ಬ್ರೇಕಿಂಗ್ ನ್ಯೂಸ್
25-11-22 11:50 am HK News Desk ಕರ್ನಾಟಕ
ಕಾರವಾರ, ನ.25: ಕಾಂಗ್ರೆಸ್ ಮನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಹೇಳುತ್ತಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ 1200ಕ್ಕೂ ಹೆಚ್ಚು ಜನ ಅರ್ಜಿ ಹಾಕಿದ್ದಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 140-150 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾವಿದೆ. ನೀವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕುಮಟಾದಲ್ಲಿ ನಡೆದ ಕಾಂಗ್ರೆಸ್ ಜನಜಾಗೃತಿ ಸಮಾವೇಶದಲ್ಲಿ ಅವರು ಮಾತನಾಡಿದರು. ಸರ್ವಜ್ಞ ಒಂದು ಮಾತು ಹೇಳಿದ್ದಾರೆ. ಹುಳಿಗಳಲ್ಲಿ ನಿಂಬೆ ಹುಳಿ ಶ್ರೇಷ್ಠ, ಕಪ್ಪು ಬಣ್ಮದಲ್ಲಿ ದುಂಬಿಯ ಕಪ್ಪು ಬಣ್ಣ ಶ್ರೇಷ್ಠ, ದೇವತೆಗಳಲ್ಲಿ ಶಿವನಿಗಿಂತ ಶ್ರೇಷ್ಠ ಮತ್ತೊಬ್ಬರಿಲ್ಲ. ಅದೇ ರೀತಿ ನಂಬಿಕೆಗಿಂತ ದೊಡ್ಡ ಗುಣ ಬೇರೊಂದಿಲ್ಲ ಎಂದು. ನಾನು ಕೂಡ ಉತ್ತರ ಕನ್ನಡ ಜಿಲ್ಲೆಯ ಜನ ನಮಗೆ ಶಕ್ತಿ ನೀಡುತ್ತೀರಿ ಎಂದು ನಂಬಿದ್ದೇನೆ. ಇಡೀ ಜಿಲ್ಲೆ ನರಳುತ್ತಿದೆ. ನೋವಿನಿಂದ ನಿಮ್ಮ ಬದುಕಲ್ಲಿ ಬದಲಾವಣೆಗೆ ಕಾಯುತ್ತಿದ್ದೀರಿ.
ರಾಜ್ಯದಲ್ಲಿ ಬಿಜೆಪಿ ಆಪರೇಷನ್ ಕಮಲದ ಮೂಲಕ ಅಧಿಕಾರಕ್ಕೆ ಬಂದಿದೆ. ಕೇಂದ್ರದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರದಲ್ಲಿದೆ. ಅವರು ಆಗಾಗ್ಗೆ ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಾರೆ. ಆದರೆ ಇವರು ಕೊಟ್ಟ ಮಾತಿನಂತೆ ನಡೆದಿದ್ದಾರಾ? ಇದು ಬಸವಣ್ಣನ ಕರ್ನಾಟಕ ಇದು, ಕುವೆಂಪು, ಕನಕದಾಸರು, ಸಂತ ಶಿಶುನಾಳ ಶರೀಫರ ಕರ್ನಾಟಕ. ಈ ಕರ್ನಾಟಕ ಎಲ್ಲಿ ಹೋಯಿತು? ದ್ವೇಷ, ಅಸೂಯೆ, ಶಾಂತಿ ಭಂಗದ ಪರಿಣಾಮ ಜನ ನೆಮ್ಮದಿಯಿಂದ ಬದುಕಲು ಸಾಧ್ಯವಾಗುತ್ತಿಲ್ಲ.
ಕರಾವಳಿ ಭಾಗದಲ್ಲಿ ಯಾರೂ ವ್ಯಾಪಾರ ವಹಿವಾಟು ಮಾಡದ ಪರಿಣಾಮ ಇಲ್ಲಿನ ಯುವಕರು ಉದ್ಯೋಗ ಅರಸಿ ಬೇರೆ ರಾಜ್ಯ, ದೇಶಗಳಿಗೆ ಹೋಗುತ್ತಿದ್ದಾರೆ. ಈ ಭಾಗದಲ್ಲಿ ಉದ್ಯೋಗ ಸೃಷ್ಟಿ ಆಗದ ಕಾರಣ ಎಲ್ಲ ವಲಸೆ ಹೋಗಬೇಕಾಗಿದೆ. ಮೋದಿ ಅವರು ರೈತರ ಆದಾಯ ಡಬಲ್ ಮಾಡುವುದಾಗಿ ಹೇಳಿದ್ದರು, ನಿಮ್ಮ ಬ್ಯಾಂಕ್ ಖಾತೆಗೆ 15 ಲಕ್ಷ ಹಾಕುವುದಾಗಿ ಹೇಳಿದ್ದರು. ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ ಎಂದಿದ್ದರು. ಯಾವುದೂ ಆಗಲಿಲ್ಲ.
ಮುಂದಿನ ಚುನಾವಣೆಯಲ್ಲಿ ಎಷ್ಟೇ ಜನ ಟಿಕೆಟ್ ಗೆ ಅರ್ಜಿ ಹಾಕಿದ್ದರೂ ನೀವೆಲ್ಲರೂ ಒಟ್ಟಿಗೆ ಕೆಲಸ ಮಾಡುವುದಾಗಿ ಪಣ ತೊಡಬೇಕು. ಕಾಂಗ್ರೆಸ್ ಮನೆ ಖಾಲಿಯಾಗಿದೆ ಎಂದು ಬಿಜೆಪಿಯವರು ಹೇಳುತ್ತಿದ್ದರು. ಆದರೆ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ 1200ಕ್ಕೂ ಹೆಚ್ಚು ಜನ ಅರ್ಜಿ ಹಾಕಿದ್ದಾರೆ. ನಿಮ್ಮೆಲ್ಲರ ಆಶೀರ್ವಾದದಿಂದ ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 140-150 ಕ್ಷೇತ್ರಗಳಲ್ಲಿ ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ನೀವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಕಾಂಗ್ರೆಸ್ ಪಕ್ಷ ಈ ದೇಶದಲ್ಲಿ ಎಲ್ಲವನ್ನು ನೀಡಿದೆ.
ಮಾಜಿ ಸಂಸದರು ಹನಿ ಹನಿ ರಕ್ತ ನೀಡಿ ರಕ್ಷಣೆ ಮಾಡುವುದಾಗಿ ಹೇಳಿದ್ದಾರೆ. ಆದರೆ 2 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ನಿಮ್ಮ ಸರ್ಕಾರಕ್ಕೆ ಇವರಿಗೆ ರಕ್ಷಣೆ ನೀಡಲು ಆಗಿಲ್ಲ. ಆದರೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ನೀಡಲಿದೆ. ಬಿಜೆಪಿ ಚುನಾವಣೆ ಸಮಯದಲ್ಲಿ ಏನು ಭರವಸೆ ನೀಡಿದ್ದರು ಎಂದು ಅವರ ಪ್ರಣಾಳಿಕೆ ತೆಗೆದು ನೋಡಿ. ಆ ಬಗ್ಗೆ ನಾವು ನಿತ್ಯ ಪ್ರಶ್ನೆ ಕೇಳುತ್ತಿದ್ದೇವೆ. ಆದರೂ ಬೊಮ್ಮಾಯಿ ಅವರಾಗಲಿ, ಬಿಜೆಪಿಯ ಯಾವುದೇ ನಾಯಕರು ಬಾಯಿ ಬಿಚ್ಚುತ್ತಿಲ್ಲ. 1 ಲಕ್ಷದ ವರೆಗೂ ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದರು. ಯಾಕೆ ಮಾಡಲಿಲ್ಲ? ಮೈತ್ರಿ ಸರ್ಕಾರ ಬಂದಾಗ ನಮ್ಮ ಶಕ್ತಿ ಅನುಸಾರ ಸಾಲ ಮನ್ನಾ ಮಾಡಿದ್ದೇವೆ. ನಿಮ್ಮ ಡಬಲ್ ಇಂಜಿನ್ ಸರ್ಕಾರದಲ್ಲಿ ಯಾವುದಾದರೂ ಒಂದು ಜನಪರ ಯೋಜನೆ ಮಾಡಿದ್ದೀರಾ? ರೈತರ ಆದಾಯ ಡಬಲ್ ಮಾಡಿದ್ದೀರಾ? ಎಂದು ಅವರು ಪ್ರಶ್ನಿಸಿದ್ದಾರೆ.
ದೇಶದಲ್ಲಿ ಕೋವಿಡ್ ಸೋಂಕು ಹೆಚ್ಚಾದಾಗ ಆಸ್ಪತ್ರೆ ಬಿಲ್ ನೀಡುವುದಾಗಿ ಹೇಳಿದ್ದಿರಿ ಯಾರಿಗಾದರೂ ಕೊಟ್ಟರಾ? ಸತ್ತವರಿಗೆ ಪರಿಹಾರ ನೀಡುವುದಾಗಿ ಹೇಳಿದ್ದರು 4.5 ಲಕ್ಷ ಜನ ಸತ್ತಿದ್ದು ಎಂಟು ಜನರಿಗೆ ಪರಿಹಾರ ನೀಡಿದ್ದಾರೆ? ಆಕ್ಸಿಜನ್ ದುರಂತದಲ್ಲಿ ಸತ್ತವರಿಗೆ ಪ್ರಮಾಣಪತ್ರವೂ ನೀಡಲಿಲ್ಲ, ಪರಿಹಾರವನ್ನು ನೀಡಲಿಲ್ಲ. ಆದರೆ ನಾನು 36 ಮೃತರ ಮನೆ ಮನೆಗೆ ಹೋಗಿ 1 ಲಕ್ಷ ರೂ. ಚೆಕ್ ನೀಡಿ ಸಾಂತ್ವನ ಹೇಳಿದೆ. ಕೇವಿಡ್ ಸಮಯದಲ್ಲಿ ವಲಸೆ ಕಾರ್ಮಿಕರು ತಮ್ಮ ಊರಿಗೆ ಮರಳಲು ಮುಂದಾದಾಗ ಅವರಿಂದ ಮೂರುಪಟ್ಟು ಹೆಚ್ಚಿನ ಟಿಕೆಟ್ ದರ ವಸೂಲಿ ಮೂಲಕ ಸುಲಿಗೆ ಮಾಡಲು ಮುಂದಾದರು. ಅದನ್ನು ವಿರೋಧಿಸಿ ಪ್ರತಿಭಟನೆ ಮಾಡಿದೆವು. ಪಕ್ಷದ ಪರವಾಗಿ 1 ಕೋಟಿ ನೀಡುತ್ತೇವೆ, ಅವರಿಗೆ ಉಚಿತ ಪ್ರಯಾಣ ವ್ಯವಸ್ಥೆ ಕಲ್ಪಿಸಿ ಎಂದು ಆಗ್ರಹಿಸಿದ ಮೇಲೆ 1 ವಾರ ಉಚಿತ ಬಸ್ ಸಂಚಾರ ವ್ಯವಸ್ಥೆ ಕಲ್ಪಿಸಿದರು. ಯಾವುದಾದರೂ ಒಂದು ಜನಪರ ಕೆಲಸವನ್ನು ಈ ಸರ್ಕಾರ ಮಾಡಿದೆಯಾ? ಎಂದು ಅವರು ಪ್ರಶ್ನಿಸಿದ್ದಾರೆ.
The BJP used to say that the Congress house was empty. However, more than 1,200 people have applied for the Congress ticket. With the blessings of all of you, the Congress is confident of winning 140-150 seats in the next elections. KPCC president DK Shivakumar said that all of you should work unitedly.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm