ಬ್ರೇಕಿಂಗ್ ನ್ಯೂಸ್
12-11-22 11:06 am Bangalore Correspondent ಕರ್ನಾಟಕ
ಬೆಂಗಳೂರು, ನ.12 : ವೇದಗಳ ಅಧ್ಯಯನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ್ದ, ಪದ್ಮಶ್ರೀ ಪುರಸ್ಕೃತ ಗಣಿತ ತಜ್ಞ ಡಾ.ಆರ್.ಎಲ್. ಕಶ್ಯಪ್ (ರಂಗಸ್ವಾಮಿ ಲಕ್ಷ್ಮೀನಾರಾಯಣ ಕಶ್ಯಪ್) ಅವರು ಶುಕ್ರವಾರ ನಿಧನರಾಗಿದ್ದಾರೆ.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಆರ್.ಎಲ್.ಕಶ್ಯಪ್ (85) ಅವರು ಉತ್ತರಹಳ್ಳಿ ಸಮೀಪದ ಗುಬ್ಬಲಾಳದ ತಮ್ಮ ಸ್ವಗೃಹದಲ್ಲಿ ನಿಧನರಾದರು. ಶನಿವಾರ ಜಯನಗರದ ಸಾಕ್ಷಿ ಕಚೇರಿಯಲ್ಲಿ ಬೆಳಗ್ಗೆ 8 ರಿಂದ 10ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಮೈಸೂರು ಮೂಲದ ಕಶ್ಯಪ್, ಬೆಂಗಳೂರಿನ ನ್ಯಾಷನಲ್ ಕಾಲೇಜಿನಲ್ಲಿ ಬಿ.ಎಸ್ಸಿ, ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ಎಂಎಸ್ಸಿ, ಹಾರ್ವರ್ಡ್ ವಿವಿಯಿಂದ ಕಂಪ್ಯೂಟರ್ ವಿಷಯದಲ್ಲಿ ಪಿ.ಎಚ್.ಡಿ. ಪಡೆದಿದ್ದರು. ಅಮೇರಿಕದ ಆಕ್ಸ್ ಫರ್ಡ್ ವಿ.ವಿ.ಯಲ್ಲಿ ಮೂರು ದಶಕಗಳ ಕಾಲ ಎಲೆಕ್ಟ್ರಿಕಲ್ ಹಾಗೂ ಕಂಪ್ಯೂಟರ್ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು. 350ಕ್ಕೂ ಅಧಿಕ ಸಂಶೋಧನಾ ಪ್ರಬಂಧಗಳನ್ನು ಬರೆದಿದ್ದಾರೆ. ಐವತ್ತು ಸಂಶೋಧನಾ ವಿದ್ಯಾರ್ಥಿಗಳಿಗೂ ಮಾರ್ಗದರ್ಶಿ ಆಗಿದ್ದರು.
ವೇದಗಳ ಸಂಶೋಧನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವೇದಗಳಲ್ಲಿ 25 ಸಾವಿರದಷ್ಟು ಮಂತ್ರಗಳಿಗೆ ಅರ್ಥ ಬರೆದು ಪ್ರಕಟಿಸಿದ್ದಾರೆ. ಋಗ್ವೇದದ 12 ಸಂಪುಟಗಳು, ಕೃಷ್ಣ ಯಜುರ್ವೇದದ 4 ಸಂಪುಟಗಳು, ಅಥರ್ವ ವೇದದ 6 ಸಂಪುಟಗಳು, ಸಾಮವೇದದ 2 ಸಂಪುಟಗಳು ಹಾಗೂ ಶುಕ್ಲ ಯಜುರ್ವೇದದ 2 ಸಂಪುಟಗಳು ವೇದಾಸಕ್ತರ ಅಪಾರ ಜನಮನ ಸೆಳೆದಿವೆ.
ಕಶ್ಯಪ್ ಅವರ “ಋಗ್ವೇದವನ್ನು ಯಾಕೆ ಓದಬೇಕು” ಎಂಬ ಕೃತಿ ಸಾಹಿತ್ಯ ಲೋಕದಲ್ಲಿ ಬಹಳಷ್ಟು ಮೆಚ್ಚುಗೆ ಪಡೆದಿದೆ. ಕನ್ನಡ, ಇಂಗ್ಲಿಷ್, ಹಿಂದಿ, ಮರಾಠಿ ಭಾಷೆಗಳಲ್ಲಿ ಪ್ರಕಟವಾಗಿದೆ. ಇವರು ರಚಿಸಿರುವ “ಋಗ್ವೇದದ ಅರ್ಥಾನುಸಂಧಾನ, “ಸೃಷ್ಟಿ ಹಾಗೂ ಮೃತ್ಯು ಸೂಕ್ತಗಳು, “ಸಂಕಲ್ಪದ ಅಧಿದೇವತೆ-ಅಗ್ನಿ, “ಆಧುನಿಕರಿಗಾಗಿ ವೇದ ಜ್ಞಾನ’ ಸೇರಿ ಹಲವು ಮಧ್ಯಮ ಗಾತ್ರದ ಪುಸ್ತಕಗಳು ವೇದಾಧ್ಯಯನಕ್ಕೆ ದಿಕ್ಸೂಚಿಯಂತಿವೆ. ಈಗಾಗಲೇ ಕನ್ನಡ, ತಮಿಳು, ತೆಲುಗು, ಮರಾಠಿ, ಮಲೆಯಾಳಂ ಭಾಷೆಗಳಲ್ಲಿ ಇವರ ಕೃತಿಗಳು ಪ್ರಕಟಗೊಂಡಿವೆ.
Mathematician R.L., who has made significant contributions in the field of study of Vedas, was awarded Padma Shri . Kashyap (RL Kashyap) (Rangaswamy Lakshminarayan Kashyap) passed away on Friday. He was 85 years old. He was the founder of the spiritual organization Sakshi Trust and was honored with the Padma Shri by the central government in 2021.
28-05-26 10:56 am
HK News Staffer
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm