ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ, ಯಡಿಯೂರಪ್ಪ ಆಪ್ತ ಯುಬಿ ಬಣಕಾರ್ ಗುಡ್ ಬೈ ; ರಾಜ್ಯ ಬಿಜೆಪಿಗೆ ಶಾಕ್ ! 

09-11-22 06:32 pm       Bangalore Correspondent   ಕರ್ನಾಟಕ

ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಮಾಜಿ ಶಾಸಕ ಯು.ಬಿ ಬಣಕಾರ್ ಅವರು ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಬೆಂಗಳೂರು, ನ.9 : ರಾಜ್ಯ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತರಾಗಿದ್ದ ಮಾಜಿ ಶಾಸಕ ಯು.ಬಿ ಬಣಕಾರ್ ಅವರು ದಿಢೀರ್ ಬೆಳವಣಿಗೆಯಲ್ಲಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

ಮಾಜಿ ಶಾಸಕ ಯು.ಬಿ ಬಣಕಾರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಅದೇ ರೀತಿ ಹಾಲಿ ಇದ್ದ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಅಧ್ಯಕ್ಷ ಸ್ಥಾನ, ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ಯು.ಬಿ ಬಣಕಾರ್ ರಾಜೀನಾಮೆ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ರಾಜಕೀಯ ಬೆಳವಣಿಗೆಗೆ ಬೇಸತ್ತು ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. 

BS Yediyurappa appointed to top BJP panel ahead of K'taka polls, will focus  on other south states

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಆಪ್ತರಲ್ಲಿ ಒಬ್ಬರಾಗಿದ್ದ ಯು.ಬಿ ಬಣಕಾರ್ ಹಾವೇರಿ, ಬಾಗಲಕೋಟ ಭಾಗದಲ್ಲಿ ವೀರಶೈವ- ಲಿಂಗಾಯತರಲ್ಲಿ ಪ್ರಮುಖ ನಾಯಕರಾಗಿದ್ದರು. ಇದೀಗ ದಿಢೀರ್ ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ನೀಡಿದ್ದು ರಾಜ್ಯ ಬಿಜೆಪಿಗೆ ಶಾಕ್ ನೀಡಿದ್ದಾರೆ. ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ಹಾಗೂ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದು ಪಕ್ಷ ಮತ್ತು ಸರ್ಕಾರದ ಬಗ್ಗೆ ಬೇಸತ್ತು ಈ ನಡೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. 

ಹಾವೇರಿಯ ಹಿರೇಕೆರೂರು ಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇತ್ತೀಚೆಗೆ ಆ ಭಾಗದಲ್ಲಿ ನಡೆದಿದ್ದ ಬಿಜೆಪಿ ಜನ ಸಂಕಲ್ಪ ಯಾತ್ರೆಯಲ್ಲಿಯೂ ಭಾಗವಹಿಸಿದ್ದರು. ಇದೀಗ ದಿಢೀರ್ ಆಗಿ ಬಿಜೆಪಿಗೆ ಗುಡ್ ಬೈ ಹೇಳಿ ಅಚ್ಚರಿ ಮೂಡಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗಲ್ಲವೆಂದು ಬೇರೆ ಪಕ್ಷದತ್ತ ಮುಖ ಮಾಡಿದ್ದಾರೆಯೇ ಎನ್ನುವ ವದಂತಿ ಹರಡಿದೆ.

Ex MLA U B Banakar resigns from BJP party, shocks party.