ಬ್ರೇಕಿಂಗ್ ನ್ಯೂಸ್
22-11-22 11:10 pm Bangalore Correspondent ಕರ್ನಾಟಕ
ಬೆಂಗಳೂರು, ನ.22 : ಮತದಾರರ ಪಟ್ಟಿಯಲ್ಲಿ ಹೆಸರು ತೆಗೆಯುವುದಕ್ಕೆ ಅಥವಾ ಸೇರಿಸುವುದಕ್ಕೆ ಫಾರಂ 7 ಅತ್ಯಗತ್ಯ. ಈ ಅರ್ಜಿಗಳು ಇಲ್ಲದೆ 27 ಲಕ್ಷ ಹೆಸರು ತೆಗೆದಿದ್ದು ಹೇಗೆ? ಇವುಗಳಿಗೆ ಸಹಿ ಹಾಕಿದವರು ಯಾರು? ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಹೇಳಿಕೆ ನೀಡಿರುವ ಅವರು, ಬೇರೆ ಸಮಯದಲ್ಲಿ ಚಿಲುಮೆ ಸಂಸ್ಥೆಗೆ ಬೇರೆ ಕೆಲಸವನ್ನು ಸರ್ಕಾರ ನೀಡಿರಬಹುದು. ಆದರೆ ಅವುಗಳಿಗೂ ಈ ಚುನಾವಣೆ ಪ್ರಕ್ರಿಯೆಗೂ ಬಹಳ ವ್ಯತ್ಯಾಸವಿದೆ. ಚುನಾವಣಾ ಆಯೋಗದ ಅಧಿಕಾರಿಗಳ ಭೇಟಿಗೆ ಇಂದು ಸಮಯಾವಕಾಶ ಕೇಳಲಾಗಿತ್ತು. ಹಿರಿಯ ಅಧಿಕಾರಿ ಭೇಟಿ ಮಾಡಬೇಕಿದ್ದು, ನಾಳೆ ಸಮಯ ನೀಡಿದ್ದಾರೆ. ನಾಳೆ ಭೇಟಿ ಮಾಡಿ ನಮ್ಮ ದೂರು ನೀಡುತ್ತೇವೆ. ಈ ಪ್ರಕರಣದಲ್ಲಿ ಸಾಕಷ್ಟು ಕಾನೂನು ಅಂಶಗಳಿವೆ. ಮತದಾರರ ಮಾಹಿತಿ ತೆಗೆದುಕೊಳ್ಳುವ ಅವಕಾಶ ಯಾರಿಗೂ ಇಲ್ಲ. ರಾಜ್ಯದಲ್ಲಿ 8,250 ಬೂತ್ ಗಳಿವೆ. ಪ್ರತಿ ಬೂತ್ ಗೆ ಒಬ್ಬರನ್ನು ನೇಮಕ ಮಾಡಬೇಕು. ಕೇವಲ ಚಿಲುಮೆ ಸಂಸ್ಥೆ ಮಾತ್ರವಲ್ಲ, 7 ಸಾವಿರಕ್ಕೂ ಹೆಚ್ಚು ಜನರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದೆ. ಎಲ್ಲಾ 28 ಕ್ಷೇತ್ರ ಚುನಾವಣಾಧಿಕಾರಿ ಮೇಲೂ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ.
ಒತ್ತಡದ ಮೇಲೆ ಈ ಕೆಲಸ ಮಾಡಿದ್ದೇವೆ ಎಂದು ಕೆಲವು ಬಂಧಿತ ಆರೋಪಿಗಳು ಹೇಳಿಕೆ ನೀಡಿರುವ ಸುದ್ದಿ ಬಗ್ಗೆ ಕೇಳಿದಾಗ, ಈ ವಿಚಾರ ನನಗೆ ಗೊತ್ತಿಲ್ಲ. ಆತ ಕಳ್ಳತನ ಮಾಡಿದ್ದರೆ, ಅದನ್ನು ಮಾಡಿಸಿದವರು ಯಾರು? ಹೀಗೆ ಮಾಡಬೇಕು ಎಂದು ಹೇಳಿಕೊಟ್ಟವರು ಯಾರು? ಅಧಿಕಾರಿಯೊಬ್ಬರು ಮೇಲಾಧಿಕಾರಿಗಳ ಆದೇಶದ ಮೇರೆಗೆ ನಾವು ಈ ಕೆಲಸ ಮಾಡಿದ್ದೇವೆ ಎಂದು ಹೇಳಿದ್ದು, ಈ ಮೇಲಾಧಿಕಾರಿಗಳು ಯಾರು? ನಾನಾ, ಸಿದ್ದರಾಮಯ್ಯನವರಾ, ಯಡಿಯರಪ್ಪನವರಾ, ಬೊಮ್ಮಾಯಿ ಅವರಾ? ಈ ವಿಚಾರ ತನಿಖೆಯಾಗಬೇಕು. ಆದರೆ ಇದು ಇವರಿಂದ ಸಾಧ್ಯವಿಲ್ಲ. ನಾವು ಎಲ್ಲವನ್ನೂ ಈಗಲೇ ಬಹಿರಂಗ ಮಾಡುವುದಿಲ್ಲ. ದೂರು ಕೊಟ್ಟ ನಂತರ ಏನು ದೂರು ಕೊಟ್ಟಿದ್ದೇವೆ ಎಂದು ತಿಳಿಸುತ್ತೇವೆ ಎಂದು ಹೇಳಿದ್ದಾರೆ.
ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಆರೋಪ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ನಾಲ್ಕನೇ ಆರೋಪಿಯನ್ನು ಬಂಧಿಸಿದ್ದಾರೆ. ಹಲಸೂರು ಗೇಟ್ ಪೊಲೀಸರು 4ನೇ ಆರೋಪಿ ಲೋಕೇಶ್ ಎಂಬಾತನನ್ನು ಅರೆಸ್ಟ್ ಮಾಡಿದ್ದಾರೆ. ಈತ ಪ್ರಕರಣದ ಪ್ರಮುಖ ಆರೋಪಿ ರವಿಕುಮಾರ್ ಆಪ್ತನಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಮತದಾರರ ವೈಯಕ್ತಿಕ ಮಾಹಿತಿ ಸಂಗ್ರಹ ಹಾಗೂ ದುರ್ಬಳಕೆ ಕೃತ್ಯಗಳಲ್ಲಿ ಬಂಧಿತ ಲೋಕೇಶ್ ಭಾಗಿಯಾಗಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ್ ಗೌಡ ಮಾತನಾಡಿ, ಪ್ರಕರಣ ಸಂಬಂಧ ಮತ್ತೊಬ್ಬನನ್ನು ಬಂಧಿಸಲಾಗಿದೆ. ಕಾಡುಗೋಡಿ ಮತ್ತು ಹಲಸೂರು ಗೇಟ್ ಪೊಲೀಸ್ ಠಾಣೆಗಳಲ್ಲಿ ಎರಡು ಎಫ್ಐಆರ್ ದಾಖಲಾಗಿದೆ. ಆತನನ್ನು ಬಂಧಿಸಿ ವಿಚಾರಣೆ ಮಾಡಲಾಗ್ತಿದೆ. ಈತ ಪ್ರಕರಣದ ಮುಖ್ಯ ಆರೋಪಿ ರವಿಕುಮಾರ್ ಆಪ್ತನಾಗಿದ್ದ ಎಂದು ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ಅನಗತ್ಯ ಗುಲ್ಲೆಬ್ಬಿಸುತ್ತಿದೆ ಎಂದು ಬಿಜೆಪಿ ಟೀಕೆಯ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಕಾಂಗ್ರೆಸ್ ಅನಗತ್ಯ ಆರೋಪ ಮಾಡ್ತಿದೆ ಎನ್ನುತ್ತಿದ್ದ ಬೊಮ್ಮಾಯಿ ಅವರೇ, ಚಿಲುಮೆ ಪ್ರಕರಣದಲ್ಲಿ ಮೂವರು ಅಧಿಕಾರಿಗಳ ಅಮಾನತು ಆಗಿರುವುದು ಹಗರಣದ ಗಾಂಭೀರ್ಯತೆ ಹೇಳುತ್ತಿಲ್ಲವೇ? ಸರ್ಕಾರದ ಪಾತ್ರವಿಲ್ಲ ಎಂದಿದ್ದೀರಿ, ಕಂದಾಯ ಅಧಿಕಾರಿಗಳು ಸರ್ಕಾರದ ಭಾಗವಲ್ಲವೇ? ಅಧಿಕಾರಿಗಳಿಗೆ ಚಿಲುಮೆ ಸಂಸ್ಥೆಗೆ ಸಹಕರಿಸುವಂತೆ ನಿರ್ದೇಶನ ನೀಡಿದವರು ಯಾರು? ಎಂದು ಟ್ವೀಟ್ ಮೂಲಕ ಪ್ರಶ್ನಿಸಿದೆ.
Karnataka Congress Tuesday questioned the state's ruling BJP government on the deletions of 27 lakh names from the voters' list. Karnataka Congress President DK Shivakumar said that for any addition and deletion, Form 7 is compulsory. "Without these forms, how were deletions made? Who signed and gave consent to these deletions?" Shivakumar questioned. "Time was sought to meet the officers of the Election Commission today (Tuesday). The appointment is given for Wednesday. We will file a complaint after meeting the officers," he added.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm