.
ಕುಮಾರಸ್ವಾಮಿ ಬಡಾವಣೆಯಲ್ಲಿರುವ ಮನೆಯಲ್ಲಿ ಬುಧವಾರ ಬೆಳಗ್ಗೆ 11ರ ವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಮಾಡಲಾಗುವುದು. ನಂತರದಲ್ಲಿ ತಂದೆಯ ಹುಟ್ಟೂರು ತುಮಕೂರು ಸಮೀಪದ ತೊಂಡಗೆರೆಯಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಲಿದೆ' ಎಂದು ಅವರ ಪುತ್ರ, ನಟ ಶರತ್ ಲೋಹಿತಾಶ್ವ ತಿಳಿಸಿದ್ದಾರೆ.
ಲೋಹಿತಾಶ್ವ ಅವರು ರಂಗಭೂಮಿಯ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟವರು. ಮೊದಮೊದಲು ಕಲಾತ್ಮಕ ಚಿತ್ರಗಳಲ್ಲಿ ಬಣ್ಣ ಹಚ್ಚುತ್ತಿದ್ದ ಅವರಿಗೆ ಕಮರ್ಷಿಯಲ್ ಬ್ರೇಕ್ ನೀಡಿದ್ದು ಶಂಕರ್‌ನಾಗ್ ಅವರ 'ಗೀತಾ' ಸಿನಿಮಾ. 'ಕತ್ತಲೆ ದಾರಿ ದೂರ' ನಾಟಕದಲ್ಲಿ ಅವರ ವೈದ್ಯನ ಪಾತ್ರವನ್ನು ನೋಡಿದ್ದ ಶಂಕರ್‌ನಾಗ್ ಅವರು ಗೀತಾ ಸಿನಿಮಾದಲ್ಲಿ ವೈದ್ಯರ ಪಾತ್ರಕ್ಕೆ ಆಯ್ಕೆ ಮಾಡಿದರು. ನಂತರ 'ಧರ್ಮ ದಾರಿ ತಪ್ಪಿತು', 'ಗಜೇಂದ್ರ', 'ಸಂಭವಾಮಿ ಯುಗೇಯುಗೇ', 'ಸಾಂಗ್ಲಿಯಾನ' ಹೀಗೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ಹೆಚ್ಚಿನ ಸಿನಿಮಾದಲ್ಲಿ 'ಮುಖ್ಯಮಂತ್ರಿ' ಪಾತ್ರಕ್ಕೆ ಬಣ್ಣಹಚ್ಚಿದ ಖ್ಯಾತಿ ಲೋಹಿತಾಶ್ವ ಅವರದ್ದು. ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಎಂ.ಎ ಪದವಿ ಪಡೆದು, 33 ವರ್ಷ ಇಂಗ್ಲಿಷ್ ಪ್ರಾಧ್ಯಾಪಕರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದರು.
The 80-year old died at around 2.40 PM after being hospitalised for over a month.''He had recently suffered a heart attack and had developed brain related issues. Though his other vitals like breathing and BP had improved subsequently, it again started to deteriorate and he breathed his last this afternoon,'' his actor son Sharath Lohitashwa said.Speaking to reporters, he said the veteran actor's mortal remains will be kept at their residence in Kumaraswamy Layout in the city till Wednesday morning for his fans and well-wishers to pay last respects.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am