ಬ್ರೇಕಿಂಗ್ ನ್ಯೂಸ್
25-11-22 03:22 pm Bangalore Correspondent ಕರ್ನಾಟಕ
ಬೆಂಗಳೂರು, ನ.25 : ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುತ್ತಿದ್ದ ವೇಳೆ ಕುಸಿದು ಬಿದ್ದು ಗದಗ-ರೋಣ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ (67) ನಿಧನರಾಗಿದ್ದಾರೆ.
ಸಭೆಯಲ್ಲಿ ಕುಳಿತಿದ್ದಾಗಲೇ ಕುಸಿದು ಬಿದ್ದ ಅವರನ್ನು ಕೂಡಲೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ. ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಎರಡು ಬಾರಿ ಶಾಸಕರಾಗಿದ್ದ ಶ್ರೀಶೈಲಪ್ಪ ಬಿದರೂರ, ರೋಣ ಕ್ಷೇತ್ರದಿಂದ 1994 ರಲ್ಲಿ ಜನತಾದಳದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. 2008 ರಲ್ಲಿ ಗದಗ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಶಾಸಕರಾಗಿದ್ದರು. ಈ ಬಾರಿ ರೋಣ ಹಾಗೂ ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.
ಮಾಜಿ ಶಾಸಕ ಶ್ರೀಶೈಲಪ್ಪ ಹೃದಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆ ಕಾಂಗ್ರೆಸ್ ನಾಯಕರು ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಗದಗ ಶಾಸಕ ಹೆಚ್.ಕೆ ಪಾಟೀಲ್ ಸೇರಿ ಉತ್ತರ ಕರ್ನಾಟಕ ಭಾಗದ ನಾಯಕರು ಆಸ್ಪತ್ರೆಗೆ ತೆರಳಿದ್ದಾರೆ. ಶ್ರೀಶೈಲಪ್ಪ ತಮ್ಮ ಬೆಂಬಲಿಗರೊಂದಿಗೆ ಟಿಕೆಟ್ ಖಾತ್ರಿ ಮಾಡಿಕೊಳ್ಳುವ ಕಾರಣಕ್ಕೆ ಬೆಂಗಳೂರಿಗೆ ಆಗಮಿಸಿದ್ದರು.
Former legislator of Gadag constituency Shrishailappa Bidarur died in a hospital in Bengaluru on Friday, following a massive attack. Bidarur was aspiring for Congress ticket for the 2023 Karnataka Assembly elections. He is learned to have been in a meeting of similar aspirants when he had the heart attack. The former legislator was immediately taken to hospital, but, failing to respond to the treatment, Bidarur died, said family sources.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm