ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದಲ್ಲಿ ಬಾಬರಿ ಮಸೀದಿಯಂತೆ ಧ್ವಂಸ ಮಾಡುತ್ತೇವೆ ; ಮುತಾಲಿಕ್ ಎಚ್ಚರಿಕೆ 

11-11-22 02:51 pm       HK News Desk   ಕರ್ನಾಟಕ

ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. 

ಹುಬ್ಬಳ್ಳಿ, ನ.11 : ಕಾಂಗ್ರೆಸ್ ಶಾಸಕ ತನ್ವೀರ್ ಶೇಠ್ ಹೇಳಿಕೆಯಂತೆ ಮೈಸೂರಿನಲ್ಲಿ 100 ಅಡಿ ಎತ್ತರದ ಟಿಪ್ಪು ಪ್ರತಿಮೆ ಸ್ಥಾಪಿಸಿದ್ದೇ ಆದರೆ, ಬಾಬರಿ ಮಸೀದಿಯಂತೆ ಅದನ್ನು ಧ್ವಂಸ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖ್ಯಸ್ಥ ಪ್ರಮೋದ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ. 

ಶುಕ್ರವಾರ ಈದ್ಗಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಕನಕದಾಸ ಜಯಂತಿಯಲ್ಲಿ ಪಾಲ್ಗೊಂಡು, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಟಿಪ್ಪು ಕರ್ನಾಟಕಕ್ಕೇ ಕಳಂಕ. ಮೈಸೂರು ಮಹಾರಾಜರಿಗೆ ಅವಮಾನವಾಗುವಂತೆ ಅಲ್ಲಿಯೇ ಆಡಳಿತ ನಡೆಸಿದ್ದ. ಒಂದು ವೇಳೆ ಅವನ ಮೂರ್ತಿ ಪ್ರತಿಷ್ಠಾಪಿಸಿದ್ದೇ ಆದರೆ, ಅದನ್ನು ಒಡೆದು ಹಾಕುತ್ತೇವೆ. ಅವನ ಮೂರ್ತಿ ಪ್ರತಿಷ್ಠಾಪಿಸುವಂಥ ಕೆಟ್ಟ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಬೇಕಾದರೆ, ಸಂತ ಶಿಶುನಾಳ‌ ಷರೀಫ್, ಅಬ್ದುಲ್ ಕಲಾಂ‌ ಅಂಥವರ ಮೂರ್ತಿ ಪ್ರತಿಷ್ಠಾಪಿಸಿ ಎಂದು ಸಲಹೆ ನೀಡಿದರು.

Aimim Celebrates Tipu Jayanti At Idgah Maidan In Hubballi | Hubballi News -  Times of India

ಸಾವಿರಾರು ಹಿಂದುಗಳ ದೇವಾಲಯಗಳನ್ನು ಧ್ವಂಸ ಮಾಡಿದ, ಹಿಂದುಗಳನ್ನು ಇಸ್ಲಾಂಗೆ ಮತಾಂತರ ಮಾಡಿದ ಟಿಪ್ಪುವಿನ ಜಯಂತಿಗೆ ಈದ್ಗಾ ಮೈದಾನದಲ್ಲಿ ಆಚರಿಸಲು ಅವಕಾಶ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಟಿಪ್ಪು ಜಯಂತಿ ಆಚರಿಸಿ ಮೈದಾನವನ್ನು ಅಪವಿತ್ರಗೊಳಿಸಲಾಗಿತ್ತು. ಇದೀಗ ನಾವು ಗೋಮೂತ್ರದಿಂದ ಶುದ್ಧ ಮಾಡಿ, ಕನಕ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಿದ್ದೇವೆ ಎಂದರು.

Tipu Jayanti celebrated at Hubballi Idgah Maidan amidst opposition from Sri  Rama Sene, police detain Pramod Mutalik - The Hindu

ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ವಿಫಲವಾಗಿದೆ. ಆದರೆ, ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಆಚರಿಸಲು ಅನುಮತಿ ನೀಡಬೇಕೆಂದು ಮುಂದಾಗಿದ್ದ ಸಂಘಟನೆಯಲ್ಲಿಯೇ ಒಡಕು ಉಂಟಾಗಿತ್ತು. ಅವರಲ್ಲಿದ್ದ ಬಹುತೇಕರು ಬಂದಿಲ್ಲ, ಮುಸ್ಲಿಮರು ಸಹ ಬಂದಿಲ್ಲ. ಒಟ್ಟಾರೆ ಟಿಪ್ಪು ಜಯಂತಿ ಆಚರಣೆ ವೈಫಲ್ಯ ಕಂಡಿದೆ ಎಂದರು.

ಹುಬ್ಬಳ್ಳಿ ನಗರಪಾಲಿಕೆಯ ವಿರೋಧ ಪಕ್ಷದ ನಾಯಕರು ಪಾಲಿಕೆ ಕಟ್ಟಡದಲ್ಲಿ ಟಿಪ್ಪು ಜಯಂತಿ ಆಚರಿಸಿದ್ದು ಸರಿಯಲ್ಲ. ಸರ್ಕಾರಿ ಕಚೇರಿಯಲ್ಲಿ ಜಯಂತಿ ಆಚರಿಸಿರುವ ಅವರ ಮೇಲೆ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ನಾವೇ ಪೊಲೀಸ್ ದೂರು ನೀಡುತ್ತೇವೆ ಎಂದರು.

We will destroy tippus statue in case the government agrees to establish it slams Muthalik.