ಮತದಾರ ಪಟ್ಟಿ ಪರಿಷ್ಕರಣೆಯಿಂದ ಬಿಜೆಪಿಗೆ ಅನುಕೂಲ ಮಾಡಿದ್ದಾರೆ ; ಸಿದ್ದರಾಮಯ್ಯ 

18-11-22 04:44 pm       HK News Desk   ಕರ್ನಾಟಕ

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ಈ ಬಗ್ಗೆ ಪೊಲೀಸ್ ದೂರು ನೀಡಿದ್ದು ತನಿಖೆ ನಡೆಸಲು ಒತ್ತಾಯಿಸಿದ್ದೇವೆ.‌ ಈ ಬಗ್ಗೆ ನಾಳೆ(ನ.19) ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಮೈಸೂರು, ನ.18 : ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಮಾಹಿತಿ ಕಳ್ಳತನ ಆಗಿದೆ. ಈ ಬಗ್ಗೆ ಪೊಲೀಸ್ ದೂರು ನೀಡಿದ್ದು ತನಿಖೆ ನಡೆಸಲು ಒತ್ತಾಯಿಸಿದ್ದೇವೆ.‌ ಈ ಬಗ್ಗೆ ನಾಳೆ(ನ.19) ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಮತದಾರ ಪಟ್ಟಿ ಪರಿಷ್ಕರಣೆ ಕೆಲಸವನ್ನು ಬಿಬಿಎಂಪಿ ಆಯುಕ್ತರು ಖಾಸಗಿ ಕಂಪೆನಿಗೆ ವಹಿಸಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರೂ ಆಗಿರುವ ಬಸವರಾಜ ಬೊಮ್ಮಾಯಿಗೆ ಗೊತ್ತಿದ್ದೇ ಈ ಕೆಲಸ ಆಗಿದೆ. ಚುನಾವಣಾ ಆಯೋಗ ಸ್ವೀಪ್ ಹೆಸರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ. ಆದರೆ ಇವರು ಕಾಂಪಿಟೇಟಿವ್ ಬಿಡ್ ಕರೆಯಬೇಕಿತ್ತು. ಉಚಿತವಾಗಿ ಪರಿಷ್ಕರಣೆ ಮಾಡುತ್ತೇವೆ ಎಂದಿದ್ದಕ್ಕೆ ಚಿಲುಮೆ ಮತ್ತು ಹೊಂಬಾಳೆ ಕಂಪನಿಗೆ ಕೊಟ್ಟಿದ್ದಾರೆ. ಇದಕ್ಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ. ಆ ಕಂಪನಿ ಲಾಭ ಇಲ್ಲದೆ ಇದನ್ನು ಮಾಡುತ್ತದೆಯೇ ? ಅಲ್ಪಸಂಖ್ಯಾತ, ದಲಿತರು, ಹಿಂದುಳಿದವರು ಕಾಂಗ್ರೆಸ್ ಪರ ಇರುತ್ತಾರೆ. ಮತಪಟ್ಟಿಯಿಂದ ಅಂತಹ ಮತದಾರರ ಮಾಹಿತಿಯನ್ನು ಡಿಲೀಟ್ ಮಾಡಿ ಬಿಜೆಪಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ನಾವು ಆರೋಪ ಮಾಡಿದ ಮೇಲೆ ಬಿಬಿಎಂಪಿ ಆಯುಕ್ತರು ರಕ್ಷಣಾತ್ಮಕವಾಗಿ ಹೇಳಿಕೆ ನೀಡುತ್ತಿದ್ದಾರೆ. ಇಲ್ಲಿ ಮಾಹಿತಿ ಕಳ್ಳತನ ಆಗಿರುವುದು ನಿಜ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

Basavaraj Bommai could be replaced as Karnataka CM, claims ex-BJP MLA B  Suresh Gowda | Deccan Herald

ಬಿಎಲ್‌ಓಗಳು ಯಾವಾಗಲೂ ಸರ್ಕಾರಿ ಅರೆ, ಸರ್ಕಾರಿ ನೌಕರರಾಗಬೇಕು. ಇವರು ತಮಗೆ ಬೇಕಾದವರನ್ನು ಬಿಎಲ‌್‌ಒ ಮಾಡಿಕೊಂಡಿದ್ದಾರೆ. ಇದು ಕಾನೂನು ಬಾಹಿರ ಕೆಲಸ. ಖಾಸಗಿಯವರನ್ನ ಬಿಎಲ್‌ಒಗಳಾಗಿ ನೇಮಕ ಮಾಡುತ್ತಿರುವುದಕ್ಕೆ ನಿಮಗೆ ಅಧಿಕಾರ ಕೊಟ್ಟವರು ಯಾರು ಎಂದು ಪ್ರಶ್ನಿಸಿದ್ದಾರೆ. ‌

ಮತದಾರ ಪಟ್ಟಿ ಪರಿಷ್ಕರಣೆ ಅಕ್ರಮವೂ ಆಪರೇಷನ್ ಕಮಲ ಮತ್ತು ಭ್ರಷ್ಟಾಚಾರದ ಭಾಗ. ಚುನಾವಣೆಯಲ್ಲಿ ಗೆಲ್ಲೋಕೆ ಏನೆಲ್ಲ ಆಟ ಆಡ್ತಾರೆ ಅನ್ನೋದಕ್ಕೆ ಇದೂ ಒಂದು ಉದಾಹರಣೆ. ಬಿಜೆಪಿಯವರೂ ಏನೂ ಬೇಕಾದ್ರೂ ಮಾಡುತ್ತಾರೆ ಎಂಬುದಕ್ಕೆ ಇದು ಸಾಕ್ಷಿ ಎಂದು ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. 

D.K. Shivakumar appears before ED in money laundering case - The Hindu

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವುದು ಬೇಡ, ಇಡೀ ರಾಜ್ಯದಲ್ಲಿ ಪ್ರಚಾರ ನಡೆಸಲಿ ಎಂಬ ಮಾಜಿ ಸಚಿವ ಸಂತೋಷ್ ಲಾಡ್ ಹೇಳಿಕೆ ಬಗ್ಗೆ ಕೇಳಿದ್ದಕ್ಕೆ, ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅದನ್ನೂ ಪರಿಗಣನೆಗೆ ತೆಗೆದುಕೊಳ್ಳೋಣ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

Election process corrupted by ruling govt Karnataka Congress Siddaramaiah attacks BJP, CM Bommai