ಬ್ರೇಕಿಂಗ್ ನ್ಯೂಸ್

Mangalore accident, UT khader, DFYI; ತೊಕ್ಕೊಟ್ಟಿನ ರಸ್ತೆ ಗುಂಡಿಗೆ ಮಹಿಳೆ ಬಲಿ ; ಸ್ಪೀಕರ್ ಖಾದರೆಂದು ಗ್ರಹಿಸಿ ಡಿವೈಎಫ್ ಐ ಕಾರ್ಯಕರ್ತರ ಎಡವಟ್ಟು, ಶಾಸಕರ ಮೇಲಿನ ಆಕ್ರೋಶದಿಂದ ಕೇಂದ್ರ ಸಚಿವರ ಕಾರಿಗೆ ಮುತ್ತಿಗೆ! ವಿದೇಶ ಸುತ್ತುವುದರಲ್ಲಿ ಮೋದಿ ನಂತರ ಖಾದರ್ ಎರಡನೇಯವರು     |    Mangalore Mulki Pakshikere Murder case, Crime: ಒಂದೇ ಕುಟುಂಬದ ಮೂವರ ದುರಂತ ಅಂತ್ಯ ಕಂಡು ಬೆಚ್ಚಿಬಿದ್ದ ಪಕ್ಷಿಕೆರೆ ; ಮನೆಯಲ್ಲೇ ಮಗು, ಸೊಸೆ ಸತ್ತು ಬಿದ್ದರೂ ತಿಳಿಯಲೇ ಇಲ್ಲ ವೃದ್ಧ ದಂಪತಿಗೆ, ಕೌಟುಂಬಿಕ ಮನಸ್ತಾಪಕ್ಕೆ ಸಾವಿನ ದಾರಿ ಹಿಡಿದನೇ ಮನೆಮಗ ?!    |    Mangalore Accident, Thokottu: ತೊಕ್ಕೊಟ್ಟಿನ ರಸ್ತೆ ಗುಂಡಿಗೆ ಮಹಿಳೆ ಬಲಿ ! ಸ್ಕೂಟರ್ ನಿಂದ ರಸ್ತೆಗೆಸೆಯಲ್ಪಟ್ಟ ಮಹಿಳೆ ಮೇಲೆ ಹರಿದ ಕಂಟೇನರ್, ಪತಿಯ ಎದುರಲ್ಲೇ ಪತ್ನಿ ದಾರುಣ ಸಾವು, ರೊಚ್ಚಿಗೆದ್ದ ಸ್ಥಳೀಯರು, ರಸ್ತೆ ತಡೆದು ಪ್ರತಿಭಟನೆ    |   

ಸಂಧಾನ ಸಕ್ಸಸ್ ; ಸುಧಾಕರ್ - ರಾಮುಲು ಖಾತೆ ಬಿಕ್ಕಟ್ಟು ಶಮನ

13-10-20 01:00 pm       Headline Karnataka News Network   ಕರ್ನಾಟಕ

ಖಾತೆ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಶ್ರೀರಾಮುಲು ಹಾಗೂ ಸಚಿವ ಸುಧಾಕರ್ ನಡುವೆ ಸಿಎಂ ನಡೆಸಿದ ಸಂಧಾನ ಯಶಸ್ವಿಯಾಗಿದೆ

ಬೆಂಗಳೂರು, ಅಕ್ಟೋಬರ್.13 : ಖಾತೆ ಬದಲಾವಣೆಯಿಂದ ಪಕ್ಷದಲ್ಲಿ ಉಂಟಾಗಿದ್ದ ಅಸಮಾಧಾನವನ್ನ ಶಮನಗೊಳಿಸುವಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇಂದು ಸಚಿವ ಸುಧಾಕರ್ ಮತ್ತು ಶ್ರೀರಾಮುಲು ಇಬ್ಬರನ್ನ ಕಾವೇರಿ ನಿವಾಸಕ್ಕೆ ಕರೆಸಿಕೊಂಡಿದ್ದರು. ಈ ವೇಳೆ ಇಬ್ಬರು ಸಚಿವರ ಜೊತೆಗೆ ಮಾತುಕತೆ ನಡೆಸಿ ಸಂಪುಟ ವಿಸ್ತರಣೆ ವೇಳೆ ನೋಡಿಕೊಳ್ಳೋಣ ಎಂದ ಸಿಎಂ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಸಿಎಂ ಭರವಸೆ ಹಿನ್ನೆಲೆ ಶ್ರೀರಾಮುಲು ಸಮಾಜ ಕಲ್ಯಾಣ ಇಲಾಖೆ ಖಾತೆ ಒಪ್ಪಿಕೊಂಡಿದ್ದಾರೆ.

ಸಿಎಂ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀರಾಮುಲು, ಈ ಹಿಂದೆ ನನಗೆ ಸಮಾಜ ಕಲ್ಯಾಣ ಖಾತೆ ನೀಡಬೇಕೆಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದ್ದೆ. ಅದರಂತೆ ಸಿಎಂ ಆ ಖಾತೆಯನ್ನ ನೀಡಿದ್ದಾರೆ. ಮಾಧ್ಯಮಗಳಲ್ಲಿ ಬಿತ್ತರವಾಗಿರುವಂತೆ ಯಾವುದೇ ಅಸಮಾಧಾನ ಇಲ್ಲ. ಕೊರೊನಾ ಕಾಲದಲ್ಲಿ ವೈದ್ಯಕೀಯ ಮತ್ತು ಆರೋಗ್ಯ ಇಲಾಖೆ ಒಬ್ಬರೇ ಬಳಿ ಇರೋದು ಉತ್ತಮ. ಹಾಗಾಗಿ ಆರೋಗ್ಯ ಇಲಾಖೆ ಖಾತೆಯನ್ನ ಸೋದರರಾಗಿರುವ ಸುಧಾಕರ್ ಅವರಿಗೆ ನೀಡಲಾಗಿದೆ. ಸುಧಾಕರ್ ವೈದ್ಯರಾಗಿದ್ದು, ಆರೋಗ್ಯ ಇಲಾಖೆಯನ್ನ ಉತ್ತಮವಾಗಿ ನಿರ್ವಹಿಸಲಿದ್ದಾರೆ ಎಂದು ಹೇಳಿದರು

ಇದೇ ವೇಳೆ ಮಾತನಾಡಿದ ಸುಧಾಕರ್, ಬಿಹಾರ ಮತ್ತು ಉಪ ಚುನಾವಣೆ ಹಿನ್ನೆಲೆ ಸಂಪುಟ ವಿಸ್ತರಣೆಗೆ ಹೈಕಮಾಂಡ್ ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಈ ಹಿನ್ನೆಲೆ ಕೆಲ ತಾಂತ್ರಿಕೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಖಾತೆಗಳ ಬದಲಾವಣೆಯಾಗಿದೆ. ಶ್ರೀರಾಮುಲು ಅಣ್ಣನವರು ರಾಜಕೀಯದಲ್ಲಿ ನನಗಿಂತ ಹಿರಿಯರು. ಸಮಾಜ ಕಲ್ಯಾಣ ಅನ್ನೋದು ಪ್ರಬಲ ಖಾತೆ. ಮುಖ್ಯಮಂತ್ರಿಗಳ ಖಾತೆಯ ಬದಲಾವಣೆ ಬಗ್ಗೆ ಒಂದು ತಿಂಗಳಿನಿಂದ ನಮ್ಮೊಂದಿಗೆ ಚರ್ಚೆ ನಡೆಸಿದ್ದರು. ಸಮಾಜದ ಸ್ವಾಸ್ಥ್ಯವನ್ನ ಚೆನ್ನಾಗಿ ಮಾಡಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಹೊಣೆಯನ್ನ ಶ್ರೀರಾಮುಲು ಅವರಿಗೆ ನೀಡಲಾಗಿದೆ ಎಂದು ತಿಳಿಸಿದರು.