ಬ್ರೇಕಿಂಗ್ ನ್ಯೂಸ್
09-11-22 01:56 pm Bangalore Correspondent ಕರ್ನಾಟಕ
ಬೆಂಗಳೂರು, ನ.9: ಪ್ರಧಾನಿ ನರೇಂದ್ರ ಮೋದಿ ನ.11ರಂದು ಬೆಂಗಳೂರಿಗೆ ಆಗಮಿಸಲಿದ್ದು ಆ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವಂತೆ ರಾಜ್ಯ ಶಿಕ್ಷಣ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ, ಅನುದಾನಿತ ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಿದ್ದು ತೀವ್ರ ಆಕ್ಷೇಪಕ್ಕೆ ಗುರಿಯಾಗಿದೆ. ಮೋದಿ ಕಾರ್ಯಕ್ರಮಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಕರೆತನ್ನಿ, ಇಲ್ಲದಿದ್ದರೆ ಪರಿಣಾಮ ಎದುರಿಸಿ ಎಂದು ಪರೋಕ್ಷವಾಗಿ ಬೆದರಿಸುವ ರೀತಿ ಸುತ್ತೋಲೆ ಕಳುಹಿಸಲಾಗಿದೆ.
ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಕರೆತರಬೇಕು ಎಂದು ಎಲ್ಲ ಕಾಲೇಜು ಪ್ರಾಂಶುಪಾಲರಿಗೆ ಸೂಚಿಸಿ ಹೊರಡಿಸಿದ್ದ ಶಿಕ್ಷಣ ಇಲಾಖೆಯ ಸುತ್ತೋಲೆ ವಿವಾದಕ್ಕೆ ಕಾರಣವಾಗಿದೆ. ನ.11ರಂದು ಪ್ರಧಾನ ಮಂತ್ರಿಯವರು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮೋದಿ ಕಾರ್ಯಕ್ರಮಕ್ಕೆ ವಿದ್ಯಾರ್ಥಿಗಳನ್ನು ಕರೆತರಲು ನ. 2ರಂದು ನಡೆದ ಪ್ರಾಂಶುಪಾಲರ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಿದ್ದು ಅದರಲ್ಲಿ ತೀರ್ಮಾನಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ಸರ್ಕಾರಿ/ ಅನುದಾನಿತ/ಅನುದಾನ ರಹಿತ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು ಎಂದು ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಇಂಥ ಕಾಲೇಜಿನಿಂದ ಇಷ್ಟೇ ವಿದ್ಯಾರ್ಥಿಗಳನ್ನೂ ಕರೆ ತರಬೇಕು ಎಂದು ಪಟ್ಟಿಯನ್ನೂ ನೀಡಲಾಗಿದೆ.
ಆಯಾ ಕಾಲೇಜುಗಳಿಗೆ ನೇಮಕ ಮಾಡಿರುವ ಬಸ್‌ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್‌ನಲ್ಲಿ ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಲು ಹಾಗೂ ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದೂ ಎಚ್ಚರಿಕೆ ನೀಡಿ ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.
Colleges across Bangalore issued circulars to get students to PM Modi program in Bangalore, sparks controversy. Or else the principal of the college should face the consequences says the education department circular to colleges.
23-09-26 05:14 pm
HK News Staffer
ಕೆಪಿಎಸ್ಸಿಯಲ್ಲಿ ಹಗರಣ ತನಿಖೆಗೆ ಎಸ್ಐಟಿ ; ಕಾನೂನು...
23-09-26 11:05 am
ಸೆ.26ರಿಂದ ಸತತ 5 ದಿನ ಬ್ಯಾಂಕ್ಗಳು ಬಂದ್ ; ATM, U...
23-09-26 09:28 am
ತೀವ್ರ ಆರ್ಥಿಕ ಮುಗ್ಗಟ್ಟಿನಲ್ಲಿ ಡಿಕೆಶಿ ಸರ್ಕಾರ ! ಹ...
22-09-26 08:58 pm
ಅರಣ್ಯ ಇಲಾಖೆ ಎಂದರೆ ಜನರಿಗೆ ಕಷ್ಟ ಕೊಡುವ ಇಲಾಖೆ ; ನ...
22-09-26 08:30 pm
23-09-26 04:21 pm
HK News Staffer
ಪಶುವೈದ್ಯರ ಹುದ್ದೆಗೆ ₹80 ಲಕ್ಷದ ಡೀಲ್ ಆರೋಪ: ಪ್ರಶ್...
22-09-26 09:42 am
ಡಿಸೆಂಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ; ಇವಿಎಂ...
19-09-26 05:40 pm
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
23-09-26 09:55 am
HK News Staffer
ಚಾರ್ಮಾಡಿ ಘಾಟ್ಗೆ ಅಭಿವೃದ್ಧಿಯ ಹೆಸರಿನಲ್ಲಿ ಕುತ್ತು...
23-09-26 09:30 am
ಬೀದರ್ ಶಾಹೀನ್ ವಿದ್ಯಾಸಂಸ್ಥೆಯಲ್ಲಿ ಆರೋಗ್ಯ ನಿರ್ಲಕ್...
22-09-26 08:32 pm
ಆಳ್ವಾಸ್ ಮೆಡಿಕಲ್ ಕಾಲೇಜು ಲೋಕಾರ್ಪಣೆ ; ಡೀಮ್ಡ್ ವಿವ...
21-09-26 10:36 pm
ಮುಸ್ಲಿಂ ಲೀಗ್ ಮನಸ್ಥಿತಿಯನ್ನು ಜನರ ಮೇಲೆ ಹೇರಲು ಹೊರ...
21-09-26 09:49 pm
23-09-26 08:12 pm
HK News Staffer
ಪತ್ನಿಯ ಮೃತದೇಹ ಕೆರೆಯಲ್ಲಿ ಪತ್ತೆ ಬೆನ್ನಲ್ಲೇ ಪತಿ ನ...
23-09-26 05:12 pm
ರೌಡಿಶೀಟರ್ ಜೊತೆಗೆ ಹುಟ್ಟುಹಬ್ಬ ಪಾರ್ಟಿಯಲ್ಲಿ ಕುಡಿದ...
23-09-26 05:10 pm
ಸೈಬರ್ ಕ್ರೈಮ್ ಪೊಲೀಸರೆಂದು ಹೇಳಿ ವೈದ್ಯರಿಂದಲೇ 1.19...
23-09-26 09:32 am
Inspector Balakrishna Arrest, Police: ಮೇಲಧಿಕಾ...
22-09-26 09:00 pm