ಬ್ರೇಕಿಂಗ್ ನ್ಯೂಸ್
17-11-22 02:33 pm HK News Desk ಕರ್ನಾಟಕ
ಚಿಕ್ಕಮಗಳೂರು, ನ.17 : ಕಾಂಗ್ರೆಸ್ ನಾಯಕಿ, ಮಾಜಿ ಎಂಎಲ್ ಸಿ ಗಾಯತ್ರಿ ಶಾಂತೇಗೌಡ ಮತ್ತು ಅವರ ಅಳಿಯನ ನಿವಾಸ, ಕಚೇರಿಗಳ ಮೇಲೆ ಐಟಿ ದಾಳಿ ನಡೆದಿದೆ. ಚಿಕ್ಕಮಗಳೂರು ನಗರದ ಮಾರ್ಕೆಟ್ ರಸ್ತೆಯಲ್ಲಿರುವ ಗಾಯತ್ರಿ ಶಾಂತೇಗೌಡರ ನಿವಾಸಕ್ಕೆ ಬೆಳ್ಳಂಬೆಳಗ್ಗೆ ಅಧಿಕಾರಿಗಳು ನುಗ್ಗಿದ್ದು ಶಾಕ್ ನೀಡಿದ್ದಾರೆ.
ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಐಟಿ ಅಧಿಕಾರಿಗಳು ಆಗಮಿಸಿದ್ದರು. ವಾಹನದ ಮುಂಭಾಗದಲ್ಲಿ ಮದುವೆ ದಿಬ್ಬಣದ ಕಾರಿನಂತೆ ಶೃಂಗರಿಸಿ ಸಂಶಯ ಬಾರದಂತೆ ಮಾಡಲಾಗಿತ್ತು. ಹಾಸನ ಜಿಲ್ಲೆಯ ಬೇಲೂರಿನಲ್ಲಿರುವ ಅಳಿಯ ಸಂತೋಷ್ ನಿವಾಸದ ಮೇಲೂ ಐಟಿ ಅಧಿಕಾರಿಗಳು ತೆರಳಿದ್ದು ತಪಾಸಣೆ ನಡೆಸಿದ್ದಾರೆ. ಬೇಲೂರು ಪಟ್ಟಣದ ಚನ್ನಕೇಶವಗೌಡ್ರು ಬೀದಿಯಲ್ಲಿ ಸಂತೋಷ್ ಮನೆಯಿದ್ದು ಅವರಿಗೆ ಸೇರಿದ ಕಲ್ಯಾಣ ಮಂಟಪದ ಮೇಲೂ ದಾಳಿ ನಡೆಸಲಾಗಿದೆ.



ಇದೇ ವೇಳೆ, ರಾಜ್ಯ ಸರ್ಕಾರ ಟಾರ್ಗೆಟ್ ಇಟ್ಟುಕೊಂಡು ಗಾಯಿತ್ರಿ ಶಾಂತೇಗೌಡರ ಮನೆಗೆ ಐಟಿ ದಾಳಿ ನಡೆಸಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಶಾಸಕ ಸಿ.ಟಿ.ರವಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ತೋರಿದ್ದಾರೆ. ಲೂಟಿ ರವಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದು ಐಟಿ ಇಲಾಖೆಯನ್ನು ದುರಪಯೋಗ ಮಾಡಿಕೊಳ್ಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಿದ್ದರು.


ಚಿಕ್ಕಮಗಳೂರಿನ ಗಾಯತ್ರಿ ಶಾಂತೇಗೌಡರ ನಿವಾಸ, ಕಚೇರಿ ಅಲ್ಲದೆ, ಗಾಯಿತ್ರಿ ಶಾಂತೇಗೌಡ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೂವರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ. ಚಿಕ್ಕಮಗಳೂರು ತಾಲೂಕಿನ ಮರ್ಲೆ ಕಲ್ಲಿನ ಕ್ರಷರ್ ಸ್ಥಳಕ್ಕೂ ದಾಳಿಯಾಗಿದೆ. ಇದಲ್ಲದೆ, ಬೆಂಗಳೂರಿನ ನಾಗರಬಾವಿಯಲ್ಲಿರುವ ಗಾಯತ್ರಿ ಶಾಂತೇಗೌಡ ನಿವಾಸಕ್ಕೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Gayathri Shante Gowda, the leader of the Congress, was the target of income tax raids at her Chikmanglur, Karnataka, home. She is regarded as Siddaramaiah's aide. Just before the Karnataka elections, I-T pressure is increasing on the Congress leader. Income Tax officers searched Gayathri Shante Gowda's home early this morning. She is a former Congresswoman and currently a member of the Congress party.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm