ಬ್ರೇಕಿಂಗ್ ನ್ಯೂಸ್
17-11-22 11:01 pm Bangalore Correspondent ಕರ್ನಾಟಕ
ಬೆಂಗಳೂರು, ನ.17: ವೋಟರ್ ಐಡಿ ವಿಚಾರದಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿ ರಾಜಿನಾಮೆ ಕೇಳಿದ ಬೆನ್ನಲ್ಲೇ ಪ್ರಕರಣ ಭಾರೀ ವಿವಾದಕ್ಕೆ ಕಾರಣವಾಗಿದೆ. ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ತನಿಖೆಗೆ ಆದೇಶ ಮಾಡಿದ್ದಲ್ಲದೆ, ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರನ್ನು ತಲೆದಂಡ ಪಡೆಯಲು ಮುಂದಾಗಿದ್ದಾರೆ.
ಮತದಾರ ಪಟ್ಟಿ ಪರಿಷ್ಕರಣೆಯನ್ನು ರಾಜ್ಯ ಸರಕಾರ ಖಾಸಗಿ ಸಂಸ್ಥೆಗೆ ವಹಿಸಿತ್ತು. ಆದರೆ, ಮತದಾರ ಪಟ್ಟಿ ಪರಿಷ್ಕರಣೆ ನೆಪದಲ್ಲಿ ಮತದಾರರ ಖಾಸಗಿ ಮಾಹಿತಿಗಳನ್ನು ಸಂಗ್ರಹಿಸಿದ ವಿಚಾರದಲ್ಲಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಖಾಸಗಿ ಮಾಹಿತಿಗಳನ್ನು ಕದ್ದಿರುವ ಪ್ರಕರಣದ ಬಗ್ಗೆ ಗಂಭೀರವಾಗಿ ಆರೋಪ ಮಾಡಿದ್ದರು. ಈ ಘಟನೆಗೆ ಮುಖ್ಯಮಂತ್ರಿಯೇ ಹೊಣೆ ಹೊರಬೇಕು. ಇದಕ್ಕಾಗಿ ಮುಖ್ಯಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು ಎಂದು ಆಗ್ರಹ ಮಾಡಿದ್ದರು.

ಘಟನೆ ಭಾರೀ ವಿವಾದವಾಗುತ್ತಲೇ ಎನ್ ಜಿಓ ಸಂಸ್ಥೆಯ ವಿರುದ್ಧ ಹಲಸೂರು ಗೇಟ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಬೊಮ್ಮಾಯಿ, ಈ ಬಗ್ಗೆ ತನಿಖೆಗೆ ಆದೇಶ ಮಾಡಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ಕಾಂಗ್ರೆಸ್ ನಾಯಕರು ಯಾವುದೇ ವಿಚಾರ ಇಲ್ಲದೆ ದಿವಾಳಿಯಾಗಿದ್ದಾರೆ. ಹಾಗಾಗಿ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ. ಮತದಾರ ಪಟ್ಟಿ ಪರಿಷ್ಕರಣೆಯನ್ನು ಎನ್ ಜಿಓ ಸಂಸ್ಥೆಗೆ ವಹಿಸುವುದು ಹೊಸತಲ್ಲ. ಹಿಂದೆ ಕಾಂಗ್ರೆಸ್ ಸರಕಾರ ಇದ್ದಾಗಲೂ ಇದೇ ರೀತಿ ಮಾಡಲಾಗಿತ್ತು ಎಂದು ಹೇಳಿದರು. ಘಟನೆ ಹಿನ್ನೆಲೆಯಲ್ಲಿ ಬಿಬಿಎಂಪಿ ಕಮಿಷನರ್ ಅವರನ್ನು ಎತ್ತಂಗಡಿ ಮಾಡಲಾಗುತ್ತದೆ ಎನ್ನುವ ಮಾಹಿತಿಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ.

ಮತದಾರರ ಮಾಹಿತಿಗಳನ್ನು ಕದಿಯಲಾಗುತ್ತಿದೆ. ಚುನಾವಣೆ ಕಾಲದಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರನ್ನು ಬಿಟ್ಟು ಮತದಾರ ಮಾಹಿತಿ ಸಂಗ್ರಹ ಮಾಡಲಾಗುತ್ತಿದೆ. ಅವರ ಐಡಿ, ಇನ್ನಿತರ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಇದು ಗಂಭೀರ ಅಪರಾಧವಾಗಿದ್ದು, ಈ ಬಗ್ಗೆ ದೂರು ದಾಖಲಿಸುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದರು.
The Congress on Thursday filed a police complaint against Karnataka Chief Minister Basavaraj Bommai, Bengaluru civic body Commissioner Tushar Giri Nath and other officials after a news report showed that a non-governmental organisation allegedly collected voter data by impersonating as government officers, reported ANI. The NGO issued fake identification cards to its field agents after the civic body asked it to carry out a voter awareness drive, according to an investigative report by news websites The News Minute and Pratidhvani.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
13-11-25 08:41 pm
HK News Desk
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
Delhi Blast: ದೆಹಲಿ ಸ್ಫೋಟಕ್ಕೆ ಟರ್ಕಿ ನಂಟಿನ ಶಂಕೆ...
13-11-25 04:52 pm
ಅಮಾಯಕರನ್ನು ಕೊಲ್ಲುವುದು ಇಸ್ಲಾಂನಲ್ಲಿ ಅತಿದೊಡ್ಡ ಪಾ...
12-11-25 02:54 pm
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
13-11-25 07:41 pm
Mangalore Correspondent
Belthangady, Kadaba Suicide, Mangalore; ಕಡಬದ...
13-11-25 05:01 pm
Kumble Toll Plaza: ಕುಂಬಳೆ ಟೋಲ್ ಪ್ಲಾಜಾಕ್ಕೆ ಭಾರ...
13-11-25 01:44 pm
Mangalore NMPT, Dinesh Gundu Rao, Congress, B...
12-11-25 06:56 pm
Ullal Dargah Committee: ಉಳ್ಳಾಲ ದರ್ಗಾ ಕಮಿಟಿಯಲ್...
11-11-25 10:42 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm