ಬ್ರೇಕಿಂಗ್ ನ್ಯೂಸ್
19-11-22 11:51 am Bangalore Correspondent ಕರ್ನಾಟಕ
ಬೆಂಗಳೂರು, ನ.19 : ತೆಲಂಗಾಣದಲ್ಲಿ ಟಿಆರ್ ಎಸ್ ಶಾಸಕರನ್ನು ಆಪರೇಷನ್ ಕಮಲಕ್ಕೆ ಯತ್ನಿಸಿದ್ದ ಪ್ರಕರಣ ಸಂಬಂಧಿಸಿ ಬಿಜೆಪಿ ರಾಷ್ಟ್ರಿಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಗೆ ವಿಶೇಷ ಪೊಲೀಸ್ ತನಿಖಾ ತಂಡ ನೋಟಿಸ್ ಜಾರಿ ಮಾಡಿದೆ.
ತೆಲಂಗಾಣದಲ್ಲಿ ಪ್ರಕರಣ ಸಂಬಂಧ ಬಂಧಿಸಲ್ಪಟ್ಟ ಆರೋಪಿಗಳು ಬಿಜೆಪಿ ಪ್ರಭಾವಿ ಮುಖಂಡ ಬಿ.ಎಲ್ ಸಂತೋಷ್ ಅವರ ಹೆಸರು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಎಸ್ಐಟಿ ತನಿಖಾ ತಂಡವು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 21ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಅಂದು ಬೆಳಗ್ಗೆ 10:30ಕ್ಕೆ ಹೈದರಾಬಾದ್ ಎಸ್ಐಟಿ ಕಚೇರಿಗೆ ಹಾಜರಾಗುವಂತೆ ಸೂಚಿಸಿದ್ದು, ಒಂದು ವೇಳೆ ವಿಚಾರಣೆ ಹಾಜರಾಗದಿದ್ದರೆ ಬಂಧಿಸಲಾಗುವುದು ಎಂದು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ. ಸಿಆರ್ ಪಿಸಿ ಸೆಕ್ಷನ್ 41 ಅಡಿ ನೋಟಿಸ್ ನೀಡಲಾಗಿದ್ದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ನೋಟಿಸ್ ರವಾನಿಸಲಾಗಿದೆ. ಅಲ್ಲದೆ, ಆರೋಪಿಗಳೊಂದಿಗೆ ಸಂಪರ್ಕ ಹೊಂದಿದ್ದ ಮೊಬೈಲನ್ನು ಯಾವುದೇ ಕಾಲ್ ಡಿಟೈಲ್ ಡಿಲೀಟ್ ಮಾಡದೆ ತರುವಂತೆ ಸೂಚಿಸಲಾಗಿದೆ.
ತೆಲಂಗಾಣ ಶಾಸಕರನ್ನು ಆಪರೇಷನ್ ಕಮಲದ ಮೂಲಕ ಬಿಜೆಪಿ ಪಕ್ಷಕ್ಕೆ ಕರೆತರಲು ಸಂತೋಷ್ ಪ್ಲ್ಯಾನ್ ಮಾಡಿದ್ದು, ಒಬ್ಬ ಶಾಸಕರಿಗೆ ನೂರು ಕೋಟಿ ರೂ. ಆಮಿಷವೊಡ್ಡಿರುವ ಆರೋಪ ಕೇಳಿಬಂದಿತ್ತು. ಪ್ರಕರಣ ಸಂಬಂಧಿಸಿ ಮೂವರನ್ನು ಅರೆಸ್ಟ್ ಮಾಡಲಾಗಿದ್ದು ಹಲವರಿಗೆ ವಿಚಾರಣೆ ಹಾಜರಾಗಲು ನೋಟಿಸ್ ಜಾರಿ ಮಾಡಲಾಗಿದೆ.
In a major development in MLAs poaching case, the Special Investigation Team (SIT) of Telangana Police has summoned Bharatiya Janata Party (BJP) General Secretary (Organisation) BL Santhosh. The SIT has served notice to the BJP leader under Section 41A of the Criminal Procedure Code(CrPC) asking him to appear before it on Monday, November 21. Santhosh has been directed to go to the Police Command and Control Centre in Hyderabad at 10.30 am on Monday. The SIT has stated in the notice that if he fails to appear before it, he will be arrested.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am